ಪಾರ್ಟ್ ಟೈಂ ಕೆಲಸ ನೆಪದಲ್ಲಿ ಮಹಿಳೆಗೆ 7 ಲಕ್ಷ ರೂ.ವಂಚನೆ
Team Udayavani, Apr 9, 2023, 1:36 PM IST
ಬೆಂಗಳೂರು: ಪಾರ್ಟ್ ಟೈಂ ಕೆಲಸ ಹಾಗೂ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಸಿ ಸೈಬರ್ ವಂಚಕನೊಬ್ಬ ಮಹಿಳೆಗೆ 7.10 ಲಕ್ಷ ರೂ. ವಂಚಿಸಿದ್ದಾನೆ.
ಈ ಸಂಬಂಧ ಜಕ್ಕೂರು ನಿವಾಸಿ ರಜನಿ (33) ಈಶಾನ್ಯವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾ.31ರಂದು ರಜನಿ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಪಾರ್ಟ್ ಟೈಂ ಕೆಲಸ ಹಾಗೂ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಸಂದೇಶ ಕಳುಹಿಸಿದ್ದಾನೆ. ಅಲ್ಲದೆ, ಜೀವಿತಾ 22 ಎಂಬ ವಾಟ್ಸ್ಆ್ಯಪ್ ಗ್ರೂಪ್ ಗೂ ರಜಿನಿಯನ್ನು ಸೇರಿಸಿದ್ದಾನೆ. ಬಳಿಕ ರಜನಿಗೆ ಕೆಲ ಟಾಸ್ಕ್ ಗಳನ್ನು ಕೊಟ್ಟು, ಅವುಗಳನ್ನು ಪೂರ್ಣಗೊಳಿಸಿದ ಬಳಿಕ ಹಂತ-ಹಂತವಾಗಿ 7.10 ಲಕ್ಷ ರೂ. ತನ್ನ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾನೆ. ಅನಂತರ ಕೆಲಸವಾಗಲಿ ಅಥವಾ ಹೂಡಿಕೆ ಹಣವಾಗಲಿ ವಾಪಸ್ ನೀಡಿಲ್ಲ. ಅದರಿಂದ ಎಚ್ಚೆತ್ತುಕೊಂಡ ರಜನಿ ಕೂಡಲೇ ಈಶಾನ್ಯ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.