ನಗರಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್

Team Udayavani, Nov 26, 2018, 12:27 PM IST

nagaradandyta.jpg

ಬೆಂಗಳೂರು: ಅಂಬರೀಶ್‌ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಸೋಮವಾರ ಬೆಳಗ್ಗೆ ನಗರದಲ್ಲಿ ನಡೆಯಲಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಂತಿಮ ಯಾತ್ರೆ ಹಾಗೂ ಅಂತ್ಯಕ್ರಿಯೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನಗದಾದ್ಯಂತ  ನಗರ ಪೊಲೀಸ್‌ ವಿಭಾಗ ಕಟ್ಟೆಚ್ಚರ ವಹಿಸಿದೆ.

ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ನೇತೃತ್ವದಲ್ಲಿ ಬಿಗಿಬಂದೋಬಸ್ತ್ ಕಲ್ಪಿಸಲಾಗಿದ್ದು, ನಾಲ್ವರು ಹೆಚ್ಚುವರಿ ಪೊಲೀಸ್‌ ಆಯುಕ್ತರು, 15 ಡಿಸಿಪಿಗಳಿಗೆ ಬಂದೋಬಸ್ತ್ನ ಜವಾಬ್ದಾರಿ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆಯ 11 ಸಾವಿರ ಪೊಲೀಸ್‌ ಸಿಬ್ಬಂದಿ, 4 ಸಾವಿರ ಸಂಚಾರ ಪೊಲೀಸರು, 30 ಕೆಎಸ್‌ಆರ್‌ಪಿ ತುಕಡಿ, 34 ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ತುಕಡಿ, 3 ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್), 5 ರ್ಯಾಪಿಡ್‌ ಇಂಟರ್‌ವೆನÒನ್‌ ವೆಹಿಕಲ್ಸ್‌ ( ಆರ್‌ಐವಿ)ಗಳನ್ನು ಭದ್ರತೆ ನಿಯೋಜಿಸಲಾಗಿದೆ.

ಅಂಬರೀಶ್‌ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಹೊರಡುವ ಮಾರ್ಗಗಳನ್ನು ಪ್ರತ್ಯೇಕ ವಿಭಾಗಗಳನ್ನಾಗಿ ವಿಂಗಡಿಸಿ ಡಿಸಿಪಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವೊಂದು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್‌ ಇಲಾಖೆ ಮನವಿ ಮಾಡಿದೆ. 

ಸಂಚಾರ ಮಾರ್ಗ ಬದಲಾವಣೆ: ಅಂತಿಮ ಯಾತ್ರೆಯಲ್ಲಿ ಗಣ್ಯರು, ಅಭಿಮಾನಿಗಳು, ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ನಗರದ ಹಲವೆಡೆ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ತುಮಕೂರು ರಸ್ತೆ, ಸುಮನಹಳ್ಳಿಯ ಹೊರವರ್ತುಲ ರಸ್ತೆ ಭಾಗದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ವಾಹನ ಸವಾರರು, ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಕೋರಿದ್ದಾರೆ.

ಮಾರ್ಗ ಬದಲಾವಣೆ ಮತ್ತು ಪರ್ಯಾಯ ಮಾರ್ಗ: ಹೊರವರ್ತುಲ ರಸ್ತೆ, ಸುಮ್ಮನಹಳ್ಳಿ ಜಂಕ್ಷನ್‍ನಿಂದ ಗೊರಗುಂಟೆ ಪಾಳ್ಯ ಕಡೆಗೆ ಹಾದು ಹೋಗುವ ಬಸ್‌, ಲಾರಿ ಸೇರಿದಂತೆ ಭಾರೀ ವಾಹನಗಳಿಗೆ ಸಂಚಾರ ನಿರ್ಬಂಧ. ಹೊರವರ್ತುಲ ರಸ್ತೆಯ ಸುಮ್ಮನಹಳ್ಳಿ ಜಂಕ್ಷನ್‌ನಿಂದ ಗೊರಗುಂಟೆ ಪಾಳ್ಯ ಕಡೆಗೆ ಹಾದು ಹೋಗುವ ಭಾರೀ ವಾಹನಗಳು ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ – ಹೌಸಿಂಗ್‌ ಬೋರ್ಡ್‌, ಮಾಗಡಿ ರಸ್ತೆಯ ಟೋಲ್‌ ಗೇಟ್‌ ಮೂಲಕ ಪಶ್ಚಿಮ ಕಾರ್ಡ್‌ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ. 

ಅದೇ ರೀತಿ  ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್‍ನಿಂದ  ಸುಮನಹಳ್ಳಿ ಜಂಕ್ಷನ್‌ ಕಡೆಗೆ ಹೋಗುವ ವಾಹನಗಳಿಗೂ ನಿರ್ಬಂಧ ವಿಧಿಸಲಾಗಿದೆ. ಈ ಮಾರ್ಗದಲ್ಲಿ ಬರುವ ವಾಹನಗಳು ತುಮಕೂರು ರಸ್ತೆ ಗೊರಗುಂಟೆ ಪಾಳ್ಯ – ಎಂಇಐ ಜಂಕ್ಷನ್‌ – ಆರ್‌ಎಂಸಿ ಯರ್ಡ್‌  ಮಾರಪ್ಪನ ಪಾಳ್ಯ-  ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತ ಮೂಲಕ ಪಶ್ಚಿಮ ಕಾರ್ಡ್‌ ರಸ್ತೆ ಕಡೆ  ಹಾದು ಹೋಗಬಹುದಾಗಿದೆ.

ಸ್ಯಾಂಕಿ ರಸ್ತೆ – ಮಾರಮ್ಮ ವೃತ್ತ- ಯಶವಂತಪುರ ಮೂಲಕ ತುಮಕೂರು ರಸ್ತೆ ಕಡೆಗೆ ಹಾದು ಹೋಗುವ ವಾಹನಗಳ ಸಂಚಾರ ಮಾರ್ಗ ಬದಲಾವಣೆ. ಪರ್ಯಾಯ ಮಾರ್ಗ: ಮೇಖ್ರೀ ವೃತ್ತದಲ್ಲಿ ಎಡ ತಿರುವು ತೆಗೆದುಕೊಂಡು ಸಿ.ವಿ ರಾಮನ್‌ ರಸ್ತೆ , ಸದಾಶಿವ ನಗರ ಠಾಣೆ ಜಂಕ್ಷನ್‌ ಬಲತಿರುವು ಪಡೆದು ಬಿಇಎಲ್‌ ರಸ್ತೆ ತಲುಪಬೇಕು. ನಂತರ  ಕುವೆಂಪು ವೃತ್ತದಲ್ಲಿ ಎಡತಿರುವು ಪಡೆದು ಬಿಇಎಲ್‌ ವೃತ್ತ ಬಲತಿರುವು ಪಡೆಯಬೇಕು. ಬಳಿಕ ಗಂಗಮ್ಮ ವೃತ್ತ ಎಡತಿರುವು ಪಡೆದು ತುಮಕೂರು ರಸ್ತೆ ತಲುಪಬಹುದು.

ಮದ್ಯ ಮಾರಾಟ ನಿಷೇಧ: ಅಂಬರೀಶ್‌ ಅವರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ನಗರದಲ್ಲಿ ಮದ್ಯಮಾರಾಟ ನಿರ್ಬಂಧಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಪೊಲೀಸರ ಬಂದೋಬಸ್ತ್ (ಅವಶ್ಯ ಎನಿಸಿದರೆ ಬಳಸಬಹುದು) 
-ನಾಲ್ವರು ಹೆಚ್ಚುವರಿ ಪೊಲೀಸ್‌ ಆಯುಕ್ತರು 
-15 ಮಂದಿ ಡಿಸಿಪಿಗಳು
-11 ಸಾವಿರ ಕಾನೂನು ಸುವ್ಯವಸ್ಥೆ ಪೊಲೀಸರು
-4 ಸಾವಿರ ಸಂಚಾರ ಅಧಿಕಾರಿ, ಸಿಬ್ಬಂದಿ
-30 ಕೆಎಸ್‌ಆರ್‌ಪಿ ತುಕಡಿ
-34 ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ತುಕಡಿ
-3 ರ್ಯಾಪಿಡ್‌ ಆ್ಯಕ್ಷನ್‌ ಪೋರ್ಸ್‌(ಆರ್‌ಎಎಫ್)
-5 ರ್ಯಾಪಿಡ್‌ ಇಂಟರ್‌ವೆನನ್‌ ವೆಹಿಕಲ್ಸ್‌ ( ಆರ್‌ಐವಿ)

ಟಾಪ್ ನ್ಯೂಸ್

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.