Post Office: 8000 ಜಮೆ ವದಂತಿ; ಅಂಚೆ ಕಚೇರಿಗೆ ಜನ ದೌಡು


Team Udayavani, May 29, 2024, 11:12 AM IST

Post Office: 8000 ಜಮೆ ವದಂತಿ; ಅಂಚೆ ಕಚೇರಿಗೆ ಜನ ದೌಡು

ಬೆಂಗಳೂರು: ಅಂಚೆ ಇಲಾಖೆಯು ಪ್ರತಿ ಇಂಡಿಯನ್‌ ಪೋಸ್ಟ್‌  ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ) ಖಾತೆಗೆ 8,000 ರೂ. ಹಣ ಜಮೆ ಮಾಡಲಿದೆ ಎನ್ನುವ ಸುಳ್ಳು ವದಂತಿ ನಂಬಿದ ಜನರು ಅಂಚೆ ಕಚೇರಿಗಳಿಗೆ ತೆರಳಿ, ಐಪಿಪಿಬಿ ಖಾತೆ ತೆರೆಯಲು ಮುಂದಾಗುತ್ತಿದ್ದಾರೆ.

ಐಪಿಪಿಬಿ ಖಾತೆಯ ಮೂಲಕ ಗ್ರಾಹಕರು ತಮ್ಮ ಖಾತೆಯಿಂದ ಆನ್‌ಲೈನ್‌ ಮೂಲಕ ನೇರವಾಗಿ ವಿದ್ಯುತ್‌ ಬಿಲ್‌ ಪಾವತಿ, ಮೊಬೈಲ್‌ ರೀಚಾರ್ಜ್‌, ನೇರ ಹಣ ವರ್ಗಾವಣೆ ಸೇರಿದಂತೆ ಸೌಲಭ್ಯಗಳಿವೆ. ಜತೆಗೆ ಸರ್ಕಾರದ ವಿವಿಧ ಯೋಜನೆಗಳು ಈ ಖಾತೆಯೊಂದಿಗೆ ಜೋಡಿಸಲಾಗಿದೆ. ಆದರೆ ಇದೀಗ ಅಂಚೆ ಕಚೇರಿಯ ಐಪಿಪಿಬಿ ಖಾತೆಯಿದ್ದರೆ ಮಾಸಿಕ 8000 ರೂ. ಪಾವತಿ ಯಾಗಲಿದೆ ಎನ್ನುವ ವದಂತಿ ಸೃಷ್ಟಿಯಾಗಿದ್ದು, ಕಳೆದ 10 ದಿನಗಳಿಂದ ಬೆಂಗಳೂರು ಜಿಪಿಒ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆಯಲು ಮುಂಜಾನೆ 5 ಗಂಟೆಗೆ ಬಂದು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಕಂಡು ಬರುತ್ತಿದೆ.

ಜನರ ನಿಯಂತ್ರಣಕ್ಕೆ ಅಂಚೆ ಇಲಾಖೆ ಅಧಿಕಾರಿಗಳು ಪೊಲೀಸರ ಸಹಾಯ ಪಡೆದುಕೊಳ್ಳುತ್ತಿದ್ದಾರೆ. ಕಚೇರಿ ಮುಂದೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದರೂ, ಜನರು ಮಾತ್ರ ಖಾತೆ ಮಾಡುವುದರಲ್ಲಿ ಮುಳುಗಿ ಹೋಗಿದ್ದಾರೆ.

ಪ್ರತಿದಿನ 800 ಅರ್ಜಿ ಸಲ್ಲಿಕೆ:

ಬೆಂಗಳೂರು ಅಂಚೆ ಕಚೇರಿಯಲ್ಲಿ ಈ ಹಿಂದೆ ಪ್ರತಿದಿನ 50 ರಿಂದ 60 ಐಪಿಪಿಬಿ ಖಾತೆಯನ್ನು ತೆರೆಯಲಾಗುತ್ತಿತ್ತು. ಆದರೆ ಇದೀಗ 700 ರಿಂದ 800 ಖಾತೆಗಳನ್ನು ತೆರೆಯಲು ಅರ್ಜಿ ಸ್ವೀಕಾರವಾಗುತ್ತಿದೆ. ಇದುವರೆಗೆ ಸುಮಾರು 8,000 ಅರ್ಜಿ ಸ್ವೀಕರಿಸಲಾಗಿದೆ. ಸುಮಾರು 7 ಮಂದಿ ಪೋಸ್ಟ್‌ ಮಾಸ್ಟರ್‌ ಹೊಸ ಖಾತೆ ತೆರೆ ಯುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸು ತ್ತಿದ್ದಾರೆ. ಜನ ದಟ್ಟಣೆಯನ್ನು ಕಡಿಮೆಗೊಳಿ ಸಲು ಅಂಚೆ ಸಿಬ್ಬಂದಿ ಖಾತೆ ತೆರೆಯಲು ಟೋಕನ್‌ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಬೆಂಗಳೂರು ಸೇರಿದಂತೆ ಕಡೆಯಲ್ಲಿ ಪೋಸ್ಟ್‌ ಮಾಸ್ಟರ್‌ ಅವರೇ ಮನೆಗಳಿಗೆ ತೆರಳಿ, ಐಪಿಪಿಬಿ ಖಾತೆಯನ್ನು ತೆರೆಯಲು ಮುಂದಾಗಿದ್ದಾರೆ.

ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆದರೆ ಮಾಸಿಕ 8,000 ಜಮೆಯಾಗುತ್ತದೆ ಎನ್ನುವ ವಂದತಿ ನಂಬಿ ಜನರು ಅಂಚೆ ಕಚೇರಿಯತ್ತ ಮುಗಿ ಬೀಳುತ್ತಿದ್ದಾರೆ. ಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಸಹ ಖಾತೆ ತೆರೆಯಲು ಮುಂದಾಗುತ್ತಿದ್ದಾರೆ. -ಎಚ್‌.ಎಂ. ಮಂಜೇಶ್‌, ಮುಖ್ಯ ಪೋಸ್ಟ್‌ ಮಾಸ್ಟರ್‌,  ಬೆಂಗಳೂರು

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.