ಐವರು ಪಿಕ್‌ಪಾಕೆಟ್ ಅಣ್ಣ ತಮ್ಮಂದಿರು ಸೆರೆ
Team Udayavani, Jul 26, 2023, 1:35 PM IST
ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣ, ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಸಿ ಗಮನ ಬೇರೆಡೆ ಸೆಳೆದು ನಗದು, ಚಿನ್ನಾಭರಣ ಕಳವು ಮಾಡುತ್ತಿದ್ದ ಒಂದೇ ಕುಟುಂಬದ ಐವರು ಸೇರಿ ಆರು ಜೇಬುಗಳ್ಳರನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸವನಗುಡಿ ನಿವಾಸಿಗಳಾದ ಕದ್ರಿವೇಲು, ರಘು, ಕನ್ಯಾಕುಮಾರ್, ಮಹೇಶ್, ಸುಂದರ್ ರಾಜ್ ಹಾಗೂ ಸೈಯದ್ ಸಲೀಂ ಬಂಧಿತರು. ಆರೋಪಿಗಳ ಪೈಕಿ ಸೈಯದ್ ಸಲೀಂ ಹೊರತು ಪಡಿಸಿ ಇತರೆ ಆರೋಪಿಗಳು ಒಂದೇ ಕುಟುಂಬದವರಾಗಿದ್ದಾರೆ. ಒಂದೇ ಮನೆಯಲ್ಲಿ ವಾಸವಾಗಿದ್ದಾರೆ. ಬಂಧಿತರಿಂದ 1.50 ಲಕ್ಷ ರೂ. ನಗದು, 29 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಸಿಟಿ ಮಾರುಕಟ್ಟೆಯಿಂದ ನಿಮ್ಹಾನ್ಸ್ ಕಡೆ ಬಿಎಂಟಿಸಿ ಬಸ್‌ನಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ಹೋಗುತ್ತಿದ್ದರು. ಆಗ ಆರೋಪಿಗಳು ಗಮನ ಬೇರೆಡೆ ಸೆಳೆದು ಪತ್ನಿ ಚಿಕಿತ್ಸೆಗೆಂದು ಕೊಂಡೊಯ್ಯುತ್ತಿದ್ದ 1 ಲಕ್ಷ ರೂ. ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಎಂಟು ಮಂದಿಯ ಈ ತಂಡದಲ್ಲಿ ಐವರು ಅಣ್ಣ-ತಮ್ಮಂದಿರಿದ್ದು, ನಿತ್ಯ ಕೆಲಸಕ್ಕೆ ಹೋಗುವ ರೀತಿ ಮನೆಯಿಂದ ಹೊರಟು ಕಳ್ಳತನ ಮಾಡಿಕೊಂಡು ರಾತ್ರಿಯಾಗುತ್ತಿದ್ದಂತೆ ಮನೆ ಸೇರಿಕೊಳ್ಳುತ್ತಿದ್ದರು. ಬಳಿಕ ಎಲ್ಲರೂ ಹಂಚಿಕೊಳ್ಳುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಪ್ರಮುಖವಾಗಿ ಬಿಎಂಟಿಸಿ ಬಸ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು, ಹೆಚ್ಚು ಜನರಿರುವ ಬಸ್‌ಗಳಲ್ಲಿ ಜೇಬು ಕಳವು ಮಾಡುತ್ತಿದ್ದರು. ಐದಾರು ವರ್ಷಗಳಿಂದ ಇದೇ ಕೃತ್ಯದಲ್ಲಿ ತೊಡಗಿದ್ದು, ಆರೋಪಿಗಳ ಬಂಧನದಿಂದ ಹಲಸೂರು ಗೇಟ್, ಉಪ್ಪಾರಪೇಟೆ, ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿ ಕೃತ್ಯವೆಸಗಿದ್ದರು ಎಂದು ಪೊಲೀಸರು ಹೇಳಿದರು.
ಸಂಪಂಗಿರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25 ವರ್ಷಗಳಿಂದ ಮನೆಗಳ್ಳತನವೇ ಕಾಯಕ!:
ಬೆಂಗಳೂರು: ಮನೆ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಲ್ಲಸಂದ್ರ ನಿವಾಸಿ ರಾಮಸ್ವಾಮಿ (46) ಬಂಧಿತ.
ಆರೋಪಿಯಿಂದ 30 ಲಕ್ಷ ರೂ. ಮೌಲ್ಯದ 602 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರ ಬೀಗ ಒಡೆದು ಚಿನ್ನಾಭರಣ ಕಳವು ಮಾಡಿದ್ದ. ಈ ದೂರಿನ ಮೇರೆಗೆ ಬಂಧಿಸಲಾಗಿದೆ. ಈತ 25 ವರ್ಷಗಳಿಂದ ಮನೆ ಕಳವು ಮಾಡುವುದನ್ನು ಕಾಯಕ ಮಾಡಿಕೊಂಡಿ ದ್ದಾನೆ. ಆತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳಲ್ಲಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.