ದಂಧೆ ರೂಪ ಪಡೆದ ಮಾಲಿನ್ಯ ತಪಾಸಣೆ


Team Udayavani, Aug 3, 2019, 3:09 AM IST

dandhe

ಬೆಂಗಳೂರು: ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಕಲಿ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ (ಎಮಿಷನ್‌ ಸರ್ಟಿಫಿಕೇಟ್‌) ವಿತರಿಸುತ್ತಿರುವ ನೂರಾರು ಕೇಂದ್ರಗಳು ನಾಯಿಕೊಡೆಗಳಂತೆ ತಲೆಯೆತ್ತುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇದೊಂದು ಅಕ್ರಮ ದಂಧೆಯಾಗಿ ಬದಲಾಗುತ್ತಿದೆ. ಈ ದಂಧೆಯು ನಗರದ ವಾಯುಮಾಲಿನ್ಯದಲ್ಲಿ ಪರೋಕ್ಷವಾಗಿ ಕೊಡುಗೆ ನೀಡುತ್ತಿದೆ.

ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ವಂಚನೆ ಮತ್ತು ದುರುಪಯೋಗ ವಿಭಾಗದ ಅಧಿಕಾರಿಗಳ ತನಿಖೆಯಲ್ಲಿ ಈ ಅಂಶ ಬೆಳಕಿಗೆಬಂದಿದ್ದು, ಅನಧಿಕೃತ ಸಾಫ್ಟ್ವೇರ್‌ಗಳನ್ನು ಬಳಸಿಕೊಂಡು ನಕಲಿ ಪ್ರಮಾಣ ಪತ್ರ ನೀಡುತ್ತಿರುವುದು ಹಾಗೂ ಸರ್ಕಾರದ ಅಧಿಕೃತ ಹಾಲೋಗ್ರಾಂಗಳನ್ನು ನಕಲು ಮಾಡುತ್ತಿರುವುದು ಕಂಡುಬಂದಿದೆ. ಈಗಾಗಲೇ ವಾಹನಗಳದಟ್ಟಣೆಯಿಂದ ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಈ ಮಧ್ಯೆ ನಕಲಿ ಪ್ರಮಾಣಪತ್ರದ ಹಾವಳಿಯು ಮತ್ತಷ್ಟು ಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

ಇದರೊಂದಿಗೆ ಅಕ್ರಮ ದಂಧೆಕೋರರು ವಿತರಿಸುತ್ತಿರುವ ನಕಲಿ ಪರೀಕ್ಷಾ ಪ್ರಮಾಣ ಪತ್ರಗಳಿಂದ ಪರಿಸರ ಹಾನಿ ಮಾತ್ರವಲ್ಲ; ಸಾರ್ವಜನಿಕರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್‌ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಬೆನ್ನಲ್ಲೇ ತನಿಖೆ ಕೈಗೊಂಡಿದ್ದ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು, ನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ 894 ಮಾಲಿನ್ಯ ಪರೀಕ್ಷಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ 650 ಕೇಂದ್ರಗಳ ಪರಿಶೀಲನೆ ನಡೆಸಿದ್ದು, ನಕಲಿ ಪ್ರಮಾಣಪತ್ರ ವಿತರಿಸುತ್ತಿದ್ದ 21 ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಅಕ್ರಮ ದಂಧೆ ಹೇಗೆ?: ನಿಯಮದ ಪ್ರಕಾರ ಮಾಲಿನ್ಯ ನಿಯಂತ್ರಣ ಪರೀಕ್ಷಾ ಕೇಂದ್ರ (ಎಮಿಷನ್‌ ಟೆಸ್ಟಿಂಗ್‌ ಸೆಂಟರ್‌) ತೆರೆಯಲು ಸಾರಿಗೆ ಇಲಾಖೆ ಅನುಮತಿ ಕಡ್ಡಾಯ. ಅರ್ಜಿ ಸಲ್ಲಿಸುವ ವ್ಯಕಿ ಕೇಂದ್ರದ ಸ್ಥಳದ ಸುತ್ತಳತೆ ಹಾಗೂ ಇತರೆ ಮಾಹಿತಿಯನ್ನು ಅರ್ಜಿ ನಮೂದಿಸಿ, ಎರಡು ಸಾವಿರ ರೂ. ಶುಲ್ಕ ಹಾಗೂ 10 ಸಾವಿರ ರೂ. ಠೇವಣಿ ಇಡಬೇಕು. ಬಳಿಕ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಪರವಾನಿಗೆ ನೀಡುತ್ತಾರೆ. ಇದರೊಂದಿಗೆ ಇಲಾಖೆ ಜತೆ ಒಡಂಬಡಿಕೆ ಮಾಡಿಕೊಂಡಿರುವ ಎವಿಎಂ ಸಂಸ್ಥೆಯ ಯಂತ್ರೋಪಕರಣ ಹಾಗೂ ಸಾಫ್ಟ್ವೇರ್‌ ಖರೀದಿಸಬೇಕು. ಬಳಿಕ ಇಲಾಖೆ ಕೊಡುವ ಹಾಲೋಗ್ರಾಂಗಳನ್ನು ಪರೀಕ್ಷಾ ಪ್ರಮಾಣ ಪತ್ರಕ್ಕೆ ಅಂಟಿಸಿ ಅಧಿಕೃತವಾಗಿ ವಾಹನ ಸವಾರರಿಗೆ ವಿತರಿಸಬೇಕು.

ಆದರೆ, ಕೆಲ ವ್ಯಕ್ತಿಗಳು ಸಾರಿಗೆ ಇಲಾಖೆಯನ್ನು ಸಂಪರ್ಕಿಸದೆ ನೇರವಾಗಿ ಕೇಂದ್ರಗಳನ್ನು ತೆರೆದು, ಖಾಸಗಿ ಕಂಪನಿಯ ಯಂತ್ರೋಪಕರಣಗಳನ್ನು ಬಳಸಿಕೊಂಡು, ಇಲಾಖೆಯ ಸಾಫ್ಟ್ವೇರ್‌ ಮಾದರಿಯ ನಕಲಿ ಸಾಫ್ಟ್ವೇರ್‌ಗಳನ್ನು ಕಂಪ್ಯೂಟರ್‌ಗೆ ಅಳವಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ನಕಲಿ ಹಾಲೋಗ್ರಾಂಗಳನ್ನು ತಾವೇ ಸಿದ್ಧಪಡಿಸಿಕೊಂಡು ನಕಲಿ ಪ್ರಮಾಣ ಪತ್ರ ವಿತರಣೆ ಮಾಡುತ್ತಿದ್ದಾರೆ ಎಂಬುದು ತನಿಖೆ ವೇಳೆ ಬಯಲಾಗಿದೆ.

ಡಿಸೇಲ್‌ ವಾಹನಗಳು 60ರಿಂದ 65 ಹ್ಯಾಟ್ರಿಡ್ಜ್ ಸ್ಮೋಕ್‌ ಯೂನಿಟ್‌(ಎಚ್‌ಎಸ್‌ಯು) ಇರಬೇಕು. ಪೆಟ್ರೋಲ್‌ ವಾಹನಗಳು “ಸಿ ಓ’ (ಕಾರ್ಬನ್‌ ಮೊನಾಕ್ಸೈಡ್‌) ಇಂತಿಷ್ಟು ಪ್ರಮಾಣದಲ್ಲಿ ಇರಬೇಕು ಎಂಬ ನಿಯಮ ಇದೆ. ಆದರೆ, ಈ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ದಂಧೆಕೋರರು ಹೆಚ್ಚು ವಿಷಯುಕ್ತ ಹೊಗೆ ಉಗುಳುವ ವಾಹನಗಳಿಗೂ ದೃಢಿಕೃತ ಪ್ರಮಾಣ ಪತ್ರ ವಿತರಣೆ ಮಾಡುತ್ತಿದ್ದಾರೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಹೇಳಿದರು.

ಪರಿಶೀಲನೆ ಹೀಗೆ: ಪರೀಕ್ಷಾ ಕೇಂದ್ರಗಳ ವಿರುದ್ಧ ಆರೋಪ ಕೇಳಿ ಬಂದ ಕೂಡಲೇ ದಾಳಿ ನಡೆಸಲಾಗುತ್ತಿತ್ತು. ಆದರೆ, ಕಳೆದೊಂದು ದಶಕಗಳಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ವಾಹನ ಅಥವಾ ಮಾಲಿನ್ಯ ಪರೀಕ್ಷಾ ಕೇಂದ್ರಗಳ ಮೇಲೆ ಹೆಚ್ಚು ನಿಗಾವಹಿಸಲು ಪ್ರತ್ಯೇಕ ವಿಭಾಗ ತರೆಯಲಾಗಿದ್ದು, ಅಗತ್ಯಬಿದ್ದಲ್ಲಿ ಕೂಡಲೇ ಅಧಿಕೃತ ಯಂತ್ರಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ.

ಒಂದು ವೇಳೆ ನಕಲಿ ಪ್ರಮಾಣ ಪತ್ರ ವಿತರಣೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದರೆ ಸಾರ್ವಜನಿಕರು ಕೂಡಲೇ ಸಾರಿಗೆ ಇಲಾಖೆಗೆ ಮಾಹಿತಿ ನೀಡಬಹುದು. ನಂತರ ತಪ್ಪಿತಸ್ಥ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿ ವಿವರಿಸಿದರು. ಆದರೆ, ಇದುವರೆಗೂ ರಾಜ್ಯದ ಯಾವುದೇ ಅಕ್ರಮ ಪರೀಕ್ಷಾ ಕೇಂದ್ರಗಳ ಮೇಲೆ ಸ್ವಯಂಪ್ರೇರಿತವಾಗಿ ಇಲಾಖೆ ದಾಳಿಯೇ ಮಾಡಿಲ್ಲ ಎಂಬ ಅಂಶವು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಗೊಂದಲವೇ ಅಕ್ರಮಕ್ಕೆ ದಾರಿ?: ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರ ತಪಾಸಣೆ ಗೊಂದಲವೇ ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗಿದೆ. ಮೋಟಾರ್‌ ವಾಹನ ಕಾಯ್ದೆ ಪ್ರಕಾರ ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸರಿಗೆ ಮಾತ್ರ ಹೊಗೆ ಉಗುಳುವ ವಾಹನಗಳ ತಪಾಸಣೆ ಮಾಡುವ ಅಧಿಕಾರ ಇದೆ. ಆದರೆ, ಈ ಎರಡು ಇಲಾಖೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ಮಾಲಿನ್ಯ ತಪಾಸಣಾ ಯಂತ್ರೋಪಕರಣಗಳು ಇಲ್ಲದಿರುವುದರಿಂದ ವಾಹನಗಳ ಹೊಗೆ ಪ್ರಮಾಣ ಪರೀಕ್ಷೆ ಮಾಡುವುದಿಲ್ಲ. ಆದರೆ, ಪ್ರಮಾಣ ಪತ್ರದ ಬಗ್ಗೆ ಮಾತ್ರ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎನ್ನುತ್ತಾರೆ ಸಂಚಾರ ಪೊಲೀಸರು. ಇನ್ನು ಸಾರಿಗೆ ಇಲಾಖೆ ಬಳಿ ಉಪಕರಣಗಳು ಇದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಇದು ನಕಲಿ ಪ್ರಮಾಣ ಪತ್ರಗಳ ವಿತರಣೆಗೆ ಮತ್ತಷ್ಟು ಅವಕಾಶ ನೀಡಿದಂತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸುತ್ತವೆ.

ಆರೋಗ್ಯದ ಮೇಲೆ ಪರಿಣಾಮ: ಪೆಟ್ರೋಲ್‌ ಆಧಾರಿತ ವಾಹನಗಳು ಉಗುಳುವ ಕಾರ್ಬನ್‌ಮೋನಾಕ್ಸೈಡ್‌ ಮತ್ತು ಹೈಡ್ರೋಕಾರ್ಬನ್‌ ಹಾಗೂ ಡಿಸೇಲ್‌ ವಾಹನಗಳಿಂದ ಹೊರ ಬರುವ ಹೊಗೆಯಿಂದ ನೈಟ್ರೋಜನ್‌ ಆಕ್ಸಿಡ್‌, ಸಲ್‌ಫ್ಯೂರ್‌ ಡೈಆಕ್ಸಿಡ್‌ನಿಂದ ಪರಿಸರ ಮತ್ತು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಮಂಡಳಿಯಿಂದ ತಪಾಸಣೆ ಇಲ್ಲ!: ಪರಿಸರದಲ್ಲಿ ಉಂಟಾಗುವ ನೀರು, ಶಬ್ಧ ಮತ್ತು ವಾಯು ಮಾಲಿನ್ಯದ ಬಗ್ಗೆ ಮಾತ್ರ ಮಾಹಿತಿ ಸಂಗ್ರಹಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ ಕೇಂದ್ರಗಳಾಗಲಿ, ಹೊಗೆ ಉಗುಳುವ ವಾಹನಗಳ ತಪಾಸಣೆ ಮಾಡುವುದಿಲ್ಲ. ಮಾಲಿನ್ಯ ಪರೀಕ್ಷಾ ಕೇಂದ್ರಗಳಿಗೆ ಪರವಾನಿಗೆ ಕೊಡುವುದು ಹಾಗೂ ವಾಹನ ತಪಾಸಣೆ ಮಾಡುವುದು ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರ ಕೆಲಸ. ಒಂದು ವೇಳೆ ಸಾರಿಗೆ ಇಲಾಖೆ ಅಥವಾ ಸಂಚಾರ ಪೊಲೀಸರ ಮನವಿ ಮೇರೆಗೆ ಇಲಾಖೆಯ ಅಧಿಕಾರಿ ಹಾಗೂ ಮಾಲಿನ್ಯ ಪರೀಕ್ಷಾ ಯಂತ್ರವನ್ನೊಳಗೊಂಡ ವಾಹನ ಕಳುಹಿಸುತ್ತೇವೆ. ಅಕ್ರಮ ಕೇಂದ್ರಗಳ ಬಗ್ಗೆ ಸಾರಿಗೆ ಇಲಾಖೆಯೇ ನಿಗಾ ವಹಿಸಬೇಕು ಎನ್ನುತ್ತಾರೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು.

ಬಿಎಂಟಿಸಿ ಬಸ್‌ಗಳ ಪರೀಕ್ಷೆ: ನಗರದಲ್ಲಿ ಸಂಚರಿಸುವ ಸಾವಿರಾರು ಬಿಎಂಟಿಸಿ ಬಸ್‌ಗಳ ಹೊಗೆ ತಪಾಸಣೆ ನಡೆಸಲು ಘಟಕಗಳಲ್ಲಿ ಪ್ರತ್ಯೇಕ ಯಂತ್ರ ಅಳವಡಿಸಿಕೊಂಡಿದ್ದು, ಪ್ರತಿ ಮೂರು ದಿನಕ್ಕೊಮ್ಮೆ ಎಲ್ಲ ಬಸ್‌ಗಳನ್ನು ಪರಿಶೀಲಿಸುತ್ತಾರೆ. ಆದರೂ ನಗರದಲ್ಲಿ ಸಂಚರಿಸುವ ಬಸ್‌ಗಳು ದಟ್ಟವಾದ ಹೊಗೆ ಉಗುಳುತ್ತಿವೆ. ಹೀಗಾಗಿ ಬಿಎಂಟಿಸಿ ಘಟಕಗಳಲ್ಲಿರುವ ತಪಾಸಣಾ ಯಂತ್ರಗಳನ್ನು ಪರಿಶೀಲಿಸುವ ಅಗತ್ಯವಿದೆ ಎನ್ನುತ್ತಾರೆ ಸಂಚಾರ ಪೊಲೀಸ್‌ ಅಧಿಕಾರಿಯೊಬ್ಬರು.

ಮಾಲಿನ್ಯ ಪ್ರಮಾಣ ಪತ್ರ ವಿತರಣಾ ಕೇಂದ್ರಗಳು (ಸಾರಿಗೆ ಇಲಾಖೆ ಪ್ರಕಾರ)
ಬೆಂಗಳೂರು 356
ಬೆಂಗಳೂರು ಹೊರತು ಪಡಿಸಿ 654
ಒಟ್ಟು- 1,010

ನಕಲಿ ಸೆಂಟರ್‌ಗಳ ಮೇಲೆ ನಿಗಾವಹಿಸಲಾಗಿದ್ದು, 21 ಕೇಂದ್ರಗಳ ವಿರುದ್ಧ ವಿಲ್ಸನ್‌ಗಾರ್ಡ್‌ನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಸರದ ಮೇಲೆ ಉಂಟಾಗುವ ಪರಿಣಾಮವನ್ನು ಪರಿಗಣಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಅಕ್ರಮ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ ವಿತರಿಸುವ ಕೇಂದ್ರಗಳ ಮೇಲೆ ಇ-ಆಡಳಿತ ಮತ್ತು ಪರಿಸರ ವಿಭಾಗದ ಅಧಿಕಾರಿಗಳಿಂದ ವಿಶೇಷ ಕಾರ್ಯಾಚರಣೆಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅಕ್ರಮ ದಂಧೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ.
-ಶಿವರಾಜ್‌ ಬಿ.ಪಾಟೀಲ್‌, ಅಪರ ಸಾರಿಗೆ ಆಯುಕ್ತರು

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.