“ಪೈಲ್ವಾನ್’ ಚಿತ್ರ ಲಿಂಕ್ ಕದ್ದಿದ ಆರೋಪಿ ಬಂಧನ
Team Udayavani, Sep 21, 2019, 3:05 AM IST
ಬೆಂಗಳೂರು: ನಟ ಸುದೀಪ್ ನಾಯಕ ನಟನಾಗಿ ನಟಿಸಿರುವ “ಪೈಲ್ವಾನ್’ ಸಿನಿಮಾದ ಲಿಂಕ್ನನ್ನು ತನ್ನ ಫೇಸ್ಬುಕ್ನಲ್ಲಿ ಶೇರ್ ಮಾಡಿ ಸ್ನೇಹಿತರಿಗೆ ಲಿಂಕ್ ಕಳುಹಿಸಿಕೊಟ್ಟ ಆರೋಪಿಯನ್ನು ನಗರ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ರಾಕೇಶ್ ಎಲ್. ಬಂಧಿತ ಆರೋಪಿ. ಕಾಪಿರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗೆ ಚಿತ್ರದ ಲಿಂಕ್ ಎಲ್ಲಿಂದ ಸಿಕ್ಕಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಟಿಎ ಮುಗಿಸಿರುವ ರಾಕೇಶ್, ಸೆ.12ರಂದು ಬಿಡುಗಡೆಯಾದ ಪೈಲ್ವಾನ್ ಪೂರ್ತಿ ಸಿನಿಮಾದ ಲಿಂಕ್ ಅನ್ನು ಅದೇ ದಿನ ತನ್ನ ಫೇಸ್ಬುಕ್ ಪೇಜ್ನಲ್ಲಿ ಶೇರ್ ಮಾಡಿ, ಸ್ನೇಹಿತರು ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದ್ದ. ಜತೆಗೆ ತನ್ನ ಇಬ್ಬರು ಸ್ನೇಹಿತರಿಗೆ ಲಿಂಕ್ ಕಳುಹಿಸಿಕೊಟ್ಟಿದ್ದ. ಅಲ್ಲದೇ ಚಿತ್ರದ ಲಿಂಕ್ ಬೇಕಿದ್ದರೆ ಮೆಸೆಂಜರ್ ಮೂಲಕ ಸಂಪರ್ಕಿಸುವಂತೆಯೂ ಬರೆದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೈಲ್ವಾನ್ ಚಿತ್ರದ ಲಿಂಕ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಕಾಪಿರೈಟ್ ಉಲ್ಲಂಘನೆ ಹಗೂ ಚಿತ್ರಕ್ಕೆ ನಷ್ಟವುಂಟು ಮಾಡಿದ ಬಗ್ಗೆ ಚಿತ್ರದ ನಿರ್ಮಾಪಕರು ನೀಡಿದ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ಚುರುಕುಗೊಳಿಸಿದ ಇನ್ಸ್ಪೆಕ್ಟರ್ ಯಶವಂತ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.