ಪಾರ್ವತಮ್ಮ ಆರೋಗ್ಯ ಯಥಾಸ್ಥಿತಿ
Team Udayavani, May 21, 2017, 12:36 PM IST
ಬೆಂಗಳೂರು: ಬಹು ಅಂಗ ವೈಫಲ್ಯದಿಂದ ಬಳಲುತ್ತಿರುವ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಭಯ ಪಡುವ ಅಗತ್ಯವಿಲ್ಲ ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪಾರ್ವತಮ್ಮ ರಾಜ್ಕುಮಾರ್ ಅವರ ಆರೋಗ್ಯ ಸುಧಾರಣೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದೇವೆ. ಉಸಿರಾಟದ ತೊಂದರೆ ಇರುವುದರಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಸದ್ಯ ಡಯಾಲಿಸಿಸ್ ನಿಲ್ಲಿಸಿದ್ದೇವೆ. ಅಗತ್ಯ ಬಿದ್ದರೆ ಡಯಾಲಿಸಿಸ್ ಮಾಡಲಾಗುವುದು. ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ವೈದ್ಯರಾದ ಡಾ.ನರೇಶ್ ಶೆಟ್ಟಿ ಹಾಗೂ ಡಾ.ಸಂಜಯ… ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಟ ಶಿವರಾಜ್ಕುಮಾರ್ ಮಾತನಾಡಿ, “ಅಮ್ಮನ ಆರೋಗ್ಯದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ. ಅವರಿಗೆ ಚಿಕಿತ್ಸೆ
ಮುಂದುವರಿಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಅಮ್ಮ ನಿನ್ನೆ ಹೇಗಿದ್ದರೋ ಇಂದೂ ಹಾಗೆಯೇ ಇದ್ದಾರೆ. ಈಗಲೂ ಪ್ರತಿದಿನ ಅಮ್ಮನ ಆರೋಗ್ಯದ ಮಾಹಿತಿ ನೀಡುತ್ತಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ’ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.