ಫಲಿತಾಂಶದ ದಿನ ಮೈತ್ರಿ ಅಸಮಾಧಾನ ಸ್ಫೋಟ
Team Udayavani, Apr 20, 2019, 3:00 AM IST
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಬರುತ್ತಿದ್ದಂತೆ ರಾಜ್ಯ ಮೈತ್ರಿ ಸರ್ಕಾರದ ಅಸಮಾಧಾನ ಸ್ಫೋಟಗೊಂಡು, ಹಲವಾರು ಶಾಸಕರು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ, ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕದವರ ಸ್ನೇಹ ಮಿಲನ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಮೇ 23ರಂದು ಚುನಾವಣಾ ಫಲಿತಾಂಶ ಬರುತ್ತಿದ್ದಂತೆ ರಾಜ್ಯ ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಸ್ಫೋಟವಾಗುತ್ತದೆ. ಮೈತ್ರಿ ಪಕ್ಷದಲ್ಲಿನ ಹಲವಾರು ಶಾಸಕರು ಹೊರಗೆ ಬರುತ್ತಾರೆ ಎಂದರು.
ಅಂದು ಸಂಜೆಯೊಳಗೆ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರೂ ಆಶ್ಚರ್ಯವಿಲ್ಲ. ನಂತರ ಬಿಜೆಪಿ ಸರ್ಕಾರ ರಚನೆಯಾಗುತ್ತದೆ. ನಮ್ಮದು ಟೆನ್, ಟ್ವೆಂಟ್ ಪರ್ಸೆಂಟೇಜ್ ಸರ್ಜಾರ ಆಗಲ್ಲ, ಅಭಿವೃದ್ಧಿ ಪರ ಸರ್ಕಾರ ರಚನೆ ಮಾಡುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ವಿರುದ್ಧ ಯಾವುದೇ ಅಸಮಾಧಾನ ಇಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ದೆಹಲಿಗೆ ಕರೆಸಿಕೊಂಡು ಸಂಧಾನ ನಡೆಸಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಕೊನೆ ಎರಡು ದಿನಗಳು ವಿಜಯಪುರ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ಉತ್ತರ ಕರ್ನಾಟಕ ಬಿಜೆಪಿಯ ಭದ್ರಕೋಟೆ. ಹಾಗಾಗಿ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ಜನರಿಗೆ ಎರಡನೇ ಹಂತ ಮತದಾನಕ್ಕೆ ತಮ್ಮ ಸ್ಥಳಗಳಿಗೆ ತೆರಳಿ ಮತದಾನದಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ.
ಮತದಾನ ಪ್ರಮಾಣ ಶೇ.70ಕ್ಕಿಂತ ಹೆಚ್ಚಾದಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳ ಗೆಲುವು ಸಾಧ್ಯ. ಈ ನಿಟ್ಟಿನಲ್ಲಿ ಮತದಾರರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.