ಡಿ.16ರಿಂದ ಬೆಂಬಲ ಬೆಲೆಯಡಿ ಭತ್ತ ಖರೀದಿ
Team Udayavani, Nov 25, 2018, 6:00 AM IST
ಬೆಂಗಳೂರು: ಭತ್ತ ಹಾಗೂ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಡಿಸೆಂಬರ್ 16ರಿಂದ ಭತ್ತ ಖರೀದಿ ಕೇಂದ್ರ ಆರಂಭಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಶನಿವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಭತ್ತ ಬೆಂಬಲ ಬೆಲೆಯಡಿ ಖರೀದಿ ಮಾಡುವುದು. ಈರುಳ್ಳಿ ಬೆಳೆಗಾರರರಿಗೆ ಬೆಂಬಲ ಬೆಲೆ ಅಥವಾ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್‌ನಲ್ಲಿ ಭತ್ತ ಬಿತ್ತನೆ ಆಗಿದ್ದು, 45 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ನಿರೀಕ್ಷೆ ಇದೆ “ಭತ್ತ ಖರೀದಿ ಮಾಡಬೇಕೆಂದು ರೈತರ ಬೇಡಿಕೆ ಇದು. ಕೇಂದ್ರ ಸರ್ಕಾರವು ಎಂಎಸ್‌ಪಿ ಅಡಿಯಲ್ಲಿ 2 ಲಕ್ಷ ಮೆಟ್ರಿಕ್ ಟನ್ ಖರೀದಿಸಲು ಅನುಮತಿ ನೀಡಿದೆ ಎಂದು ಹೇಳಿದರು.
“ಭತ್ತ ಖರೀದಿಸಲು ಕಾರ್ಯಪಡೆ ರಚಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೆ ಸೂಚನೆ ನೀಡಲಾಗಿದೆ. ಹಾಗೆಯೇ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಲು ಇಚ್ಛಿಸುವ ರೈತರಿಗೆ ಡಿಸೆಂಬರ್ 5ರಿಂದ 15ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. 16ರಿಂದ ಖರೀದಿ ಆರಂಭಿಸಲಾಗುತ್ತದೆ’ ಎಂದು ತಿಳಿಸಿದರು.
“ಸಾಮಾನ್ಯ ಭತ್ತ ಮಾರುಕಟ್ಟೆಯಲ್ಲಿ 1300 ರೂ.ನಿಂದ 1400 ರೂ. ವರೆಗೆ ಮಾರಾಟವಾಗುತ್ತಿದೆ. ಬೆಂಬಲ ಬೆಲೆಯಂತೆ 1750 ರೂ.ಗೆ ಖರೀದಿಸಲಾಗುತ್ತದೆ. ಇದೇ ಮೊದಲ ಬಾರಿಗೆ ಖರೀದಿ ಕೇಂದ್ರವನ್ನು ರೈಸ್ ಮಿಲ್‌ಗಳಲ್ಲೇ ಆರಂಭಿಸಲಾಗುತ್ತದೆ. ಅಲ್ಲಿಂದಲೇ ಅಕ್ಕಿ ಪಡಿತರ ವಿತರಣೆಗಾಗಿ ಗೋದಾಮಿಗೆ ರವಾನಿಸಲಾಗುತ್ತದೆ ಎಂದು ಹೇಳಿದರು.
“ಜನವರಿ ಒಂದರಿಂದ ಖರೀದಿ ಆರಂಭಿಸಬೇಕೆಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ರಾಜ್ಯ ಸರ್ಕಾರ ರೈತರ ಹಿತದೃಷ್ಟಿಯಿಂದ ಮುಂಚಿತವಾಗಿಯೇ ಆರಂಭಿಸುತ್ತಿದೆ. ಪಡಿತರ ಅಕ್ಕಿ ವಿಚಾರವಾಗಿ ಆಹಾರ ಇಲಾಖೆ ಆಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಲಾಗಿದೆ ಎಂದರು.
ಈರುಳ್ಳಿಗೂ ನೆರವು
ಈರುಳ್ಳಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು, ಅವರ ನೆರವಿಗೆ ಬರಲು ಸರ್ಕಾರ ತೀರ್ಮಾನಿಸಿದೆ. ಪ್ರೋತ್ಸಾಹ ಧನ ನೀಡುವುದೋ ಅಥವಾ ಬೆಂಬಲ ಬೆಲೆಯಡಿ ಖರೀದಿ ಮಾಡುವುದೋ ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ ಎಂದು ಹೇಳಿದರು.
ಮಾವು ಬೆಲೆ ಕುಸಿದಾಗ ನೀಡಿದಂತೆ ಬೆಂಬಲ ನೀಡಬೇಕೋ ಅಥವಾ ಸ್ಲಾಬ್ ಮಾದರಿಯಲ್ಲಿ ಪರಿಹಾರ ಧನ ನೀಡಬೇಕೋ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.
ಮಾರುಕಟ್ಟೆಯಲ್ಲಿ ಒಳ್ಳೆಯ ಈರುಳ್ಳಿಗೆ ಬೆಲೆ ಇದೆ. ಉಳಿದಂತೆ ಕ್ವಿಂಟಾಲ್‌ಗೆ 700-800 ರೂ. ಮಾರಾಟವಾಗುತ್ತಿದೆ. ಕೆಲವೆಡೆ 300-400 ರೂ. ಮಾರಾಟವಾಗುತ್ತಿದೆ. ಸರ್ಕಾರ ಈರುಳ್ಳಿ ರೈತರ ನೆರವಿಗೆ ಬರಲಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ನಿಗದಿ ಮಾಡಿದ್ದ 28 ಸಾವಿರ ಮೆಟ್ರಿಕ್ ಟನ್ ಗೂ ಮೀರಿ ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ಮಾಡಲಾಗಿದೆ. ಇನ್ನೂ ರೈತರ ಬಳಿ ಹೆಸರು ಬಾಕಿ ಉಳಿದಿದ್ದು, ಹೀಗಾಗಿ ಮತ್ತಷ್ಟು ಪ್ರಮಾಣದಲ್ಲಿ ಖರೀದಿಸಲು ಅವಕಾಶ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಉದ್ದು ಮತ್ತು ಸೋಯಾ ಖರೀದಿಗೆ ಅವಕಾಶ ಇದ್ದರೂ ಹೆಚ್ಚು ನೋಂದಣಿ ಆಗಿಲ್ಲ. ಭಾನುವಾರದಿಂದ ಖರೀದಿ ಆರಂಭವಾಗುತ್ತಿದ್ದು, ನೋಂದಣಿ ಅವಕಾಶವನ್ನು ಇನ್ನೂ ಹತ್ತು ದಿನ ಮುಂದುವರಿಸಲು ತೀರ್ಮಾನಿಸಲಾಯಿತು.
ತೊಗರಿ ಬೆಳೆ ಡಿಸೆಂಬರ್‌ನಲ್ಲಿ ಬರುತ್ತದೆ, 15ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದು, 11.34 ಲಕ್ಷ ಮೆಟ್ರಿಕ್ ಟನ್ ಇಳುವರಿ ನಿರೀಕ್ಷೆ ಇದೆ. ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 4300 ರೂ. ಇದ್ದು, ಸರ್ಕಾರ 5675 ರೂ. ಬೆಂಬಲ ಬೆಲೆ ನೀಡಿ ಖರೀದಿಸಲು ನಿರ್ಧರಿಸಲಾಗಿದೆ. ಜೋಳ ಕೆಎಂಎಫ್ ಖರೀದಿಸಲಿದೆ ಎಂದು ವಿವರಿಸಿದರು.
ಸಹಕಾರ ಇಲಾಖೆಯಲ್ಲಿ ಸಾಧನೆಯಾಗಿಲ್ಲ ಎಂದು ಯಡಿಯೂರಪ್ಪ ಟೀಕೆ ಮಾಡಿದ್ದಾರೆ. ನಮ್ಮದು ಉದರಿ ಸರ್ಕಾರವಲ್ಲ, ನಗದು ಸರ್ಕಾರ. ಇಲಾಖೆ ಸಾಧನೆ ಆಗಿಲ್ಲ ಎಂದರೆ ದಾಖಲೆ ತೋರಿಸಲಿ ಚರ್ಚೆಗೆ ನಾನು ಸಿದ್ಧ. ಯಡಿಯೂರಪ್ಪ ಹಿರಿಯರು. ಆವರ ಪಕ್ಷದಿಂದ ಕಿರಿಯರನ್ನೇ ಚರ್ಚೆಗೆ ಕಳುಹಿಸಲಿ.
– ಬಂಡೆಪ್ಪ ಕಾಶೆಂಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.