ಬೌದ್ಧ ವಿಹಾರಗಳಿಗೆ ಕಾವಲು


Team Udayavani, Oct 3, 2018, 4:05 AM IST

dalai-lama-600.jpg

ಬೆಂಗಳೂರು: ಮೂರು ವರ್ಷಗಳ ಕಾಲ ರಾಜ್ಯದಲ್ಲಿಯೇ ಠಿಕಾಣಿ ಹೂಡಿದ್ದ ಜಮಾತ್‌-ಉಲ್‌-ಮುಜಾಹಿದೀನ್‌ ಬಾಂಗ್ಲಾದೇಶ್‌ (ಜೆಎಂಬಿ) ಸಂಘಟನೆ ಉಗ್ರ ಜಹೀಲ್ದುಲ್‌ ಇಸ್ಲಾಂ ಅಲಿಯಾಸ್‌ ಕೌಸರ್‌ ಮತ್ತು ತಂಡ ಕಲಬುರಗಿಯಲ್ಲಿ ಸ್ಥಾಪಿಸಲಾಗಿರುವ ಬೌದ್ಧ ವಿಹಾರದ ಮೇಲೆಯೂ ಕಣ್ಣಿಟ್ಟಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ಕೌಸರ್‌, ಬೌದ್ಧ ಧರ್ಮಗುರು ದಲೈಲಾಮಾ ಹಾಗೂ ಬೌದ್ಧರನ್ನು, ಬೌದ್ಧ ಧಾರ್ಮಿಕ ಕೇಂದ್ರಗಳನ್ನು, ಟಿಬೆಟಿಯನ್‌ ಕ್ಯಾಂಪ್‌ಗ್ಳನ್ನು ಟಾರ್ಗೆಟ್‌ ಮಾಡಿಕೊಂಡಿದ್ದ ಮಾಹಿತಿ ತನಿಖೆ ವೇಳೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಬಿಗುಬಂದೋಬಸ್ತ್ಗೆ ಸೂಚಿಸಿದ್ದಾರೆ.

ಸೋಮವಾರ ಆಂತರಿಕ ಸಭೆ ನಡೆಸಿದ್ದ ರಾಜ್ಯ ಪೊಲೀಸ್‌ ಇಲಾಖೆ, ಗುಪ್ತಚರ ದಳದ ತಂಡವೊಂದನ್ನು ಕಲಬುರಗಿಯಲ್ಲಿರುವ ಬೌದ್ಧ ವಿಹಾರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲು ಸೂಚಿಸಿದೆ. ವಸ್ತುಸ್ಥಿತಿ ಜತೆಗೆ ಅಲ್ಲಿನ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿ ವಿಶೇಷ ತಂಡವನ್ನು ಕಳುಹಿಸಿಕೊಟ್ಟಿದೆ. ಅಲ್ಲದೇ, ಕೊಳ್ಳೇಗಾಲ, ಕುಶಾಲನಗರ ಸಮೀಪದ ಬೈಲುಕುಪ್ಪೆಯಲ್ಲಿರುವ ಪ್ರಸಿದ್ಧ ಬೌದ್ಧ ವಿಹಾರ ಕೇಂದ್ರ ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನ ಟಿಬೆಟಿಯನ್‌ ಕ್ಯಾಂಪ್‌ಗ್ೂ ಸದ್ಯದಲ್ಲಿಯೇ ಪೊಲೀಸ್‌ ತಂಡಗಳು ತೆರಳಿ ತನಿಖೆ ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.

ಜನವರಿ 19ರಂದು ಬುದ್ಧಗಯಾದ ಕಾಲಚಕ್ರ ಮೈದಾನದಲ್ಲಿ ಮೂರು ಐಇಡಿ ಬಾಂಬ್‌ಗಳನ್ನು ಸ್ಫೋಟಿಸುವ ಸಂಚಿನ ಮಾಸ್ಟರ್‌ ಮೈಂಡ್‌ ಎಂದು ಪರಿಗಣಿಸಲಾಗಿರುವ ಜಹೀಲುªಲ್‌ ಇಸ್ಲಾಂ ಅಲಿಯಾಸ್‌ ಕೌಸರ್‌, ಹಲವು ವರ್ಷಗಳ ಕಾಲ ಬೆಂಗಳೂರು ಹಾಗೂ ರಾಮನಗರದಲ್ಲಿ ತಂಗಿದ್ದ. ಮೂರು ಬುದ್ಧ ವಿಹಾರಗಳು ಹಾಗೂ ಟಿಬೇಟಿಯನ್‌ ಕ್ಯಾಂಪ್‌ಗ್ಳಿಗೂ ಭೇಟಿ ನೀಡಿದ್ದ ಎಂಬ ಸುಳಿವು ದೊರೆತಿದೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ಗುಪ್ತಚರ ದಳ, ರಾಜ್ಯದ ಬುದ್ಧ ವಿಹಾರಗಳಿಗೆ ಸಂಬಂಧಪಟ್ಟಂತೆ ಆಂತರಿಕ ತನಿಖೆ ನಡೆಸಲು ಮುಂದಾಗಿದೆ. ವಿಶೇಷ ತಂಡಗಳು ಭೇಟಿ ಕೊಟ್ಟು ಅಲ್ಲಿನ ಸಂಪೂರ್ಣ ವಸ್ತುಸ್ಥಿತಿ, ಸುರಕ್ಷತೆ, ಈಗಿರುವ ಭದ್ರತಾ ವ್ಯವಸ್ಥೆ ಅಥವಾ ಭದ್ರತೆ ಹೆಚ್ಚಿಸಬೇಕೆ ಎನ್ನುವ ಅಂಶಗಳ ಬಗ್ಗೆಯೂ ವರದಿ ನೀಡುವಂತೆ ಸೂಚಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೌಖೀಕ ಸಂದೇಶ ರವಾನೆ
ಈಗಾಗಲೇ ಮೂರು ಕಲಬುರಗಿ ಬೌದ್ಧ ವಿಹಾರ ಕೇಂದ್ರ ಹಾಗೂ ಬೈಲುಕುಪ್ಪೆ, ಮುಂಡಗೋಡಿನ ಟಿಬೆಟಿಯನ್‌ ಕ್ಯಾಂಪ್‌ಗ್ಳಿಗೆ ಅಗತ್ಯ ಭದ್ರತೆ ಕಲ್ಪಿಸುವುದು ಹಾಗೂ ಸೂಕ್ಷ್ಮ ಎಚ್ಚರಿಕೆಯಿಂದ ಇರುವಂತೆ ಸ್ಥಳೀಯ ಪೊಲೀಸರಿಗೆ ಮೌಖೀಕವಾಗಿ ಸಂದೇಶ ರವಾನಿಸಲಾಗಿದೆ. ವಿಶೇಷ ತಂಡಗಳ ವರದಿ ಆಧರಿಸಿ ಮುಂದೆ ಕೈಗೊಳ್ಳಬೇಕಾದ ಭದ್ರತೆಗಳ ಬಗ್ಗೆ ಸರಕಾರಕ್ಕೆ ವರದಿ ನೀಡಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಲೈಲಾಮಾಗೆ ಹೆಚ್ಚಿನ ಭದ್ರತೆ
ಜೆಎಂಬಿ ಉಗ್ರರು ಬೌದ್ಧ ಧರ್ಮಗುರು ದಲೈಲಾಮಾ ಅವರ ಹತ್ಯೆಗೆ ಸಂಚು ರೂಪಿಸಿರುವ ಆಘಾತಕಾರಿ ಅಂಶ ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವ ಬೆನ್ನಿಗೇ ದಲೈಲಾಮಾ ಅವರು ಇನ್ನು ಮುಂದೆ ಕೈಗೊಳ್ಳಲಿರುವ ರಾಜ್ಯ ಪ್ರವಾಸ ಸಂದರ್ಭದಲ್ಲಿ ಅವರ ಭದ್ರತೆಗೆ ಸರ್ಪಗಾವಲು ನೀಡಲು ರಾಜ್ಯ ಪೊಲೀಸರು ನಿರ್ಧರಿಸಿದ್ದಾರೆ. ಈ ಬಗ್ಗೆ ‘ಉದಯವಾಣಿ’ ಜತೆ ಮಾತನಾಡಿದ ರಾಜ್ಯದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಕಮಲ್‌ ಪಂತ್‌, ದಲೈಲಾಮಾ ಅವರು ರಾಜ್ಯಕ್ಕೆ ಬಂದಾಗಲೆಲ್ಲ ಕೇಂದ್ರ ಗುಪ್ತಚರ ಇಲಾಖೆ ನಿರ್ದೇಶನದಂತೆ ಹೆಚ್ಚುವರಿ ಭದ್ರತಾ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರೊಹಿಂಗ್ಯಾ ಮುಸ್ಲಿಮರ ಮೇಲೆ ನಿಗಾ
ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲಿನ ಹಿಂಸೆಗೆ ಪ್ರತಿರೋಧವಾಗಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಜೆಎಂಬಿ ಸಂಚು ರೂಪಿಸಿರುವ ಅಂಶ ಜಹೀಲ್ದುಲ್‌ ಇಸ್ಲಾಂ ಅಲಿಯಾಸ್‌ ಕೌಸರ್‌ ಬಂಧನದ ಬಳಿಕ ದೃಢ‌ಪಟ್ಟಿತ್ತು. ಈ ಬೆನ್ನಲ್ಲೇ ರಾಜ್ಯದಲ್ಲಿ ನೆಲೆಸಿರುವ ರೊಹಿಂಗ್ಯಾ ಮುಸ್ಲಿಮರ ಬಗ್ಗೆ ಎಚ್ಚೆತ್ತುಕೊಂಡ ಗುಪ್ತಚರ ದಳ ಅವರ ಚಲನವಲನಗಳ ಮೇಲಿನ ನಿಗಾ ಹಾಗೂ ಅವರ ಜನಸಂಖ್ಯೆ ವಿವರಗಳನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೂ ದೊರೆತಿರುವ ಅಂಕಿ-ಅಂಶಗಳ ಆಧಾರದಲ್ಲಿ 177 ಮಂದಿ ರೊಹಿಂಗ್ಯಾ ಮುಸ್ಲಿಮರಿದ್ದಾರೆ. ಅವರೆಲ್ಲರೂ ಕಾನೂನು ನಿಯಮಗಳ ಅನ್ವಯವೇ ದೇಶಕ್ಕೆ ಆಗಮಿಸಿದ್ದು ಅಧಿಕೃತವಾಗಿ ನೆಲೆಸಿದ್ದಾರೆಂದು ತಿಳಿದುಬಂದಿದೆ. ಅನಧಿಕೃತವಾಗಿ ಸಾವಿರಾರು ಮಂದಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಇವರಲ್ಲಿ ಹೆಚ್ಚಿನವರು ರಾಜ್ಯದ ವಿವಿಧೆಡೆ ಕಟ್ಟಡ ಕಾರ್ಮಿಕರಾಗಿ ಮತ್ತು ಇತರ ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅನಧಿಕೃತವಾಗಿ ನೆಲೆಸಿರುವವರು ಪ್ರಸ್ತುತ ಎಲ್ಲೆಲ್ಲಿ ಇದ್ದಾರೆ ಎಂದು ತಿಳಿದಿಲ್ಲ. ಅವರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವಿಶ್ವಸನೀಯ ಮೂಲಗಳು ಹೇಳಿವೆ.

— ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.