ಪಶುಭಾಗ್ಯ ಆಯ್ಕೆ ಸಮಿತಿ ನಾಮನಿರ್ದೇಶನಕ್ಕೆ ಆಕ್ಷೇಪ:ಪ್ರತಿಪಕ್ಷಗಳ ಧರಣಿ
Team Udayavani, Mar 28, 2017, 3:45 AM IST
ವಿಧಾನಸಭೆ: ರೈತರಿಗೆ ಹಸುಗಳನ್ನು ವಿತರಿಸುವ ರಾಜ್ಯ ಸರ್ಕಾರದ ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿಗೆ ಸರ್ಕಾರ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ಸದಸ್ಯರು, ಇದರಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ ಧರಣಿ ನಡೆಸಿದ ಪ್ರಸಂಗ ಸೋಮವಾರ ನಡೆಯಿತು.
ಭೋಜನಾನಂತರ ಕಲಾಪ ಆರಂಭವಾಗುತ್ತಿದ್ದಂತೆ ಶಾಸಕರ ಅಧ್ಯಕ್ಷತೆಯಲ್ಲಿರುವ ಪಶು ಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿಗೆ ಸರ್ಕಾರ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ, ಸಿ.ಎನ್.ಬಾಲಕೃಷ್ಣ, ಸಾ.ರಾ.ಮಹೇಶ್, ನಾಮಕರಣ ಸದಸ್ಯರಿಂದಾಗಿ ಶಾಸಕರ ಶಿಫಾರಸಿಗೆ ಗೌರವ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಶಾಸಕರ ಅಧ್ಯಕ್ಷತೆಯಲ್ಲಿ ಪಶುಭಾಗ್ಯ ಫಲಾನುಭವಿಗಳ ಆಯ್ಕೆ ಸಮಿತಿ ರಚಿಸಿರುವ ಸರ್ಕಾರ ಅದಕ್ಕೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿದೆ. ಈ ಸಮಿತಿಯು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರಿಗೆ ಕಳುಹಿಸಿಕೊಟ್ಟರೆ ನಾಮನಿರ್ದೇಶಿತ ಸದಸ್ಯರು ಅವರ ಬಳಿ ಹೋಗಿ ಪಟ್ಟಿಗೆ ತಡೆಯೊಡ್ಡುತ್ತಿದ್ದಾರೆ. ಇದರಿಂದ ಶಾಸಕರ ಹಕ್ಕುಚ್ಯುತಿಯಾಗಿದೆ ಎಂದು ಕಿಡಿ ಕಾರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡ, ಹಕ್ಕುಚ್ಯುತಿಯಾಗಿದ್ದರೆ ನೋಟಿಸ್ ನೀಡಿ ಎಂದಾಗ ಮಧ್ಯಪ್ರವೇಶಿಸಿದ ಜೆಡಿಎಸ್‌ನ ವೈ.ಎಸ್.ವಿ.ದತ್ತ, ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ಏಕೆ ಎಂಬ ಕಾರಣಕ್ಕೆ ಹಕ್ಕುಚ್ಯುತಿ ಮಂಡಿಸುತ್ತಿಲ್ಲ. ಸರ್ಕಾರ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿ, ಶಾಸಕರ ಅಧ್ಯಕ್ಷತೆಯ ಸಮಿತಿ ಅಂತಿಮಗೊಳಿಸಿದ ಪಟ್ಟಿಯಂತೆ ಫಲಾನುಭವಿಗಳಿಗೆ ಹಸು ವಿತರಿಸುವಂತೆ ನೋಡಿಕೊಂಡರೆ ಸಾಕು ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಸರ್ಕಾರದ ಕಡೆಯಿಂದ ಹೇಳಿಕೆ ನೀಡಿ, ನ್ಯೂನತೆಗಳ ಕುರಿತು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಹೇಳಿದರೂ ಕೇಳದ ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ತೆರಳಿ ಧರಣಿ ನಡೆಸಿದರು. ಬಿಜೆಪಿ ಸದಸ್ಯರೂ ಅವರನ್ನು ಹಿಂಬಾಲಿಸಿ ಧರಣಿಯಲ್ಲಿ ಪಾಲ್ಗೊಂಡರು.
ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಜಗದೀಶ್ ಶೆಟ್ಟರ್, ನಾಮನಿರ್ದೇಶನಗೊಂಡ ಸದಸ್ಯರು ಆಡಳಿತ ಪಕ್ಷದವರಾಗಿರುವುದರಿಂದ ಪ್ರತಿಪಕ್ಷದ ಶಾಸಕರು ಇರುವ ಕಡೆ ಮಾತ್ರ ಈ ಸಮಸ್ಯೆ ಇದೆ. ನಮ್ಮ ಶಾಸಕ ಯು.ಬಿ.ಬಣಕಾರ್ ಅವರ ಕ್ಷೇತ್ರದಲ್ಲಿ ನಾಮ ನಿರ್ದೇಶನಗೊಂಡ ಸದಸ್ಯರು, ನಾವು ನಾಲ್ವರಿದ್ದೇವೆ. ನೀವು ಒಬ್ಬರೇ ಇದ್ದೀರಿ. ಹೀಗಾಗಿ ಶೇ. 80ರಷ್ಟು ಫಲಾನುಭವಿಗಳ ಆಯ್ಕೆ ನಮಗೆ ಬಿಟ್ಟುಕೊಡಿ. ಶೇ. 20ನ್ನು ಮಾತ್ರ ನೀವು ಇಟ್ಟುಕೊಳ್ಳಿ ಎಂದು ಹೇಳುತ್ತಿದ್ದಾರಂತೆ. ಹೀಗಿರುವಾಗ ಶಾಸಕರಿಗೆ ಗೌರವ ಬರುವುದು ಹೇಗೆ ಎಂದು ಪ್ರಶ್ನಿಸಿದರು.
ವಿವಾದಕ್ಕೆ ಕಾರಣವಾದ ಹೇಳಿಕೆ: ಈ ಮಧ್ಯೆ ನಾಮನಿರ್ದೇಶಿತ ಸದಸ್ಯರ ಕುರಿತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ನಾಮನಿರ್ದೇಶಿತ ಸದಸ್ಯರು ಫಲಾನುಭವಿಗಳ ಪಟ್ಟಿಗೆ ಸಹಿ ಮಾಡಿದರೂ ನಂತರ ಉಪನಿರ್ದೇಶಕರ ಬಳಿ ಅದನ್ನು ತಡೆಹಿಡಿದು ವ್ಯಾಪಾರ ಮಾಡುತ್ತಿದ್ದಾರೆ ಎಂದಾಗ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಕೆ.ಎನ್.ರಾಜಣ್ಣ, ಸದಸ್ಯರ ಬಗ್ಗೆ ಆ ರೀತಿ ಮಾತನಾಡುವುದು ಸರಿಯಲ್ಲ. ಶಾಸಕರು ವ್ಯಾಪಾರ ಮಾಡುತ್ತಿದ್ದಾರೆ ಎಂದರೆ ಆಗ ನಮ್ಮ ಗೌರವ ಏನಾಗಬೇಕು? ಆದ್ದರಿಂದ ಹೇಳಿಕೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪೀಕರ್ ಕೆ.ಬಿ.ಕೋಳಿವಾಡ ಮತ್ತು ಸಚಿವ ಎಚ್.ಕೆ.ಪಾಟೀಲ್ ಕೂಡ ದನಿಗೂಡಿಸಿದರು.
ಆದರೂ ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರಿಸುತ್ತಿದ್ದುದನ್ನು ಗಮನಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡ, ಸಂಬಂಧಿಸಿದ ಸಚಿವರು ಬಂದ ನಂತರ ಅವರಿಂದ ಉತ್ತರ ಕೊಡಿಸುತ್ತೇನೆ. ಎಲ್ಲಾ ಸದಸ್ಯರು ತಮ್ಮ ಸ್ಥಾನಗಳಿಗೆ ಹಿಂತಿರುಗಿ ಎಂದು ಮನವಿ ಮಾಡಿದರು. ನಂತರ ಧರಣಿ ವಾಪಸ್ ಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.