ಪರೇಶ್ ಮೇಸ್ತ ಪ್ರಕರಣ: ಎನ್ಐಎ ತನಿಖೆಗೆ ಮನವಿ
Team Udayavani, Dec 18, 2017, 6:45 AM IST
ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್ಐಎ) ವಹಿಸುವಂತೆ ರಾಜ್ಯ ಬಿಜೆಪಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿತು.
ಭಾನುವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜನಾಥ್ಸಿಂಗ್ ಅವರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಮನವಿ ಮಾಡಿದರು. ಇದಕ್ಕೂ ಮೊದಲು ತಮ್ಮ ಭಾಷಣದಲ್ಲಿ ಇದೇ ವಿಷಯ ಪ್ರಸ್ತಾಪಿಸಿದ ಕೇಂದ್ರ ಸಚಿವ ಅನಂತಕುಮಾರ್, ರಾಜ್ಯ ಸರ್ಕಾರ ಪರೇಶ್ ಮೇಸ್ತ ಪ್ರಕರಣವನ್ನು ಸಿಬಿಐಗೆ ವಹಿಸುವ ನಾಟಕ ಆಡುತ್ತಿದೆ. ಈವರೆಗೆ ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಸಿಬಿಐಗೆ ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾದಲ್ಲಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.