ಬೆಂಗಳೂರಿನಿಂದ ಕಾಶ್ಮೀರಕ್ಕೆ ಪ್ಲಾಸ್ಮಾ ರವಾನೆ
Team Udayavani, Sep 2, 2020, 12:01 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದ ಎಚ್‌ಸಿಜಿ ಆಸ್ಪತ್ರೆಯ ಪ್ಲಾಸ್ಮಾ ಬ್ಯಾಂಕ್ ನಿಂದ ಕಾಶ್ಮೀರದ ಶ್ರೀನಗರದ ಇಬ್ಬರು ಕೋವಿಡ್ ಸೋಂಕಿತರಿಗೆ ವಿಮಾನದ ಮೂಲಕ ಪ್ಲಾಸ್ಮಾವನ್ನು ಕಳುಹಿಸಿಕೊಡಲಾಗಿದೆ.
ಶ್ರೀನಗರದ ಸರ್ಕಾರಿ ಆಸ್ಪತ್ರೆಯಲ್ಲಿ 61 ವರ್ಷ ವೃದ್ಧೆ ಮತ್ತು 63 ವರ್ಷದ ವೃದ್ಧ ಕೋವಿಡ್ ದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆ ಪ್ಲಾಸ್ಮಾ ಚಿಕಿತ್ಸೆಗೆ ಅನಿವಾರ್ಯವಾಗಿತ್ತು. ಸೋಂಕಿತರ ಸ್ಥಳೀಯ ಸಂಬಂಧಿಗಳು ಎಚ್‌ಸಿಜಿ ಆಸ್ಪತ್ರೆಯ ಪ್ಲಾಸ್ಮಾ ಬ್ಯಾಂಕ್‌ನಲ್ಲಿ ಪ್ಲಾಸ್ಮಾ ನೆರವಿಗೆ ಮನವಿ ಮಾಡಿದ್ದರು. ಹೀಗಾಗಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಗೋ ವಿಮಾನ ಸಿಬ್ಬಂದಿ ನೆರವು ಪಡೆದು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಎರಡು ಯುನಿಟ್ ಪ್ಲಾಸ್ಮಾವನ್ನು ಶ್ರೀನಗರಕ್ಕೆ ಕಳುಹಿಸಲಾಗಿದೆ ಎಂದು ಪ್ಲಾಸ್ಮಾ ಬ್ಯಾಂಕಿನ ಮುಖ್ಯಸ್ಥರಾದ ಡಾ. ವಿಶಾಲ್ ರಾವ್ ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಯಶಸ್ವಿಯಾಗಿ ಶ್ರೀನಗರಕ್ಕೆ ಪ್ಲಾಸ್ಮಾ ತಲುಪಿದ್ದು, ಸೋಂಕಿತರ ಚಿಕಿತ್ಸೆಗೆ ಬಳಿಸಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಎಚ್‌ಸಿಜಿ ಆಸ್ಪತ್ರೆಯು ಐಸಿಎಟಿಟಿ ಫೌಂಡೇಶನ್ ಆಶ್ರಯದಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಿದೆ. ಇಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರಿಂದ ಪ್ಲಾಸ್ಮಾವನ್ನು ದಾನವಾಗಿ ಪಡೆದು ಆರೋಗ್ಯ ಗಂಭೀರವಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಲಾಗುತ್ತಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದ 250 ಮಂದಿ ಪ್ಲಾಸ್ಮಾ ದಾನ ಮಾಡಿದ್ದು, ಇದನ್ನು 340 ಕ್ಕೂ ಹೆಚ್ಚು ಸೋಂಕಿತರ ಚಿಕಿತ್ಸೆಗೆ ಬಳಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
…………………………………………………………………………………………………………………………..
ಮೊಬೈಲ್ ವಾಹನ: 2.50 ಲಕ್ಷ ಮಂದಿಗೆ ಪರೀಕ್ಷೆ : ಬೆಂಗಳೂರು: ಮೊಬೈಲ್ ವಾಹನದ ಮೂಲಕ ಇಲ್ಲಿಯವರೆಗೆ ಒಟ್ಟು 2,57,263 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ನಗರದಲ್ಲಿ ಸೋಂಕಿತರನ್ನು ಶೀಘ್ರ ಪತ್ತೆ ಮಾಡುವ ಉದ್ದೇಶದಿಂದ ಪಾಲಿಕೆಯು 232 ಮೊಬೈಲ್ ವಾಹನದ ಮೂಲಕ ಕೊರೊನಾ ಟೆಸ್ಟ್ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು. ಇಲ್ಲಿಯವರೆಗೆ ಒಟ್ಟು 2,57,263 ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. 84,170 ಜನರನ್ನು ರ್ಯಾಪಿಡ್ ಆ್ಯಂಟಿಜನ್ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು 1,73,093 ಜನರಿಗೆ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕ ಪ್ರದೇಶಗಳಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಮೊಬೈಲ್ ವಾಹನಗಳಲ್ಲಿ ಶೇ.20ರಷ್ಟು ಜನರೂ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಈ ಮಧ್ಯೆ ಮೊಬೈಲ್ ವಾಹನದ ಮೂಲಕ 2.50 ಲಕ್ಷಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಗಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.