ಬಸವನಗುಡಿಯಲ್ಲೀಗ ಕಡಲೆಕಾಯಿ ಸೊಗಡು
Team Udayavani, Nov 23, 2019, 11:18 AM IST
ಬೆಂಗಳೂರು: ಕಡೆ ಕಾರ್ತೀಕ ಸೋಮವಾರ ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ರಾಜ್ಯ ಸೇರಿ ಹೊರರಾಜ್ಯಗಳಿಂದ ಬಗೆ ಬಗೆಯ ಕಡಲೆಕಾಯಿ ಬಂದಿದ್ದು, ನೂರಾರು ಮಳಿಗೆಗಳು ನಿರ್ಮಾಣಗೊಂಡಿವೆ.
ಬುಲ್ ಟೆಂಪಲ್ ರಸ್ತೆ, ಎನ್.ಆರ್.ಕಾಲೋನಿ ರಸ್ತೆ, ರಾಮಕೃಷ್ಣ ಆಶ್ರಮ ರಸ್ತೆಯಲ್ಲಿ ಕಡಲೆಕಾಯಿ ರಾಶಿ ರಾರಾಜಿಸುತ್ತಿದ್ದು, ಪರಿಷೆಗೆ ಗಡಂಗ್, ಬಾದಾಮಿ, ಸಾಮ್ರಾಟ್ ಸೇರಿದಂತೆ ವಿವಿಧ ತಳಿಗಳ ಕಡಲೆಕಾಯಿಹಾಗೂ ಕೆಂಪು, ಗುಲಾಬಿ ಬಣ್ಣದ ಬೀಜ ಹೊಂದಿರುವ ಕಡಲೆಕಾಯಿ ಬಂದಿವೆ. ಹತ್ತಾರು ಜಾತಿಯ ಕಡಲೆಕಾಯಿ ಇದ್ದು, ಕೆಂಪು ಮಣ್ಣು, ಕಪ್ಪು ಮಣ್ಣಿನಲ್ಲಿ ಬೆಳೆದ ಒಂದೊಂದು ಬಗೆಯ ಕಡಲೆಕಾಯಿ ರಾಶಿಯೂ ಭಿನ್ನ ಬಣ್ಣದೊಂದಿಗೆ ಕಂಗೊಳಿಸುತ್ತಿವೆ. ಪರಿಷೆ ಇನ್ನೂ ಎರಡು ದಿನ ಬಾಕಿಯಿದ್ದರೂ ವಾರದ ಹಿಂದೆಯೇ ವ್ಯಾಪಾರಿಗಳು ರಾಶಿ ರಾಶಿ ಕಾಯಿ ಗಳೊಂದಿ ಗೆ ಮಳಿಗೆಗಳನ್ನು ನಿರ್ಮಿಸಿದ್ದಾರೆ. ರಾಮಕೃಷ್ಣ ಆಶ್ರಮದಿಂದ ಎನ್.ಆರ್. ಕಾಲೋನಿವರೆಗೆ, ಠ್ಯಾಗೋರ್ ಸರ್ಕಲ್‌ನಿಂದ ಹನುಮಂತನಗರ ವರೆಗೆ, ಬಿಎಂಎಸ್ ಕಾಲೇಜು ಮುಂಭಾಗ ಸೇರಿದಂತೆ ದೊಡ್ಡಗಣಪತಿ ದೇವಸ್ಥಾನ ಸುತ್ತಲ ಪ್ರದೇಶದಲ್ಲಿ ವ್ಯಾಪಾರಿಗಳು ಮಳಿಗೆ ನಿರ್ಮಿಸಿದ್ದು, ನ. 23 ಮತ್ತು 24ರಂದು ರಜೆ ದಿನವಾಗಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷೆಗೆ ಆಗಮಿಸುವ ಸಾಧ್ಯತೆ ಇದೆ.
ಕುಣಿಗಲ್, ಚಿಂತಾಮಣಿ, ಶ್ರೀನಿವಾಸಪುರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ ಹೀಗೆ ರಾಜ್ಯದ ಹಲವು ಭಾಗಗಳಿಂದ ಕಡಲೆಕಾಯಿ ಬಂದಿದ್ದು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಬಗೆ ಬಗೆಯ ಕಡಲೆಕಾಯಿ ಬಂದಿವೆ.
ಪರಿಷೆಯಲ್ಲಿ ರೈತರ ಮಳಿಗೆಗಿಂತ ವ್ಯಾಪಾರಿಗಳದೇ ಕಾರುಬಾರು ಜೋರಾಗಿದ್ದು, ಒಂದು ಸೇರು ಹಸಿ ಕಾಯಿ ಹಾಗೂ ಹುರಿದ ಕಡಲೆ ಕಾಯಿ 30-40 ರೂ. ಇದೆ. ರಸ್ತೆಯ ಎಡ ಮತ್ತು ಬಲ ಬದಿಗಳಲ್ಲಿ ಬಹುತೇಕ ಮಳಿಗೆಗಳಲ್ಲಿ ಹಸಿಯ ಹಾಗೂ ಹುರಿದ ಕಡಲೆಕಾಯಿ ರಾಶಿ ಹಾಕಿದ್ದರೆ, ಮತ್ತೆ ಕೆಲವು ಮಳಿಗೆಗಳಲ್ಲಿ ಮಾರಾಟಗಾರರು ಅಲ್ಲಿಯೇ ಗ್ಯಾಸ್ ಸ್ಟೌವ್ ಹಚ್ಚಿಕೊಂಡು ಹುರಿದ ಕಡಲೆಕಾಯಿ ಮಾರಾಟ ಮಾಡುತ್ತಿದ್ದಾರೆ. ಇದಲ್ಲದೆ ಕಡ್ಲೆಪುರಿ, ಬೆಂಡು-ಬತ್ತಾಸು, ಮಿಠಾಯಿ ಮಳಿಗೆಗಳೂ ಕಳೆಗಟ್ಟಿವೆ. ಮಕ್ಕಳ ಆಟಿಕೆ, ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆಗಳನ್ನು ನಿರ್ಮಿಸಲಾಗಿದೆ.
ಪ್ರತಿ ವರ್ಷದಂತೆ ಕಡಲೆಕಾಯಿ ಪರಿಷೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದ್ದು, ಈ ಬಾರಿ ಪ್ಲ ಸ್ಟಿಕ್ ನಿಷೇಧ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. -ಕಟ್ಟೆ ಸತ್ಯನಾರಾಯಣ, ಪಾಲಿಕೆ ಸದಸ್ಯ
ಸೋಮವಾರ ಅಧಿಕೃತ ಚಾಲನೆ: ನ. 25ರಂದು ಬೆಳಗ್ಗೆ 9.30ಕ್ಕೆ ಮೇಯರ್ ಎಂ.ಗೌತಮ್ ಕುಮಾರ್ ಅವರು ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಾ.ಸಿ.ಎಸ್. ಅಶ್ವತ್ಥ ನಾರಾಯಣ್, ಸಚಿವ ಆರ್. ಅಶೋಕ, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ. 25 ಮತ್ತು 26ರಂದು ಸಂಜೆ 6ರಿಂದ 10 ಗಂಟೆವರೆಗೆ ದೊಡ್ಡಗಣಪತಿ ದೇವಸ್ಥಾನದ ಬಳಿ ಇರುವ ಉದ್ಯಾನದಲ್ಲಿ ಸಾಂಸ್ಕೃತಿಕಕಾರ್ಯಕ್ರಮಗಳು ನಡೆಯಲಿವೆ. ಬಿಎಂಎಸ್ ಕಾಲೇಜು ವಿದ್ಯಾರ್ಥಿಗಳು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ನೀಡಲಿದ್ದಾರೆ.
ಪೊಲೀಸ್ ಬಿಗಿ ಭದ್ರತೆ: ಪರಿಷೆಗೆ ಲಕ್ಷಾಂತರ ಜನರು ಭೇಟಿ ನೀಡಲಿದ್ದು, ಪೊಲೀಸ್ ಇಲಾಖೆ ಬಿಗಿ ಭದ್ರತೆ ನೀಡಿದೆ. ಇಬ್ಬರು ಎಸಿಪಿ, 8 ಮಂದಿ ಇನ್‌ಸ್ಪೆಕ್ಟರ್, 12 ಮಂದಿ ಪಿಎಸ್‌ಐ, ಒಂದು ಕೆಎಸ್‌ಆರ್‌ಪಿ ತುಕಡಿ, 250 ಮಂದಿ ಗೃಹರಕ್ಷಕರು ಸೇರಿದಂತೆ ಮೂರು ಪಾಳಿಯದಲ್ಲಿ 300 ಪೊಲೀಸರು ಭದ್ರತೆ ನೀಡಲಿದ್ದಾರೆ. ಪರಿಷೆ ಸುತ್ತಲು 12 ಸಿಸಿ ಟಿವಿ ಅಳವಡಿಸಿದ್ದು, ಒಂದು ಕಂಟ್ರೋಲ್ ರೂಮ್ ತೆರೆಯಲಾಗಿದೆ. ಭದ್ರತೆ ದೃಷ್ಟಿಯಿಂದ ಒಂದು ಕಡೆ ಚೆಕ್ ಪಾಯಿಂಟ್, ಧ್ವನಿವರ್ಧಕ ಅಳವಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.