ಸಸಿಗಳನ್ನು ನೆಟ್ಟು ನಗರ ಹಸಿರಾಗಿಸಿ
Team Udayavani, Dec 9, 2018, 12:20 PM IST
ಬೆಂಗಳೂರು: ಬೆಂಗಳೂರಿನಲ್ಲಿ ಪರಿಸರ ನಾಶವಾಗಿ ಕಾಂಕ್ರೀಟ್ ನಗರವಾಗಿ ಪರಿವರ್ತನೆಯಾಗಿದ್ದು, ಪ್ರತಿಯೊಬ್ಬರೂ ಮರಗಳನ್ನು ನೆಟ್ಟು, ಬೆಳೆಸುವ ಮೂಲಕ ನಗರವನ್ನು ಹಸಿರಾಗಿಸಬೇಕಿದೆ ಎಂದು ಮೇಯರ್ ಗಂಗಾಂಬಿಕೆ ಕರೆ ನೀಡಿದರು.
ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆ ಅನಾವರಣ, ಉದ್ಯಾನ, ಆಟದ ಮೈದಾನ ಹಾಗೂ ಯೋಗ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬ ವ್ಯಕ್ತಿಗೆ ಏಳು ಮರಗಳಿರಬೇಕೆಂದು ಪರಿಸರವಾದಿಗಳು ಹೇಳುತ್ತಾರೆ. ಆದರೆ, ನಗರದಲ್ಲಿ ಏಳು ಜನರಿಗೆ ಒಂದು ಮರವಿದ್ದು, ಉತ್ತಮ ಆಮ್ಲಜನಕ ದೊರೆಯದಂತಾಗಿದೆ ಎಂದರು.
ಪರಿಸರ ನಾಶವು ಮನ್ಯಷ್ಯನ ಮೇಲೆ ನೇರ ಪರಿಣಾಮ ಬೀರಲಿದ್ದು, ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಬೆಂಗಳೂರು ನಗರವನ್ನು ಹಸಿರು ನಗರವನ್ನಾಗಿ ಪರಿವರ್ತಿಸಲು ಪ್ರತಿಯೊಬ್ಬ ನಾಗರಿಕರೂ ಸಸಿ ನೆಟ್ಟು ಸಂರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ, ಉದ್ಯಾನವನ್ನು ಕೇವಲ ಮೂರು ತಿಂಗಳಲ್ಲಿ ಭಿವೃದ್ಧಿಪಡಿಸಲಾಗಿದ್ದು, ಆಂಗ್ಲರ ವಿರುದ್ಧ ಹೋರಾಡಿದ ಸುಭಾಷ್ ಚಂದ್ರ ಬೋಸ್ ಅವರ ಹೆಸರನ್ನು ಉದ್ಯಾನಕ್ಕೆ ನಾಮಕರಣ ಮಾಡಿರುವುದು ಅರ್ಥಪೂರ್ಣವಾಗಿದೆ. ಮುಂದಿನ ದಿನಗಳಲ್ಲಿ ಗೋವಿಂದರಾಜನಗರದಲ್ಲಿ ಐಎಎಸ್ ತರಬೇತಿ ಕೇಂದ್ರ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1.75 ಕೋಟಿ ರೂ. ವೆಚ್ಚದಲ್ಲಿ ಇ-ಲೈಬ್ರರಿ ಹಾಗೂ 200 ಹಾಸಿಗೆಗಳ ಆಸ್ಪತ್ರೆಯನ್ನು ಪಾಲಿಕೆ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರನ್ನು ಸ್ಮರಿಸಿದ ಅವರು, ಅನಂತಕುಮಾರ್ ಅವರು ಅಭಿವೃದ್ಧಿ ವಿಚಾರದಲ್ಲಿ ಎಂದೂ ರಾಜಕಾರಣ ಮಾಡಿರಲಿಲ್ಲ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ಸಾಗಬೇಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಉಪಮೇಯರ್ ಭದ್ರೇಗೌಡ, ಪಾಲಿಕೆ ಸದಸ್ಯರಾದ ಶಿಲ್ಪಾ ಶ್ರೀಧರ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.