ಜನ ಸಾಮಾನ್ಯ ಪಕ್ಷದಿಂದ ಅಣುಕು ಶ್ರದ್ದಾಂಜಲಿ
Team Udayavani, Feb 4, 2018, 12:15 PM IST
ಬೆಂಗಳೂರು: ಜನ ಸಾಮಾನ್ಯರ ಪಕ್ಷದ ವತಿಯಿಂದ ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕಳಸಾ ಬಂಡೂರಿ ವಿವಾದದ ಕುರಿತು ಧ್ವನಿ ಎತ್ತದ ರಾಜ್ಯದ ಸಂಸದರ ವಿರುದ್ಧ “ಅಣುಕು ಶ್ರದ್ದಾಂಜಲಿ’ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಹದಾಯಿ ವಿವಾದ ಬಗೆಹರಿಸಲು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯದ ಸಂಸದರು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ. ಇಂತಹ ಸಂಸದರು ರಾಜ್ಯಕ್ಕೆ ಇದ್ದೂ ಇಲ್ಲದಂತೆ ಎಂದು ಅಣುಕು ಶ್ರದ್ದಾಂಜಲಿ ಮಾಡಿರುವುದಾಗಿ ಜನ ಸಾಮಾನ್ಯರ ಪಕ್ಷದ ಅಧ್ಯಕ್ಷ ಡಾ. ಅಯ್ಯಪ್ಪ ತಿಳಿಸಿದರು.
ಕಳಸಾ ಬಂಡೂರಿ ಕಾಮಗಾರಿಯನ್ನು ಜನರ ಶ್ರಮದಾನದಿಂದ ಮಾಡಲು ಅನುಮತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ಉತ್ತರ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕಾಲಿಡುವ ಮೊದಲು ನಿರ್ಧಾರ ಪ್ರಕಟಿಸಬೇಕು ಇಲ್ಲದಿದ್ದರೇ, ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.