ಡಾಂಬರೀಕರಣದಲ್ಲಿ ಪ್ಲಾಸ್ಟಿಕ್‌ ಬಳಕೆ


Team Udayavani, Oct 29, 2017, 11:57 AM IST

siddu-georgee.jpg

ಬೆಂಗಳೂರು: ಇನುಮುಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ರಸ್ತೆ ಡಾಂಬರೀಕರಣದಲ್ಲಿ ಕಚ್ಚಾ ವಸ್ತುವಾಗಿ ಪ್ಲಾಸ್ಟಿಕ್‌ ಬಳಸಲು ನಿರ್ಧರಿಸಲಾಗಿದೆ. ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಬಿಬಿಎಂಪಿ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. 

ನಗರದಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ. ಆದರೂ ಪ್ಲಾಸ್ಟಿಕ್‌ ಹಾವಳಿ ಮಾತ್ರ ತಗ್ಗಿಲ್ಲ. ಇದು ಕಸ ವಿಲೇವಾರಿಗೂ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ರಸ್ತೆ ಡಾಂಬರೀಕರಣಕ್ಕೆ ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. 

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯಕ್ತ ಎನ್‌. ಮಂಜುನಾಥ ಪ್ರಸಾದ್‌, ನಗರದಲ್ಲಿ ಈವರೆಗೆ ಒಂದು ಲಕ್ಷ ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಂಡು 1.67 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ, ಕೇಸು ದಾಖಲು ಮಾಡುವ ಅಧಿಕಾರ ನಮಗೆ ಇಲ್ಲ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಡಾಂಬರೀಕರಣಕ್ಕೆ ಪ್ಲಾಸ್ಟಿಕ್‌ ಬಳಸಿಕೊಳ್ಳಲು ನಿರ್ಣಯಿಸಲಾಗಿದೆ. ಈ ಸಂಬಂಧ ಸೋಮವಾರ ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ ಎಂದು ತಿಳಿಸಿದರು. 

ಇದರಲ್ಲಿ “ವಿಜಿ-10′ ಮತ್ತು “ವಿಜಿ-30′ ಎಂಬ ಎರಡು ಮಾದರಿಗಳಿವೆ. ವಿಜಿ-30ರಲ್ಲಿ ಹೈಗ್ರೇಡ್‌ ವಿಟಮಿನ್‌ ಇರುತ್ತದೆ. ಇದನ್ನು ಎಸ್‌ಆರ್‌ ದರದಲ್ಲಿ ಸೇರಿಸಲಾಗಿದೆ. ಡಾಂಬರೀಕರಣದಲ್ಲಿ ಪ್ಲಾಸ್ಟಿಕ್‌ ಬಳಸುವುದರಿಂದ ಹೆಚ್ಚು ಬಾಳಿಕೆ ಬರುತ್ತದೆ ಎಂದೂ ಹೇಳಿದರು.

ಟನ್‌ ವಿಟಮಿನ್‌ಗೆ 32 ಸಾವಿರ ರೂ. ಆಗುತ್ತದೆ. ಶೇ. 8ರಷ್ಟು ಪ್ಲಾಸ್ಟಿಕ್‌ ಬಳಕೆ ಮಾಡುವುದರಿಂದ ವಿಟಮಿನ್‌ಗೆ 2,100 ರೂ. ಹೆಚ್ಚುವರಿ ವೆಚ್ಚವಾಗುತ್ತದೆ. ಆದರೂ ರಸ್ತೆಗಳು ಹೆಚ್ಚು ಬಾಳಿಕೆ ಬರುವುದರ ಜತೆಗೆ ವಾಹನಗಳ ಸಂಚಾರ ಸುಗಮವಾಗಿರುತ್ತದೆ. ಮತ್ತೂಂದೆಡೆ ನಗರದಲ್ಲಿ ಪ್ಲಾಸ್ಟಿಕ್‌ ಹೆಚ್ಚು ಸಂಗ್ರಹವಾಗುವುದರಿಂದ ಅನುಕೂಲವಾಗುತ್ತದೆ ಎಂದರು. 

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್‌, ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಸಭೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.