ತ್ರಿವಳಿ ತಲಾಖ್ ಕಾಯ್ದೆ ವಿರುದ್ಧ ಹೈಕೋರ್ಟ್‌ಗೆ ಅರ್ಜಿ
Team Udayavani, Aug 6, 2019, 10:43 AM IST
ಬೆಂಗಳೂರು: ತ್ರಿವಳಿ ತಲಾಖ್ ಪದ್ದತಿ ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಆರೀಫ್ ಜಮೀಲ್ ಈ ಸಂಬಂಧ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ವಕೀಲ ರಹ್ಮತ್‌ಉಲ್ಲಾ ಕೊತ್ವಾಲ್ ಅರ್ಜಿದಾರರ ಪರ ವಕಾಲತ್ತು ಹಾಕಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯು ಸಂವಿಧಾನದ ಪರಿಚ್ಛೇದ 14, 15, 21 ಹಾಗೂ 25ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು. ಅದೇ ರೀತಿ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಅನುಷ್ಠಾನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.