ಮಗು 99 ಅಂಕ ಪಡೆದರೂ ಪೋಷಕರಿಗೆ ತೃಪ್ತಿಯಾಗದು

Team Udayavani, Apr 5, 2018, 1:34 PM IST

blore-10.jpg

ಬೆಂಗಳೂರು: ಸ್ಮರಣಶಕ್ತಿ ಉತ್ತಮವಾಗಿರುವವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುತ್ತಾರೆ. ಅಂದಮಾತ್ರಕ್ಕೆ ಕಡಿಮೆ ಅಂಕ ಪಡೆದವರು ದಡ್ಡರಲ್ಲ. ಅವರಲ್ಲೂ ಕೌಶಲ್ಯವಿರುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ವಿದ್ಯಾಲಯದ ಸಂಸ್ಥಾಪನ ದಿನಾಚರಣೆ ಮತ್ತು ಪ್ರೊ.ಸಿ.ಎನ್‌.ಆರ್‌.ರಾವ್‌ ಮತ್ತು ಪ್ರೊ.ಎಂ.ಆರ್‌.ಡಿ.ಪ್ರತಿಭಾ ವಿದ್ಯಾರ್ಥಿ ವೇತನ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು ತಮ್ಮ ಮಕ್ಕಳಿಗೆ ಅತಿಯಾದ ಪ್ರೀತಿ ತೋರಿಸುವುದರೊಂದಿಗೆ ಸಾಮಾಜಿಕವಾಗಿ ಬದುಕುವ ಮತ್ತು ಬದುಕಿನ ಸವಾಲು ಎದುರಿ ಸುವ ಆತ್ಮಸ್ಥೈರ್ಯ ತುಂಬಬೇಕು. ಕೆಲವು ಪೋಷಕರಿಗೆ ಮಗು 99 ಅಂಕ ಪಡೆದರೂ ತೃಪ್ತಿಯಾಗದೆ ಇನ್ನೂ ಒಂದು ಅಂಕಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಅದರ ಬದಲು ಮಗುವಿನ ಬದುಕಿಗೆ ಬೇಕಾದ ಸ್ಪೂರ್ತಿ ತುಂಬಬೇಕು ಎಂದರು.
 
ಅನೇಕ ವರ್ಷಗಳ ಹಿಂದೆ ಶಿಕ್ಷಣ ಗಗನ ಕುಸುಮವಾಗಿತ್ತು. ಉನ್ನತ ಶಿಕ್ಷಣ ಎಲ್ಲರಿಗೂ ಸಿಗುತ್ತಿರಲಿಲ್ಲ. ಆಗ ಕೆಲವೇ ವಿದ್ಯಾಸಂಸ್ಥೆಗಳಿದ್ದವು. ಅಲ್ಲಿ ಸೀಟು ಪಡೆಯಲು ಹಣ ಅಥವಾ ಮೆರಿಟ್‌ ಇರಬೇಕಿತ್ತು. ಇಂದಿನ ವಿದ್ಯಾರ್ಥಿಗಳು ಶಿಕ್ಷಣದ ಸುವರ್ಣ ಯುಗದಲ್ಲಿದ್ದಾರೆ. ಯಾರು ಬೇಕಾದರೂ ಉನ್ನತ ಶಿಕ್ಷಣ ಪಡೆಯಲು ಮುಕ್ತ ಅವಕಾಶ ಇದೆ. ಶಿಕ್ಷಣ ಸಂಸ್ಥೆಗಳ ಸಂಖ್ಯೆಯೂ ಹೆಚ್ಚಾಗಿದೆ. ವಿದ್ಯಾರ್ಥಿಗಳು ಇರುವ ಅವಕಾಶಗಳನ್ನು ಸದುಪ ಯೋಗ ಪಡಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಪಾಲುದಾ ರರಾಗಬೇಕು ಎಂದು ಸಲಹೆ ನೀಡಿದರು.

ಅವಕಾಶಗಳು ಸೃಷ್ಟಿಯಾಗಬೇಕು: ಅವಕಾಶಗಳ ಸೃಷ್ಟಿ ಹೆಚ್ಚಾದಾಗ ದೇಶದ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಬದಲಾಗುತ್ತದೆ. ಭಾರತ ಬೃಹತ್‌ ದೇಶವಾಗಿದ್ದು, ಸ್ವಾತಂತ್ರ್ಯಾನಂತರ ಹಲವು ಸುಧಾರಣೆ ಕಂಡಿದೆ. ಆದರೂ, ಆಸಕ್ತಿದಾಯಕ ವಿಚಾರದಲ್ಲಿ ಅವಕಾಶಗಳು ಹೆಚ್ಚಾಗಬೇಕು. ಇದರಿಂದ ಬದಲಾವಣೆ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. 

ಶಿಕ್ಷಕ, ಚಿಂತಕ, ಸಾಧಕ ಕೃತಿ ಹಾಗೂ ಡಾ.ಎಂ.ಆರ್‌.ದೊರೆಸ್ವಾಮಿ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾಗ ಪರಿಷತ್‌ನಲ್ಲಿ ಚರ್ಚಿಸಿದ ನಡವಳಿಕೆಗಳು ಕುರಿತ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. ಪಿಇಎಸ್‌ ವಿವಿ ಕುಲಾಧಿಪತಿ ಡಾ.ಎಂ.ಆರ್‌.ದೊರೆಸ್ವಾಮಿ,
ನಿವೃತ್ತ ಐಎಎಸ್‌ ಅಧಿಕಾರಿ ಎಚ್‌. ಸಿದ್ದಯ್ಯ, ಪಿಇಎಸ್‌ ವಿವಿ ಸಮಕುಲಾಧಿಪತಿ ಪ್ರೊ.ಡಿ.ಜವಹರ್‌, ಡಾ. ಕೆ.ಎನ್‌.ಬಿ.
ಮೂರ್ತಿ ಮೊದಲಾದವರು ಇದ್ದರು. 

ವಿದ್ಯಾರ್ಥಿಗಳಿಗೆ ಪುರಸ್ಕಾರ
 ಏಕಲವ್ಯ ಪ್ರಶಸ್ತಿ ಪಡೆದ ಕಾಲೇಜಿನ ವಿದ್ಯಾರ್ಥಿ ಟಿ.ಕೆ. ಕೀರ್ತನಾ, 2018ರ ಗೇಟ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಗಳಿಸಿದ ಬಿ.ರಾಹುಲ್‌ ಕಶ್ಯಪ್‌ ಸೇರಿ 1273 ವಿದ್ಯಾರ್ಥಿಗಳಿಗೆ ಪ್ರೊ.ಸಿ.ಎನ್‌.ಆರ್‌.ರಾವ್‌ ವಿದ್ಯಾರ್ಥಿ ವೇತನ, 230 ವಿದ್ಯಾರ್ಥಿಗಳಿಗೆ ಪ್ರೊ.ಎಂ.ಆರ್‌.ಡಿ ವಿದ್ಯಾರ್ಥಿ ವೇತನ ಮತ್ತು 3,708 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ ಪ್ರಶಸ್ತಿ ಸೇರಿ ಒಟ್ಟು 5211 ವಿದ್ಯಾರ್ಥಿಗಳಿಗೆ 2.99 ಕೋಟಿ ರೂ. ಮೌಲ್ಯದ ವಿದ್ಯಾರ್ಥಿವೇತನ ನೀಡಲಾಯಿತು. 

ಹೋರಾಟದ ಬದುಕು
200 ವರ್ಷಗಳ ಹಿಂದೆ ಕರಾವಳಿ ಮತ್ತು ಗೋವಾ ಭಾಗಗಳಲ್ಲಿ ನೆಲೆಸಿದ್ದ ಬ್ರಿಟೀಷರು, ಪೋರ್ಚುಗೀಸರು, ಡಚ್ಚರು, ಫ್ರೆಂಚರು ಹೀಗೆ ಎಲ್ಲರೊಂದಿಗೂ ದಕ್ಷಿಣ ಕನ್ನಡದವರು ಬದುಕಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ಇತ್ತು. ಕೈಗಾರಿಕೆಗಳ ಪ್ರಗತಿಯಿಂದಾಗಿ ಅಲ್ಲಿಂದ ಬೇರೆ ಊರಿಗೆ ಹೋಗಿ ನೆಲೆಸಿದೆವು. ಹೀಗಾಗಿ ವಿಶ್ವದ ಬಹುತೇಕ ಭಾಗದಲ್ಲಿ ದಕ್ಷಿಣ ಕನ್ನಡದವರು ನೆಲೆಸಿದ್ದಾರೆ. ಅವರ ಭಾಷೆ, ಹೆಸರು ಕೇಳಿದ ಕೂಡಲೇ ದಕ್ಷಿಣ ಕನ್ನಡದ ವಾಸನೆ ಬರುತ್ತದೆ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು. 

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.