ಜಾಫರ್ ಷರೀಫ್ ಗೆ ಕಣ್ಣೀರಿನ ವಿದಾಯ
Team Udayavani, Nov 27, 2018, 6:00 AM IST
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕ್ರಾಂತಿಯನ್ನೇ ಮಾಡಿದ್ದ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರಿಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ ಹೇಳಲಾಯಿತು.
ಸೋಮವಾರ ಮಧ್ಯಾಹ್ನ ಇಲ್ಲಿನ ನಂದಿದುರ್ಗ ರಸ್ತೆಯಲ್ಲಿರುವ ಖುದ್ದೂಸ್ ಸಾಹೇಬ್ “ಖಬರಸ್ತಾನ’ (ಸ್ಮಶಾನ)ದಲ್ಲಿ ಪತ್ನಿ ಮತ್ತು ಇಬ್ಬರು ಪುತ್ರರ ಸಮಾಧಿ ಜತೆಯಲ್ಲೇ “ದಫನ್’ (ಸಮಾಧಿ) ಮಾಡಲಾಯಿತು. ಇದಕ್ಕೂ ಮುನ್ನ ಸರ್ಕಾರದಿಂದ ಗೌರವ ಸಲ್ಲಿಸಲಾಯಿತು. ಬಳಿಕ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಜನಾಝಾ ನಮಾಜ್ ನೆರವೇರಿಸಲಾಯಿತು.
ಸರ್ಕಾರದಿಂದ ಗೌರವ
ಅಂತ್ಯಕ್ರಿಯೆಗೂ ಮುನ್ನ ಜಾಫರ್ ಷರೀಫ್ ಅವರ ಪಾರ್ಥಿವ ಶರೀರವನ್ನು ಕೆಪಿಸಿಸಿ ಕಚೇರಿಗೆ ತಂದು ಅಂತಿಮ ನಮನ ಸಲ್ಲಿಸಲಾಯಿತು. ಈ ವೇಳೆಗೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಗುಲಾಂ ನಬಿ ಅಜಾದ್, ಡಿಸಿಎಂ ಡಾ.ಜಿ.ಪರಮೇಶ್ವರ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಕಾಂಗ್ರೆಸ್ನ ಹಿರಿಯ ಮತ್ತು ಕಿರಿಯ ನಾಯಕರು ಉಪಸ್ಥಿತರಿದ್ದರು.
ನನ್ನ ಮತ್ತು ಜಾಫರ್ ಷರೀಫ್ ಅವರ ರಾಜಕೀಯ ಒಡನಾಟ 40 ವರ್ಷದ್ದು. ದೇಶ, ಪಕ್ಷ ಮತ್ತು ಸಮುದಾಯಕ್ಕೆ ಅವರು ಕೊಟ್ಟ ಕೊಡುಗೆ ಮರೆಯುವಂತಿಲ್ಲ. ಅನೇಕ ಸಂದರ್ಭಗಳಲ್ಲಿ, ಹಲವಾರು ವಿಚಾರಗಳಲ್ಲಿ ಇಬ್ಬರು ಸೇರಿ ತೀರ್ಮಾನ ತೆಗೆದುಕೊಂಡಿದ್ದೆವು.
– ಗುಲಾಂ ನಬಿ ಆಜಾದ್, ರಾಜ್ಯಸಭೆ ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.