500 ಕಡೆ ಶೀಘ್ರ ಆಕ್ಸಿಜನ್‌ ಜನರೇಟರ್‌


Team Udayavani, May 22, 2021, 2:06 PM IST

Oxygen Generator

ಬೆಂಗಳೂರು:18ರಿಂದ44 ವರ್ಷ ವಯೋಮಿತಿಯೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ಇಂದಿನಿಂದ (ಮೇ 22) ಕೋವಿಡ್‌ ಲಸಿಕೆಕೊಡಲಾಗುವುದು. ಒಂದೆರಡು ತಿಂಗಳಲ್ಲಿ ರಾಜ್ಯದ 500 ಕಡೆ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ರಾಜ್ಯಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಸಿಕೆ ನೀಡಲು ಅದರ ಮೇಲೆವ್ಯವಸ್ಥಿತ ನಿಗಾ ಇರಿಸಲು ಪ್ರತ್ಯೇಕ ಸಾಫ್ಟ್ವೇರ್‌ಅಭಿವೃದ್ಧಿ ಮಾಡಲಾಗಿದ್ದು, ಅದನ್ನು ಕೋವಿನ್‌ಪೋರ್ಟಲ್‌ ಜತೆ ಲಿಂಕ್‌ ಮಾಡಲಾಗುತ್ತಿದೆ. ಜೂನ್‌ 1ರಿಂದ ಈ ಪೋರ್ಟಲ್‌ ಕೆಲಸಮಾಡಲಿದೆ ಎಂದರು.

ರಾಜ್ಯದಲ್ಲಿ 1,90,000 ಜನರಿಗೆ ಈಗಕೊವ್ಯಾಕ್ಸಿನ್‌ ಸೆಕೆಂಡ್‌ ಡೋಸ್‌ ಕೊಡಬೇಕಿದೆ.ಇದರಲ್ಲಿ 1,70,000 ಕೊವ್ಯಾಕ್ಸಿನ್‌ ಲಸಿಕೆಸಿದ್ಧವಿದ್ದು, ಈಗಾಗಲೇಕೊಡಲು ಪ್ರಾರಂಭಿಸಲಾಗಿದೆ. ಕೋವಿಶೀಲ್ಡ್  ಕೂಡ ಸ್ಟಾಕ್‌ ಇದೆ. ಲಸಿಕೆಅಭಿಯಾನ ತೀವ್ರಗೊಳಿಸಲು ಮುಂಚೂಣಿಯಕಾರ್ಯಕರ್ತರ ಪಡೆ ಸಂಖ್ಯೆಯನ್ನುಹೆಚ್ಚಿಸಲಾಗುತ್ತಿದ್ದು, ಆದ್ಯತೆಯ ಮೇಲೆಅವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ ಎಂದುಮಾಹಿತಿ ನೀಡಿದರು.

ಶನಿವಾರದಿಂದ ಮಾಧ್ಯಮ ಸಿಬ್ಬಂದಿ,ಚಿತಾಗಾರ ಸಿಬ್ಬಂದಿ, ವಿಕಲಚೇತನರು, ಆರೋಗ್ಯಕಾರ್ಯಕರ್ತರು ಮತ್ತವರ ಕುಟುಂಬಸದಸ್ಯರು,ಕೋವಿಡ್‌ ಕೆಲಸಕ್ಕೆ ನಿಯೋಜನೆಗೊಂಡಿರುವಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ವಿದ್ಯುತ್‌ಮತ್ತು ನೀರು ಪೂರೈಕೆ ಸಿಬ್ಬಂದಿಗೆ ವ್ಯಾಕ್ಸಿನ್‌ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.500 ಆಕ್ಸಿಜನ್‌ ಜನರೇಟರ್‌: ಒಂದೆರಡುತಿಂಗಳಲ್ಲಿಯೇ ರಾಜ್ಯದ ಎಲ್ಲೆಡೆ 400ರಿಂದ 500ಆಕ್ಸಿಜನ್‌ ಜನರೇಟರ್‌ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಮುದಾಯ ಆರೋಗ್ಯ ಕೇಂದ್ರಹಾಗೂತಾಲೂಕುಆಸ್ಪತ್ರೆಗಳಲ್ಲಿಸ್ಥಾಪಿಸಲಾಗುವುದು.ಅಲ್ಲಿಯೂ ಐಸಿಯುಗಳನ್ನು ಹಾಕುತ್ತಿದ್ದೇವೆ ಎಂದು ಹೇಳಿದರು.

ಬ್ಲ್ಯಾಕ್ ‌ಫಂಗಸ್‌ಗೆ ಔಷಧಿ: ಬ್ಲ್ಯಾಕ್ ‌ಫಂಗಸ್‌ಬೇರೆ ರಾಜ್ಯಗಳಲ್ಲಿ ಮೊದಲು ಕಂಡು ಬಂದಿತ್ತು.ನಮ್ಮಲ್ಲಿ ಈಗ ಕಂಡುಬಂದಿದೆ. ಈಗ ಒಂದುನಿರ್ದಿಷ್ಟ ಔಷಧಿಗೆ ಬೇಡಿಕೆ ಬಂದಿದೆ. ಆದರೆ,ಇದಕ್ಕೆ ಹಲವಾರು ಔಷಧಿಗಳಿದ್ದರೂ ಜನರುಮಾತ್ರ ಭಿಲೈಸೋಸೋಮಲ್‌ ಅಮಪೋಟೆರಿಸನ್‌ಭಿ ಔಷಧಿಯನ್ನೇ ಕೇಳುತ್ತಿದ್ದಾರೆ.

ಭಿಲೈಸೋಸೋಮಲ್‌ ಅಮಪೋಟೆರಿಸನ್‌-ಭಿಸೇರಿ ಪರ್ಯಾಯ ಔಷಧ ಇದ್ದರೂ ಜನರುಅದಕ್ಕೇ ಮುಗಿಬೀಳುತ್ತಿದ್ದಾರೆ. ಮೆಡಿಕಲ್‌ಸ್ಟೋರ್‌ಗಳಲ್ಲಿಯೂ ಪರ್ಯಾಯ ಔಷಧಿಗಳುಸಿಗುತ್ತಿವೆ. ಈ ತಿಂಗಳ 14ರಂದು ಭಿಲೈಸೋಸೋಮಲ್‌ ಅಮಪೋಟೆರಿಸನ್‌ಭಿ ಔಷಧಿಗೆಬೇಡಿಕೆ ಸಲ್ಲಿಸಿದ್ದೇವೆ ಎಂದರು.

ಔಷಧ ಹಂಚಿಕೆಯಲ್ಲಿ ತಾರತಮ್ಮ ಇಲ್ಲ: ರಾಜ್ಯಕ್ಕೆಔಷಧಿ ಹಂಚಿಕೆಯಲ್ಲಿ ಕೇಂದ್ರ ಸರಕಾರತಾರತಮ್ಯ ಎಸಗಿದೆ ಎಂಬ ಆರೋಪವನ್ನುತಳ್ಳಿಹಾಕಿದ ಡಾ.ಅಶ್ವತ್ಥನಾರಾಯಣ, ಮಹಾರಾಷ್ಟ್ರ, ಗುಜರಾತ್‌ ಮುಂತಾದ ರಾಜ್ಯಗಳಲ್ಲಿ ಜನವರಿಯಿಂದಲೇ 2ನೇ ಅಲೆ ಆರಂಭವಾಯಿತು. ರಾಜ್ಯದಲ್ಲಿ ಏಪ್ರಿಲ್‌ನಿಂದ ಶುರುವಾಯಿತು. ಅಲ್ಲೆಲ್ಲ ಸೋಂಕಿತರು ಹೆಚ್ಚಾದ ಕಾರಣ ಮೊದಲು ಆದ್ಯತೆಯ ಮೇರೆಗೆ ಔಷಧಿ,ಆಕ್ಸಿಜನ್‌, ರೆಮ್‌ಡೆಸಿವಿಯರ್‌ಗಳನ್ನು ಕೇಂದ್ರ ಆರಾಜ್ಯಗಳಿಗೆ ಪೂರೈಕೆ ಮಾಡಿತು ಎಂದರು.

ಸುದ್ದಿಗೋಷ್ಠಿಯಲ್ಲಿ  ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಯಲಹಂಕ  ಶಾಸಕ ಮತ್ತು ಬಿಡಿಎ ಅಧ್ಯಕ್ಷಎಸ್‌.ಆರ್‌.ವಿಶ್ವನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.