ಪರಂ, ಡಿಕೆಶಿ ವಿರುದ್ಧ ಸಿದ್ದು ದೂರು


Team Udayavani, Aug 6, 2018, 6:00 AM IST

siddu-page-1.jpg

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶನಿವಾರ ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಜತೆ ಪ್ರತ್ಯೇಕವಾಗಿ ಚರ್ಚೆ ನಡೆಸಿರುವ ಸಿದ್ದರಾಮಯ್ಯ, ಈ ಇಬ್ಬರು ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ. ಕುಮಾರಸ್ವಾಮಿ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡರೂ ಅದನ್ನು ಪ್ರಶ್ನಿಸದೇ ಮೌನವಾಗಿರುವುದರಿಂದ ಪಕ್ಷಕ್ಕೆ ನಷ್ಟವುಂಟಾಗುತ್ತಿದೆ. ಇದು ಕಾರ್ಯಕರ್ತರ ಬೇಸರಕ್ಕೂ ಕಾರಣವಾಗುತ್ತಿದೆ. ಸ್ಥಳೀಯ ಮಟ್ಟದಲ್ಲಿ ಸಿಎಂ ನಿರ್ಧಾರಗಳನ್ನು ಸಮರ್ಥಿಸಿಕೊಳ್ಳುವುದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಷ್ಟವಾಗುತ್ತಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದಿನ ಸರ್ಕಾರದ ಮಹತ್ವದ ಯೋಜನೆಗಳಿಗೆ ಹಿನ್ನಡೆಯಾಗುತ್ತಿದ್ದರೂ ಈ ಇಬ್ಬರೂ ನಾಯಕರು ಮಾತನಾಡುತ್ತಿಲ್ಲ ಎಂಬುದನ್ನು ರಾಹುಲ್‌ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಅನ್ನಭಾಗ್ಯಕ್ಕೆ ಕತ್ತರಿ, ಮಾತೃಪೂರ್ಣವನ್ನು ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆ ಜತೆ ವಿಲೀನಗೊಳಿಸುವ ಚಿಂತನೆ ಸೇರಿದಂತೆ ಸರ್ಕಾರದ ಮತ್ತಿತರ ಧೋರಣೆಗಳು ಸಿದ್ದರಾಮಯ್ಯ ಅವರಿಗೆ ಅತೃಪ್ತಿ ತಂದಿವೆ ಎಂದು ಹೇಳಲಾಗಿದೆ.

ಉತ್ತರದಲ್ಲೂ ಕಷ್ಟ: ಇನ್ನು ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ನಷ್ಟವಾಗಲಿದೆ. ಇದರಿಂದ ಜೆಡಿಎಸ್‌ ಬಲವರ್ಧನೆಗೂ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಸದ್ಯ ಇಲ್ಲಿ ಕಾಂಗ್ರೆಸ್‌ಗೆ ಬಿಜೆಪಿ ನೇರ ಸ್ಪರ್ಧಿಯಾಗಿದೆ. ಮೈತ್ರಿ ಮಾಡಿಕೊಂಡರೆ ಈ ಭಾಗದಲ್ಲಿ ಜೆಡಿಎಸ್‌ ಅನ್ನು ತಳಮಟ್ಟದಿಂದ ಬಲಗೊಳಿಸಲು ಅವಕಾಶ ಕಲ್ಪಿಸಿದಂತಾಗುತ್ತದೆ. ಅದು ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ರಾಹುಲ್‌ ಅವರಿಗೆ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ಲೋಕಸಭೆ ಚುನಾವಣೆಗೆ ಮುನ್ನವೂ ಮೈತ್ರಿ ಮಾಡಿಕೊಳ್ಳುವ ಮೊದಲು ಸ್ಥಳೀಯ ನಾಯಕರ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ರಾಹುಲ್‌ ಗಾಂಧಿ ಮೈತ್ರಿಯ ಬಗ್ಗೆ ಸ್ಪಷ್ಟವಾಗಿ ನಿರಾಕರಿಸದೇ ಲೋಕಸಭೆ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಿ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿ. ಆ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸಬೇಕಿದೆ ಎಂದು ಸಲಹೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ಜಿಲ್ಲಾ ಮುಖಂಡರ ಸಭೆಯಲ್ಲೂ ಅಪಸ್ವರ
ಶುಕ್ರವಾರ ಕರೆಯಲಾಗಿದ್ದ ಪಕ್ಷದ ಜಿಲ್ಲಾಧ್ಯಕ್ಷರು, ಸಂಸದರು, ಸಚಿವರು, ಶಾಸಕರು, 2018 ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳು ಹಾಗೂ 2014 ರ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿಯೂ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಅಪಸ್ವರ ವ್ಯಕ್ತವಾಗಿದೆ. ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಕ್ಷೇತ್ರಗಳ ಹೊಂದಾಣಿಕೆ ಮಾಡಿಕೊಳ್ಳುವಂತೆ ಜಿಲ್ಲಾ ಮುಖಂಡರು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.