ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದು

Team Udayavani, Mar 20, 2024, 9:59 AM IST

ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಕೋವಿಡ್‌-19 ಲಾಕ್‌ಡೌನ್‌ ಸಮಯ ದಲ್ಲಿ 2020ರ ಏಪ್ರಿಲ್‌ 19ರಂದು ನಗರದ ಪಾದರಾಯ ನಪುರದಲ್ಲಿ ನಡೆದ ಗಲಭೆ ಸಂಬಂಧ 375 ಮಂದಿ ವಿರುದ್ಧದ ಪ್ರಕರಣವನ್ನು ಪಾದರಾಯನಪುರ ಗಲಭೆ: 375 ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ನವಾಜ್‌ ಪಾಷಾ ಮತ್ತಿತರರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾ.ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಕ್ರಮವಾಗಿ ಗುಂಪು ಸೇರಿ ಪಾಲಿಕೆ ಅ ಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಿಸಲಾಗಿದ್ದ ಪ್ರಕರಣಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಸಾಕ್ಷಿಗಳ ಹೇಳಿಕೆಗಳನ್ನು ಒಂದೇ ರೀತಿಯಲ್ಲಿ ದಾಖಲಿ ಸಲಾಗಿದೆ. ಪೊಲೀಸರು 120 ಕ್ಕೂ ಅಧಿಕ ಮಂದಿ ವಿರುದ್ಧ ಕೇಸುಗಳನ್ನು ದಾಖಲಿಸಿದ್ದರೂ ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ, ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ. ಅಲ್ಲದೆ, ಭಾರತೀಯ ದಂಡ ಸಂಹಿತೆ ಸೆಕ್ಷನ್‌ 172ರಿಂದ 188 ರವರೆಗೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ ಉಲ್ಲಂಘಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸಕ್ಷಮ ಪ್ರಾಧಿಕಾರ ದೂರು ದಾಖಲಿಸಿಲ್ಲ. ಜತೆಗೆ ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್‌ಡೌನ್‌ ಮಾಡಲು ಹೋದಾಗ 51 ಜನರಿಗೆ ಕೋವಿಡ್‌ ಸೋಂಕು ದೃಢ ಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಆ ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರ ಗಳನ್ನು ಆರೋಪಪಟ್ಟಿಯಲ್ಲಿ ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಬಿಎಂಪಿ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್‌ಡೌನ್‌ ಮಾಡಲು ಮುಂದಾದಾಗ ಅಲ್ಲಿನ ಜನರು ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದೆಂದು ಪ್ರತಿರೋಧ ಮಾಡಿರಬ ಹುದು, ಆಗ ಒಂದು ರೀತಿಯ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು. ಜತೆಗೆ ಮ್ಯಾಜಿಸ್ಟ್ರೇಟ್‌ ಐಪಿಸಿ ಸೆಕ್ಷನ್‌ 188ರಡಿ ಕಾಗ್ನಿಜೆನ್ಸ್‌ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ, ಕಾಗ್ನಿಜೆನ್ಸ್‌ ತೆಗೆದುಕೊಂಡು ಮುಂದುವರಿದಿರುವುದು ಸರಿಯಲ್ಲ, ಹಾಗಾಗಿ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸ ಲಾಗುವುದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಿದ್ದ ಹೆಚ್ಚುವರಿ ಎಸ್‌ಪಿಪಿ ಬಿ.ಎನ್‌.ಜಗದೀಶ್‌, 2020ರ ಏ.19ರಂದು ಸಂಜೆ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್‌ ಸೋಂಕು ತಗುಲಿದ್ದ 58 ಮಂದಿಯನ್ನು ವಶಕ್ಕೆ ತೆಗೆದಕೊಳ್ಳಲು ಪಾದರಾಯನಪುರದಲ್ಲಿ ಹೋಗಿದ್ದಾಗ ಅಲ್ಲಿ ಅಕ್ರಮವಾಗಿ ಗುಂಪು ಸೇರಿದ್ದವರು ಕೈಯಲ್ಲಿ ಚಾಕು, ದೊಣ್ಣೆ ಮತ್ತು ರಾಡ್‌ಗಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಆರೋಪಿಗಳು ಚೇರು, ಟೇಬಲ್‌ಗ‌ಳನ್ನು ಒಡೆದು ಟೆಂಟ್‌ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹಾಗಾಗಿ ಪ್ರಕರಣ ದಾಖಲಿಸಲಾಗಿತ್ತು ಎಂದು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರ ಪರ ವಕೀಲರು, ಅರ್ಜಿದಾರರಿಗೂ ಪ್ರಕರಣಕ್ಕೂ ಸಂಬಂಧವಿಲ್ಲ. ಅವರ ಮನೆಗಳು ಬೇರೆ ಕಡೆ ಇವೆ. ನಿಜ ವಾದ ಆರೋಪಿಗಳನ್ನು ಗುರುತಿಸದೆ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್‌ ಹಾಕಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿತರ ಪಟ್ಟಿಯೇ ಇರಲಿಲ್ಲ, ಗಲಭೆ ನಡೆದಿದೆ ಎನ್ನಲಾಗಿದೆ. ಆದರೆ, ಯಾರೊಬ್ಬರಿಗೂ ಗಾಯವಾಗಿಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ನ್ಯಾಯಪೀಠವನ್ನು ಕೋರಿದ್ದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.