ವಿಧಾನಸೌಧದಲ್ಲಿ ಪರಮೇಶ್ವರ್ ವಾಸ್ತುಪೂಜೆ
Team Udayavani, Jun 4, 2018, 6:15 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 327 ಹಾಗೂ 328ರಲ್ಲಿ ಭಾನುವಾರ ವಾಸ್ತುಪೂಜೆ ಮಾಡಿರುವುದುಕುತೂಹಲ ಮೂಡಿಸಿದೆ. ಪರಮೇಶ್ವರ್ ಹಾಗೂ ಪತ್ನಿ ಕನ್ನಿಕಾ ಅವರು ಅರ್ಚಕರ ಜತೆ ಆಗಮಿಸಿ, ಎರಡು ಗಂಟೆಗೂ ಹೆಚ್ಚು ಕಾಲ ಪೂಜೆ, ಹೋಮ, ಹವನ ನಡೆಸಿದರು.
ಈ ಸಂದರ್ಭದಲ್ಲಿ ಯಾರನ್ನೂ ಒಳಗೆ ಬಿಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಹೇಳಲಾಗಿದೆ. ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಡಾ.ಜಿ.ಪರಮೇಶ್ವರ್ ಅವರು ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೊಠಡಿ ಸಮೀಪ ಸಚಿವರಿಗಾಗಿ ಮೀಸಲಿಟ್ಟಿರುವ ಕೊಠಡಿಗಳನ್ನು ಪರಿಶೀಲಿಸಿದ್ದರು.
ವಿಶಾಲ ಹಾಗೂ ವಾಸ್ತು ಪ್ರಕಾರ ಇರುವುದನ್ನು ನೋಡಿ 327 ಹಾಗೂ 328ನೇ ಕೊಠಡಿಯನ್ನು ಆಯ್ಕೆ ಮಾಡಿಕೊಂಡಿದ್ದರು. ನಂತರ, ಕಳೆದ ಎರಡು ಮೂರು ದಿನಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸುತ್ತಿದ್ದ ಸಭೆಗಳಿಗೆ ಆಗಮಿಸಿದಾಗಲೂ ಅದೇ ಕೊಠಡಿಯಲ್ಲಿ ಇರುತ್ತಿದ್ದರು. ಇದೀಗ ಅಧಿಕೃತವಾಗಿ ಆ ಕೊಠಡಿಗಳನ್ನು ಪಡೆದು ಪೂಜೆ ನೆರವೇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.