3 ತಿಂಗಳಲ್ಲಿ ಹಾರಿದವರು 80 ಲಕ್ಷ ಮಂದಿ


Team Udayavani, Aug 7, 2018, 12:03 PM IST

KGF-01_0.jpg

ಬೆಂಗಳೂರು: ದಕ್ಷಿಣ ಭಾರತದ ಅತಿ ಹೆಚ್ಚು ವಿಮಾನಗಳ ಸಂಚಾರದಟ್ಟಣೆ ಹೊಂದಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಸಕ್ತ ಸಾಲಿನ ಮೊದಲ ತ್ತೈಮಾಸಿಕ ಫ‌ಲಿತಾಂಶ ಪ್ರಕಟಗೊಂಡಿದ್ದು, ಈ ಅವಧಿಯಲ್ಲಿ ಪ್ರಯಾಣಿಕರು ಮತ್ತು ವಿಮಾನಗಳ ಸಂಚಾರದಲ್ಲಿ ಶೇ. 32.9ರಷ್ಟು ಪ್ರಗತಿ ಸಾಧಿಸಿದೆ.

ಮೊದಲ ಮೂರು ತಿಂಗಳಲ್ಲಿ (ಏಪ್ರಿಲ್‌-ಜೂನ್‌) ಈ ವಿಮಾನ ನಿಲ್ದಾಣದ ಮೂಲಕ 80ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಕಳೆದ ವರ್ಷದ ಇದೇ ಅವಧಿಯಲ್ಲಿ 60 ಲಕ್ಷ ಪ್ರಯಾಣಿಕರು ಸಂಚರಿಸಿದ್ದರು. ಈ ತ್ತೈಮಾಸಿಕದ ಕೊನೆಯ ದಿನ ಅಂದರೆ ಜೂನ್‌ 30 ಅತಿಹೆಚ್ಚು ಪ್ರಯಾಣಿಕರ ದಟ್ಟಣೆ ಇರುವ ದಿನವಾಗಿದ್ದು, ಒಂದೇ ದಿನದಲ್ಲಿ 98,869 ಜನ ಪ್ರಯಾಣಿಸಿದ್ದಾರೆ.

ಅದೇ ರೀತಿ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆ ಕಂಡುಬಂದಿದ್ದು, ಕ್ರಮವಾಗಿ ಶೇ. 35.08 ಹಾಗೂ ಶೇ. 16.08ರಷ್ಟು ವೃದ್ಧಿಯಾಗಿದೆ. ಇನ್ನು ಮೊದಲ ತ್ತೈಮಾಸಿಕದಲ್ಲಿ ಸಂಚರಿಸಿದ ಒಟ್ಟಾರೆ 80 ಲಕ್ಷ ಜನರಲ್ಲಿ 10.08 ಲಕ್ಷ ಅಂತಾರಾಷ್ಟ್ರೀಯ ಹಾಗೂ 6.94 ಲಕ್ಷ ದೇಶೀಯ ಪ್ರಯಾಣಿಕರಾಗಿದ್ದಾರೆ.

ವಿಮಾನಗಳ ಹಾರಾಟದಲ್ಲೂ ಶೇ. 32.9ರಷ್ಟು ಏರಿಕೆಯಾಗಿದ್ದು, 58,054 ವಿಮಾನಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಾರ್ಯಾಚರಣೆ ನಡೆಸಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 43,673 ವಿಮಾನಗಳು ಹಾರಾಟ ನಡೆಸಿದ್ದವು. ಮೇ 4ರಂದು ಅತ್ಯಧಿಕ ವಿಮಾನಗಳ ಸಂಚಾರದಟ್ಟಣೆ ಇತ್ತು. ಅಂದು ಒಂದೇ ದಿನ 685 ವಿಮಾನಗಳು ಆಗಮನ-ನಿರ್ಗಮನ ಆಗಿವೆ.

ಸರಕು-ಸಾಗಣೆಯಲ್ಲೂ ವೃದ್ಧಿ:  ಸರಕು ಸಾಗಣೆಯಲ್ಲಿ ಶೇ. 16.6 ಪ್ರಗತಿ ಸಾಧಿಸಿದೆ. ಮೂರು ತಿಂಗಳಲ್ಲಿ 97,476 ಮೆಟ್ರಿಕ್‌ ಟನ್‌ ಸರಕು ಸಾಗಣೆ ಮಾಡಲಾಗಿದೆ. ಈ ಪೈಕಿ ಜೂನ್‌ ತಿಂಗಳಲ್ಲೇ 34,398 ಮೆಟ್ರಿಕ್‌ ಟನ್‌ನಷ್ಟು ಸರಕು ವಿಮಾನಗಳಲ್ಲಿ ಸಾಗಣೆಯಾಗಿದೆ.

2017ರ ಮೊದಲ ತ್ತೈಮಾಸಿಕದಲ್ಲಿ 83,584 ಮೆಟ್ರಿಕ್‌ ಟನ್‌ಗಳಷ್ಟು ಸರಕು ಸಾಗಣೆ ಮಾಡಲು ಸಾಧ್ಯವಾಗಿತ್ತು. ಎಂಟು ದೇಶೀಯ ಮತ್ತು 25 ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಒಟ್ಟಾರೆ 67 ಕಡೆಗಳಲ್ಲಿ ಸಂಪರ್ಕ ಕಲ್ಪಿಸಿವೆ ಎಂದು ಬಿಐಎಎಲ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.