ಹನುಮಾನ್‌ ಮೂರ್ತಿ ಕೆತ್ತನೆಗೆ ಪೇಜಾವರ ಶ್ರೀ ಚಾಲನೆ

Team Udayavani, Aug 20, 2018, 12:41 PM IST

unnata.jpg

ಕೆ.ಆರ್‌.ಪುರ: ಸಮೀಪದ ಹೆಣ್ಣೂರಿನ ಕಾಚರಕನಹಳ್ಳಿಯಲ್ಲಿ ಶ್ರೀàರಾಮ ವರ್ಧಿನಿ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ 62 ಅಡಿ ಎತ್ತರದ ಏಕಶಿಲಾ ಹನುಮಾನ್‌ ವಿಗ್ರಹದ ಪೂರ್ವಾರ್ಧ ಕೆತ್ತನೆಯ ಪ್ರಾರಂಭೋತ್ಸವಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ಸಮಾರಂಭ ಉದ್ಘಾಟಿಸಿದ ನಂತರ ಮಾತನಾಡಿದ ಪೇಜಾವರ ಶ್ರೀಗಳು, ಟ್ರಸ್ಟ್‌ ವತಿಯಿಂದ ದೇಶದ ಅತಿ ಎತ್ತರದ ಹನುಮಾನ್‌ ಮೂರ್ತಿ ನಿರ್ಮಿಸುತ್ತಿರುವುದು ಹೆಮ್ಮೆಯ ಸಂಗತಿ. ಶ್ರೀರಾಮನ ಭಂಟ ಹನುಮಂತ, ಲಕ್ಷ್ಮಣನ ಪ್ರಾಣ ಉಳಿಸಲು ತನ್ನ ಎಡಗೈನಲ್ಲಿ ಸಂಜೀವಿನಿ ಪರ್ವತವನ್ನೇ ಹೊತ್ತು ತಂದಿದ್ದರಿಂದ ಆತನ ಬಗ್ಗೆ ರಾಮನಿಗೆ ವಿಶೇಷ ಕಾಳಜಿ ಇತ್ತು. ಹನುಮಾನ್‌ ಶಕ್ತಿ ಎಂದರೆ ಅನ್ಯಾಯದ ವಿರುದ್ಧದ ಹೋರಾಟ. ಈ ಹನುಮಾನ್‌ ಶಕ್ತಿಯನ್ನು ಇಂದಿನ ಯುವಕರು ರೂಢಿಸಿಕೊಳ್ಳಬೇಕಾಗಿದೆ ಎಂದರು.

ಮೂವತ್ತು ವರ್ಷಗಳ ಹಿಂದೆ ಆಗಿನ ಸರ್ಕಾರ ಈ ಸ್ಥಳದಲ್ಲಿ ಕಸಾಯಿಖಾನೆ ನಿರ್ಮಾಣ ಮಾಡಲು ಮುಂದಾದಾಗ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗಿತ್ತು. ಈ ಪವಿತ್ರ ಸ್ಥಳದಲ್ಲಿ ಚೋಳರ ಕಾಲದಲ್ಲಿ ಸುಂದರವಾದ ಆಂಜನೇಯನ ದೇವಸ್ಥಾನ ನಿರ್ಮಾಣವಾಗಿದೆ. ದೇವಾಲಯಕ್ಕೆ ನಾನೂರು ವರ್ಷಗಳ ಇತಿಹಾಸವಿದೆ. ಈ ಬೃಹತ್‌ ಮೂರ್ತಿಯ ಕೆತ್ತನೆ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಕೆತ್ತನೆ ಕಾರ್ಯ ಮುಗಿದ ನಂತರ ಮತ್ತೆ ಭೇಟಿ ನೀಡುವುದಾಗಿ ತಿಳಿಸಿದರು.

1988ರಲ್ಲಿ ಮೊದಲ ಬಾರಿ ಈ ಸ್ಥಳದಲ್ಲಿ ಮೂಲ ಹನುಮಾನ್‌ ಮೂರ್ತಿ ಕಾಣಿಸಿಕೊಂಡಿತ್ತು. 25 ವರ್ಷಗಳ ಹಿಂದೆ ಹನುಮಾನ್‌ ಕುರುಹು ಪತ್ತೆ ಹಚ್ಚಿ ಇದೆ ಸ್ಥಳದಲ್ಲಿ ಹನುಮಾನ್‌ ಮೂರ್ತಿ ಪ್ರತಿಷ್ಠಾಪಿಸಲು ಟ್ರಸ್ಟ್‌ನ ಪಧಾಧಿಕಾರಿಗಳು ಹಾಗೂ 18 ಗ್ರಾಮಗಳ ಮುಖಂಡರ ತಿರ್ಮಾನಿಸಿದ್ದರು. ಅದರಂತೆ ಕೋಲಾರ ಜಿಲ್ಲೆಯ ನರಸಾಪುರದಲ್ಲಿ 1400 ಟನ್‌ ತೂಕದ ಏಕಾಶಿಲೆಯಲ್ಲಿ 750 ಟನ್‌ ತೂಕ, 62 ಅಡಿ ಎತ್ತರದ ಹನುಮಾನ್‌ ಮೂರ್ತಿಯನ್ನು ಕೆತ್ತಲಾಗಿದೆ.

ಕೆತ್ತನೆಯ ಅರ್ಧ ಭಾಗ ಮುಗಿದಿದ್ದು, ಪೂರ್ವಾರ್ಧ ಭಾಗದ ಕೆತ್ತನೆ ಇಂದಿನಿಂದ ಆರಂಭವಾಗಿದೆ. 30×60 ಅಡಿ ಜಾಗದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀರಾಮ ವರ್ಧಿನಿ ಟ್ರಸ್ಟ್‌ ಅಧ್ಯಕ್ಷರು ತಿಳಿಸಿದರು. ಈ ವೇಳೆ ಅರಣ್ಯ ಸಚಿವ ಆರ್‌.ಶಂಕರ್‌, ಸಂಸದ ಪಿ.ಸಿ.ಮೋಹನ್‌, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಮೇಯರ್‌ ಸಂಪತ್‌ರಾಜ್‌, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.