ಕಾಂಗ್ರೆಸ್ ಕಿತ್ತೆಸೆಯಲು ಜನ ಕಾತರ
Team Udayavani, May 11, 2018, 11:56 AM IST
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಗುರುವಾರ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ನಟ ಯಶ್ ಮನೆಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡಿದ ಅವರು ನಂತರ ನಟ ಗಣೇಶ್ ಅವರೊಂದಿಗೆ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನತೆ ಮತದಾನದ ದಿನಕ್ಕಾಗಿ ಕಾಯುತ್ತಿದ್ದು ರಾಜ್ಯ ಸರ್ಕಾರವನ್ನು ಕಿತ್ತೂಗೆಯಲು ಕಾತುರರಾಗಿದ್ದಾರೆ. ಪದ್ಮನಾಭನಗರದಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿತ್ತು. ಕಸ ನಿರ್ವಹಣೆ, ರಸ್ತೆ ಅಭಿವೃದ್ಧಿ, ಸಂಚಾರ ದಟ್ಟಣೆ, ಸಿಗ್ನಲ್ ಫ್ರೀ ಕಾರಿಡಾರ್, ಮೇಲ್ಸೇತುವೆ ಹಾಗೂ ಕೆಳ ಸೇತುವೆಗಳ ನಿರ್ಮಾಣ ಮಾಡಲಾಗಿದೆ. ಪದ್ಮನಾಭನಗರ ಕ್ಷೇತ್ರದಲ್ಲೂ ಅಭಿವೃದ್ಧಿಯ ಹೊಸ ಶೆಕೆ ಆರಂಭವಾಗಿತ್ತು ಎಂದು ಹೇಳಿದರು.
ಐದು ವರ್ಷಗಳಲ್ಲಿ ರಾಜ್ಯಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಜತೆಗೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ ಎಂದು ದೂರಿದರು. ಈ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿ, ಸಾರಿಗೆ, ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಶಾಸಕನಾಗಿ ಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ಕಾಮಗಾರಿ, ಉದ್ಯಾನವನಗಳ ನಿರ್ಮಾಣ ಸೇರಿ ಸರ್ಕಾರಿ ಯೋಜನೆಗಳು ಬಡವರಿಗೆ, ಅರ್ಹರಿಗೆ ತಲುಪುವಂತೆ ಮಾಡಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.