ಜನ ಜೀವನಕ್ಕೆ ತೊಡಕಾಗದ ಬಂದ್‌

Team Udayavani, Jan 9, 2019, 9:02 AM IST

jana-jeevana.jpg

ಬೆಂಗಳೂರು: ಕಾರ್ಮಿಕ ಸಂಘನೆಗಳು ನೀಡಿದ್ದ ಭಾರತ್‌ ಬಂದ್‌ಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ದಿನಪೂರ್ತಿ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ರಜೆಯ ವಾತಾವರಣ ಕಂಡುಬಂತು. ಈ ನಡುವೆ ಶಾಲಾ ಕಾಲೇಜು ಹೊರತುಪಡಿಸಿ ಬಹುತೇಕ ಸರ್ಕಾರಿ, ಖಾಸಗಿ ಸಂಸ್ಥೆಗಳು ತೆರೆದಿದ್ದವು.

ಮಂಗಳವಾರ ಮುಂಜಾನೆ ಮೆಜೆಸ್ಟಿಕ್‌, ಯಶವಂತಪುರ, ಜಯನಗರ ಮೊದಲಾದ  ಕಡೆಗಳಿಂದ ಬಿಎಂಟಿಸಿ ಬಸ್‌ ಹೊರಟವಾದರೂ, ಮಲ್ಲೇಶ್ವರ, ಯಶವಂತಪುರ, ಚಿಕ್ಕಜಾಲ, ಶೇಷಾದ್ರಿಪುರ, ಬ್ಯಾಟರಾಯನಪುರದಲ್ಲಿ ಬಸ್‌ಗೆ ಕಲ್ಲು ಎಸೆದಿದ್ದರಿಂದ ದಿಢೀರನೇ ಬಸ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ಆಟೋ ಮತ್ತು ಟ್ಯಾಕ್ಸಿಗಳು ಎಂದಿನಂತೆ ಸಂಚರಿಸುತ್ತಿದ್ದರೂ, ವಾಹನ ಸಂಚಾರದ ಪ್ರಮಾಣ ತುಂಬ ಕಡಿಮೆ ಇತ್ತು. ಜನ ಜೀವನದ ಮೇಲೆ ಬಂದ್‌ ಯಾವುದೇ ಪರಿಣಾಮ ಬೀರಿರಲಿಲ್ಲ.

ಬೆಳಗ್ಗೆ 11 ಗಂಟೆಯವರೆಗೆ ಬಿಎಂಟಿಸಿ ಬಸ್‌ ಸಂಚಾರ ಬಹುತೇಕ ಕಡೆ ನಿಲ್ಲಿಸಲಾಗಿತ್ತು. 11 ಗಂಟೆಯ ನಂತರ ಎಲ್ಲ ರೂಟ್‌ಗಳಲ್ಲಿ ಬೆರಳೆಣಿಕೆಯ ಬಸ್‌ ಸಂಚಾರ ಆರಂಭವಾಯಿತು. ಮಧ್ಯಾಹ್ನ 2 ಗಂಟೆಯ ನಂತರ ಬಸ್‌ಗಳ ಸಂಖ್ಯೆ ಹೆಚ್ಚಾಯಿತು. ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಮಾಲ್‌ಗ‌ಳು ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದರೂ, ಚಲನಚಿತ್ರ ಪ್ರದರ್ಶನ ಎಂದಿನಂತೆ ನಡೆದಿದೆ.

ಆಸ್ಪತ್ರೆ, ಔಷಧಾಲಯ, ದಿನಸಿ ಅಂಗಡಿಗಳು, ಟೀ-ಕಾಫಿ ಸ್ಟಾಲ್‌ ಹಾಗೂ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿದ್ದವು. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಹಾಗೂ ನೃಪತುಂಗ ರಸ್ತೆಯ ಶಿಕ್ಷಣ ಇಲಾಖೆ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿದ್ದವು. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸೇವೆಗೆ ಹಾಜರಾಗಲು ಯಾವುದೇ ರೀತಿಯ ಅಡೆತಡೆಯಾಗಿರಲಿಲ್ಲ. ಕಚೇರಿಯಲ್ಲಿ ಹಾಜರಾತಿ ಸ್ವಲ್ಪ ಕಡಿಮೆ ಇತ್ತು. ಐಟಿ, ಬಿಟಿ ಹಾಗೂ ಹಲವು ಖಾಸಗಿ ಸಂಸ್ಥೆಗಳು ಮುಂಚಿತವಾಗಿಯೇ ರಜೆ ಘೋಷಣೆ ಮಾಡಿದ್ದವು. ಇನ್ನು ಕೆಲವು ಖಾಸಗಿ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ.

ಪರೀಕ್ಷೆ ಮುಂದೂಡಿಕೆ: ಸೋಮವಾರ ಸಂಜೆಯೇ ಶಾಲಾ ಕಾಲೇಜುಗಳಿಗೆ ರಜೆ ಘೋಸಿದ್ದರಿಂದ ಯಾವುದೇ ರೀತಿಯ ಶೈಕ್ಷಣಿಕ ಚುಟುವಟಿಕೆ ನಡೆದಿರಲಿಲ್ಲ. ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಕೇಂದ್ರ ವಿವಿಯ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ನಗರದಾದ್ಯಂತ ಇರುವ ಗಾರ್ಮೆಂಟ್‌ಗಳು ಬಂದ್‌ಗೆ ಬೆಂಬಲ ರಜೆ ಘೋಸಿದ್ದವು. ಕೆಲವು ಖಾಸಗಿ ಶಾಲೆಗಳಲ್ಲಿ ಬಂದ್‌ ನಿಮಿತ್ತ ಎರಡು ದಿನ ರಜೆ ಘೋಷಿಸಲಾಗಿದೆ ಎಂದು ಶಾಲಾ ಸೂಚನ ಫ‌ಲಕದಲ್ಲಿ ನೋಟಿಸ್‌ ಹಾಕಲಾಗಿದೆ.

ಬೆಳಗ್ಗೆಯಿಂದಲೇ ರಸ್ತೆಗೆ ಇಳಿದ ಕಾರ್ಮಿಕ ಸಂಘಟನೆಯ ಪ್ರಮುಖರು ಮತ್ತು ಕಾರ್ಯಕರ್ತರು, ಟೌನ್‌ಹಾಲ್‌ನಿಂದ ಕೆ.ಜಿ.ರಸ್ತೆ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನದವರೆಗೂ ಕೆಂಪು ಬಾವುಟ ಹಿಡಿದು ಬೃಹತ್‌ ಪ್ರತಿಭಟನೆ ನಡೆಸಿದರು. ಇನ್ನೊಂದೆಡೆ ಪೀಣ್ಯ ಎರಡನೇ ಹಂತದಿಂದ ಜಾಲಹಳ್ಳಿ ಕ್ರಾಸ್‌ವರೆಗೂ ಸುಮಾರು 3 ಸಾವಿರ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೆ.ಆರ್‌.ಪುರ ಸಹಿತ ನಗರದ ಹೊರವಲಯದ ಹಲವುಕಡೆ ಪ್ರತಿಭಟನಾ ರ್ಯಾಲಿ ನಡೆಯಿತು. ಕಾರ್ಮಿಕ ಸಂಘಟನೆಗಳ ಬಂದ್‌ ಕರೆಗೆ ಬೆಂಬಲ ಸೂಚಿಸಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು, ಗಿರೀಶ್‌ಗೌಡ ಮೊದಲಾದವರು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ರಸ್ತೆ ಮೇಲೆ ಮಲಗುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ವಹಿವಾಟು ಕುಸಿತ: ಕೆ.ಆರ್‌.ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ ಹಾಗೂ ಎಪಿಎಂಸಿ ಯಾರ್ಡ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯಶವಂತಪುರ ಎಪಿಎಂಸಿಗೆ ಮಂಗಳವಾರ ದವಸಧ್ಯನ ಮತ್ತು ಬೆಳೆಕಾಳು ತುಂಬಿಕೊಂಡು ರಾಜ್ಯದ ಬೇರೆ ಬೇರೆ ಕಡೆಗಳಿಂದ ಬಂದಿರುವ ಲಾರಿಗಳ ಸಂಖ್ಯೆ ಕಡಿಮೆ ಇತ್ತು. ದಿನಪೂರ್ತಿ ಸರಿಸುಮಾರು 50 ಕೋಟಿಯಷ್ಟು ನಡೆಯುತ್ತಿದ್ದ ವಹಿವಾಟು ಬಂದ್‌ನಿಂದ 30ರಿಂದ 25 ಕೋಟಿಗೆ ಇಳಿದೆ ಎಂದು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಬಿ.ಎಲ್‌.ಶಂಕರಪ್ಪ ಮಾಹಿತಿ ನೀಡಿದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.