ಸಿಬ್ಬಂದಿ ವೇತನಕ್ಕೆ ಹಣ ಬಳಸಲು ಅನುಮತಿ
Team Udayavani, Nov 23, 2018, 11:29 AM IST
ಬೆಂಗಳೂರು: ವಿದೇಶದಿಂದ ಹಣ ಪಡೆದು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದ “ಮೆಸರ್ಸ್ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಟ್ರಸ್ಟ್’ಗೆ ತನ್ನ ಸಿಬ್ಬಂದಿಗೆ ವೇತನ ಕೊಡಲು ಹಣ ಬಳಸುವಂತೆ ಹೈಕೋರ್ಟ್ ಗುರುವಾರ ಮಧ್ಯಂತರ ಅನುಮತಿ ನೀಡಿದೆ.
ಈ ಕುರಿತಂತೆ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀ ಆಕಾರ್ ಪಟೇಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ, 2018ರ ಅ.25ರಂದು ಜಾರಿ ನಿರ್ದೇಶನಾಲಯ ಟ್ರಸ್ಟ್‌ನ ಕಚೇರಿ ಮೇಲೆ ದಾಳಿ ನಡೆಸಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ದಾಳಿ ನಡೆದ ದಿನಾಂಕದ ಬಳಿಕ ಖಾತೆಗೆ ಬಂದಿರುವ ಹಣವನ್ನು ಸಿಬ್ಬಂದಿಯ ವೇತನಕ್ಕೆ ಬಳಕೆ ಮಾಡಿಕೊಳ್ಳಬಹುದು ಎಂದು ಮಧ್ಯಂತರ ಆದೇಶ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮಾ ಕುಮಾರ್, ಸಂಸ್ಥೆಗೆ ಯಾವುದೇ ವಿದೇಶಿ ಹಣ ಬಂದಿಲ್ಲ. ಅಲ್ಲದೇ “ವಿದೇಶಿ ವಿನಿಯಮ ನಿರ್ವಹಣಾ ಕಾಯ್ದೆಯ’ (ಫೆಮಾ) ಉಲ್ಲಂಘನೆಯಾಗಿಲ್ಲ. ಆದಾಗ್ಯೂ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದರಿಂದಾಗಿ ಹಣಕಾಸಿನ ವಹಿವಾಟು ನಿಂತು ಹೋಗಿದ್ದು, ಸಿಬ್ಬಂದಿಗೆ ವೇತನ ಕೊಡಲು ಆಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಸಿಬ್ಬಂದಿಗೆ ವೇತನ ನೀಡಲು ಹಣ ಬಳಕೆಗೆ ಮಧ್ಯಂತರ ಅನುಮತಿ ನೀಡಿತು. ಅಲ್ಲದೇ ಈ ಬಗ್ಗೆ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.