ಪಾಲಿಕೆಗೆ 50 ಸಾವಿರ ರೂ. ದಂಡ
Team Udayavani, Feb 24, 2018, 12:47 PM IST
ಬೆಂಗಳೂರು: ವಾರ್ಡ್ ಸಮಿತಿ ಸಭೆಗಳನ್ನು ನಡೆಸಲು ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳಲು ವಿಫಲವಾಗಿರುವ ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಬಿಬಿಎಂಪಿಗೆ 50 ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.
ಘನತ್ಯಾಜ್ಯ ನಿರ್ವಹಣೆ, ವಾರ್ಡ್ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾ.ಬಿ.ಎಸ್. ಪಾಟೀಲ್ ಹಾಗೂ ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿತು.
ನಗರದ ಎಲ್ಲ ವಾರ್ಡ್ ಸಮಿತಿಗಳು ತಿಂಗಳಿಗೊಂದು ಸಭೆ ನಡೆಸಬೇಕು. ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚುವರಿ ಸ್ಥಳ ಗುರುತಿಸಿ, ಕ್ರಿಯಾಯೋಜನೆ ರೂಪಿಸಬೇಕು. ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಜನರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಈ ಹಿಂದೆ ನೀಡಿದ್ದ ಆದೇಶ ಪಾಲನೆಯಾಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ದೂರಿದರು.
ಆಯುಕ್ತರಿಗೆ ಎಚ್ಚರಿಕೆ: 130 ವಾರ್ಡ್ ಸಮಿತಿಗಳು ನ್ಯಾಯಾಲಯದ ಆದೇಶ ಉಲ್ಲಂ ಸಿರುವುದನ್ನು ಖಚಿತಪಡಿಸಿಕೊಂಡ ನ್ಯಾಯಪೀಠ, ತೀವ್ರ ತರಾಟೆ ತೆಗೆದುಕೊಂಡಿತು. ನ್ಯಾಯಾಲಯದ ಆದೇಶಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಾದರೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕಾಗುತ್ತದೆ.
ಆದೇಶ ಉಲ್ಲಂ ಸಿರುವ ವಾರ್ಡ್ ಸಮಿತಿ ಅಧಿಕಾರಿಗಳು, ಜಂಟಿ ಆಯುಕ್ತರು, ವಾರ್ಡ್ ಸಮಿತಿಯಲ್ಲಿರುವ ಜನಪ್ರತಿನಿಧಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಪಾಲಿಕೆ ಆಯುಕ್ತರ ವಿರುದ್ಧವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಆದೇಶ ಉಲ್ಲಂಘನೆ ಸಂಬಂಧ ಬಿಬಿಎಂಪಿ ಆಯುಕ್ತರು 50 ಸಾವಿರ ರೂ. ದಂಡವನ್ನು ಹೈಕೋರ್ಟ್ ರಿಜಿಸ್ಟ್ರಾರ್ ಬಳಿ ಠೇವಣಿಯಿಡಬೇಕು. ತಪ್ಪಿತಸ್ಥರ ವಿರುದ್ಧ ಕೈಗೊಂಡಿರುವ ಕ್ರಮಗಳು ಹಾಗೂ ವಾರ್ಡ್ ಸಮಿತಿಗಳ ಕಾರ್ಯನಿರ್ವಹಣೆ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ಸಹಿತ ಅಫಿಡವಿಟ್ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾ.28ಕ್ಕೆ ಮುಂದೂಡಿತು.
ಕಾನೂನು ಉಲ್ಲಂ ಸುವವರೇ ತುಂಬಿದ್ದಾರೆ!: ನಗರದ 198 ವಾರ್ಡ್‌ಗಳ ಪೈಕಿ 68 ವಾರ್ಡ್ ಸಮಿತಿಗಳು ಸಭೆ ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸಿವೆ. ಈ ಪೈಕಿ 64 ಸಮಿತಿಗಳ ವರದಿಗಳು ಅಪೂರ್ಣವಾಗಿದ್ದು, 4 ವಾರ್ಡ್‌ಗಳಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸ್ಥಳಾವಕಾಶ ಸಿಗುತ್ತಿಲ್ಲ. ಇನ್ನು 130 ವಾರ್ಡ್ ಸಮಿತಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಕಸದ ಸಮಸ್ಯೆಯಿಂದ ನಾಗರಿಕರಿಗಾಗುವ ತೊಂದರೆ ತಪ್ಪಿಸಲು ಕೋರ್ಟ್ ಕೂಡ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಆದರೆ ಬಿಬಿಎಂಪಿಯಿಂದ ಸ್ಪಂದನೆಯೇ ಇಲ್ಲ. ಕೋರ್ಟ್ ಆದೇಶಗಳನ್ನು ಉಲ್ಲಂ ಸುವ ವರ್ತನೆ ಸಹಿಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಹಾಗೇ ಬೆಂಗಳೂರಲ್ಲಿ ಕಾನೂನು ಉಲ್ಲಂ ಸುವವರೇ ತುಂಬಿಹೋಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.