ತನಿಖೆ ಮುಂದುವರಿಸಲು ಸಿಸಿಬಿಗೆ ಅನುಮತಿ
Team Udayavani, Dec 16, 2018, 12:10 PM IST
ಬೆಂಗಳೂರು: ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣದ ನಾಲ್ಕನೇ ಆರೋಪಿ ಎಸ್.ರಮೇಶ್ ವಿರುದ್ಧ ತನಿಖೆ ಮುಂದುವರಿಸಲು ಸಿಸಿಬಿ ಪೊಲೀಸರಿಗೆ ಅನುಮತಿ ನೀಡಿರುವ ಹೈಕೋಟ್, ಆರೋಪಿಗೆ ನೋಟಿಸ್ ಜಾರಿ ಮಾಡಿಯೇ ವಿಚಾರಣೆಗೆ ಕರೆಸುವಂತೆ ಸೂಚನೆ ನೀಡಿದೆ.
ಪ್ರಕರಣ ರದ್ದು ಕೋರಿ ರಮೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶ ತೆರವುಗೊಳಿಸಿದೆ.
ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಬಹುದು. ಆದರೆ, ಅಗತ್ಯವಿದ್ದಾಗ ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿಯೇ ವಿಚಾರಣೆ ನಡೆಸಬೇಕು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು. ವಿಶೇಷ ಸರ್ಕಾರಿ ಅಭಿಯೋಜಕ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, ಅರ್ಜಿದಾರರು ಈಗಾಗಲೇ ಜಾಮೀನು ಪಡೆದಿದ್ದು, ಅವರನ್ನು ಬಂಧಿಸುವ ಅಗತ್ಯವಿಲ್ಲ. ಹೀಗಾಗಿ ತನಿಖೆ ಮುಂದುವರಿಸಲು ಅನುಮತಿ ನೀಡುವಂತೆ ಮನವಿ ಮಾಡಿದರು.
ರಮೇಶ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಪೊಲೀಸರು ವಿಚಾರಣೆ ನೆಪದಲ್ಲಿ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ಕೇವಲ ಒಂದು ತಿಂಗಳಲ್ಲಿ 6 ಬಾರಿ ವಿಚಾರಣೆಗೆ ಕರೆಸಿದ್ದಾರೆ ಎಂದು ದೂರಿದರು. ಇದಕ್ಕೆ ನ್ಯಾಯಪೀಠ, ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿದ ಬಳಿಕವೇ ಅರ್ಜಿದಾರರನ್ನು ವಿಚಾರಣೆಗೆ ಒಳಪಡಿಸಬೇಕು. ಅರ್ಜಿದಾರರೂ ಮುಂದಿನ ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.