Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Team Udayavani, Nov 21, 2024, 11:27 AM IST
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರ ದಿಂದ ಗೆದ್ದಿರುವ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 6ಕ್ಕೆ ಮುಂದೂಡಿದೆ.
ಈ ವಿಚಾರವಾಗಿ ನಂದಿನಿಲೇಔಟ್ ನಿವಾಸಿ ಬಿ. ಮೋಹನ್ ಕುಮಾರ್ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಲಿಖೀತ ಆಕ್ಷೇಪಣೆಗಳನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸುವಂತೆ ಶೋಭಾ ಪರ ವಕೀಲ ವೆಂಕಟೇಶ್ ಪಿ. ದಳವಾಯಿ ಅವರಿಗೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿತು. ಲೋಕಸಭೆ ಚುನಾವಣೆ ವೇಳೆ ಶೋಭಾ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅಪೂರ್ಣ ಮಾಹಿತಿ ಕೊಟ್ಟಿದ್ದಾರೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ಬಗ್ಗೆ ಮಾಹಿತಿಯನ್ನು ಮರೆ ಮಾಚಿದ್ದಾರೆ. ಹೀಗಾಗಿ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.