ಪಾರ್ವತಮ್ಮ ರಾಜ್‌ಕುಮಾರ್ ಅವರಿಗೆ ಸರ್ಕಾರಿ ಗೌರವ-ವಕೀಲರಿಂದ ದೂರು
Team Udayavani, Jun 3, 2017, 12:48 PM IST
ಬೆಂಗಳೂರು: ದಿವಂಗತ ಪಾರ್ವತಮ್ಮ ರಾಜ್‌ಕುಮಾರ್ ಅವರ ಅಂತಿಮ ಯಾತ್ರೆ ವೇಳೆ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರ ಧ್ವಜ ಹೊಂದಿಸಿರುವುದು ಭಾರತೀಯ ಧ್ವಜ ಕಾಯ್ದೆ ಉಲ್ಲಂಘನೆ ಎಂದು ಆರೋಪಿಸಿ ವಕೀಲ ಚೇತನ್ ಎಂಬುವರು 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಆರೋಪಿಗಳನ್ನಾಗಿಸಿ ವಕೀಲ ಚೇತನ್ ದೂರು ದಾಖಲಿಸಿದ್ದಾರೆ. ವಿಶ್ವದ ಪ್ರತಿ ರಾಷ್ಟ್ರಕ್ಕೂ ಅದರದ್ದೇ ಆದ ಧ್ವಜ ಕಾಯ್ದೆ ಇದೆ.
ಭಾರತೀಯ ಧ್ವಜ ಕಾಯ್ದೆ 5ರ ಪ್ರಕಾರ ರಾಜ್ಯ ಪೊಲೀಸರು, ಮಿಲಿಟರಿ, ಕೇಂದ್ರ ಪ್ಯಾರಾ ಮಿಲಿಟರಿ ಪಡೆಗಳ ಸಿಬ್ಬಂದಿ ಅಂತ್ಯಕ್ರಿಯೆ ಸಂದರ್ಭದಲ್ಲಿ ಮಾತ್ರ ಧ್ವಜ ಹೊದಿಸಬೇಕು. ಖಾಸಗಿ ವ್ಯಕ್ತಿ ಮೃತಪಟ್ಟ ವೇಳೆ ಉಪಯೋಗಿಸಬಾರದು ಎಂಬ ನಿಯಮವಿದೆ. ಆದರೆ, ಪಾರ್ವತಮ್ಮ ರಾಜ್‌ಕುಮಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸುವ ಮೂಲಕ ಧ್ವಜಕ್ಕೆ ಅಪಮಾನ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ “ರಾಷ್ಟ್ರೀಯ ಗೌರವ ಅಪಮಾನ ತಡೆ ಕಾಯ್ದೆ (3) 1971ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.