ಬೆಂಗಳೂರು ಅರಮನೆ ಟೆಕ್‌ ಸಮ್ಮಿಟ್‌ಗೆ ಸಜ್ಜು


Team Udayavani, Nov 15, 2017, 11:33 AM IST

bang-palace.jpg

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗುರುವಾರದಿಂದ ಮೂರು ದಿನ “ಬೆಂಗಳೂರು ತಂತ್ರಜ್ಞಾನ ಸಮ್ಮೇಳನ’ (ಬೆಂಗಳೂರು ಟೆಕ್‌ ಸಮ್ಮಿಟ್‌) ನಡೆಯಲಿದ್ದು, ದೇಶೀಯ ಮಾತ್ರವಲ್ಲದೇ ಜಾಗತಿಕ ಮಟ್ಟದ ಅತ್ಯುನ್ನತ ತಂತ್ರಜ್ಞಾನ ಪರಿಣತಿ ಸಂಸ್ಥೆಗಳೊಂದಿಗೆ ವಿಚಾರ ಮಂಥನಕ್ಕೆ ಕ್ಷಣಗಣನೆ ಶುರುವಾಗಿದೆ.

ಬೆಂಗಳೂರು ಅರಮನೆಯಲ್ಲಿ ನಡೆಯುವ ಸಮ್ಮೇಳನವು 20ನೇ ಬೆಂಗಳೂರು ಐಟಿಇ.ಬಿಜ್‌, 17ನೇ ಆವೃತ್ತಿಯ ಬೆಂಗಳೂರು ಬಯೋ ಹಾಗೂ ಬೆಂಗಳೂರು ಮೇಕರ್‌ ಫೇರ್‌ನ 3ನೇ ಆವೃತ್ತಿಯ ಸಮಾಗಮಕ್ಕೆ ಸಾಕ್ಷಿಯಾಗಿರುವುದು ಈ ಬಾರಿಯ ವಿಶೇಷ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಸಾಫ್ಟ್ವೇರ್‌ ಟೆಕ್ನಾಲಜಿ ಪಾರ್ಕ್‌ ಆಫ್ ಇಂಡಿಯಾ ಸಹಯೋಗದಲ್ಲಿ ಹಮ್ಮಿಕೊಂಡಿರುವ ಬೆಂಗಳೂರು ಟೆಕ್‌ ಸಮ್ಮಿಟ್‌- ಹೊಸ ಯೋಚನೆ, ನಾವೀನ್ಯತೆ ಹಾಗೂ ಅನ್ವೇಷಣೆ (ಐಡಿಯೇಟ್‌, ಇನ್ನೋವೇಟ್‌, ಇನ್‌ವೆಂಟ್‌) ಧ್ಯೇಯವಾಕ್ಯದೊಂದಿಗೆ ರೂಪುಗೊಂಡಿದೆ.

ದುಂಡು ಮೇಜಿನ ಸಭೆ: ಸಮ್ಮೇಳನದಲ್ಲಿ ಪ್ರತಿಷ್ಠಿತ ಕಂಪನಿಗಳ ಸಿಇಒಗಳ ದುಂಡು ಮೇಜಿನ ಸಭೆ ನಡೆಯಲಿದೆ. ಆಯ್ದ ಉದ್ಯಮ ಕ್ಷೇತ್ರದಲ್ಲಿನ ಅವಕಾಶಗಳು, ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ನಾನಾ ಕ್ಷೇತ್ರದ ತಾಂತ್ರಿಕ ತಜ್ಞರು, ಸಂಶೋಧಕರು, ಹೂಡಿಕೆದಾರರು, ನೀತಿ ನಿರೂಪಕರು ಒಂದೇ ವೇದಿಕೆಯಲ್ಲಿ ಸಂವಾದ ನಡೆಸಲಿದ್ದಾರೆ.

ಸಂವಾದ ಮಾತ್ರವಲ್ಲದೇ ಅಪರೂಪದ ತಂತ್ರಜ್ಞಾನ, ಸುಧಾರಿತ ಬೆಳವಣಿಗೆಗಳ ಬಗ್ಗೆ ಪರಿಚಯ ನೀಡಿಕೆಗೂ ಅವಕಾಶವಿರಲಿದೆ. ಸ್ಯಾಮ್‌ಸಂಗ್‌, ಐಬಿಎಂ, ಎಬಿಬಿ, ನ್ಯಾಸ್ಕಾಂ, ವೋಲ್ವೋ ಇಂಡಿಯಾ, ಜಿಇ ಏವಿಯೇಷನ್‌ ಇತರೆ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನವೂ ನಡೆಯಲಿದೆ ಎಂದು ಇಲಾಖೆ ಹೇಳಿದೆ.

ಒಂದೇ ವೇದಿಕೆ: ನಾನಾ ಕ್ಷೇತ್ರದಲ್ಲಿ ತಾಂತ್ರಿಕ ಪರಿಣತಿ ಗಳಿಸಿರುವ ಕಂಪನಿಗಳ ನಡುವೆ ಉತ್ತಮ ಸಂವಹನವಿದ್ದರೆ ಹೆಚ್ಚು ಅನುಕೂಲವಾಗಲಿದೆ. ಈ ವಾತಾವರಣ ಸೃಷ್ಟಿಗಾಗಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನವನ್ನು ಒಂದೇ ವೇದಿಕೆಯಡಿ ತರಲಾಗಿದೆ ಎಂದು ಐಟಿಬಿಟಿ ಸಚಿವ ಪ್ರಿಯಾಂಗ್‌ ಖರ್ಗೆ ತಿಳಿಸಿದರು.

ಕರ್ನಾಟಕವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದಂತೆ ಅನ್ವೇಷಣಾ ವಲಯದಲ್ಲೂ ಪ್ರಾವೀಣ್ಯತೆ ಗಳಿಸುವ ನಿಟ್ಟಿನಲ್ಲಿ ಐಟಿ ಸಮ್ಮಿಟ್‌ ಸಹಯಕಾರಿಯಾಗಲಿದೆ. ಆ ಮೂಲಕ ಮುಂದಿನ 10 ವರ್ಷಗಳಲ್ಲಿ ಕರ್ನಾಟಕ ತಂತ್ರಜ್ಞಾನ ಬೆಳವಣಿಗೆಗೆ ಆಯ್ಕೆ ಮಾಡಿಕೊಳ್ಳಬೇಕಾದ ಹಾದಿಯ ಬಗ್ಗೆ ಸ್ಪಷ್ಟತೆ ಪಡೆದುಕೊಳ್ಳಲು ನೆರವಾಗಲಿದೆ ಎಂದು ಹೇಳಿದರು. ಸಂಶೋಧಕರು, ನೀತಿ ನಿರೂಪಕರು ಆಯ್ದ ವಿಭಾಗಗಳಲ್ಲಿ ಒಟ್ಟಿಗೆ ಕಾರ್ಯ ನಿರ್ವಹಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.