ಸೆಲ್ಫಿ ವಿಡಿಯೋದಲ್ಲಿ ಪೊಲೀಸರ ನಿಂದಿಸಿದ ಯುವಕನ ಬಂಧನ

Team Udayavani, Sep 19, 2019, 3:05 AM IST

selfie

ಬೆಂಗಳೂರು: ತನ್ನ ಬಳಿಯಿದ್ದ ಹಣ ಪೊಲೀಸರು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಿ ಅವಾಚ್ಯವಾಗಿ ನಿಂದಿಸಿದ್ದ ಸೆಲ್ಫಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಯುವಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಮೂಲದ ರಾಕೇಶ್‌ (22) ಬಂಧಿತ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಜಪ್ತಿ ಮಾಡಲಾಗಿದೆ. ಒಂಬತ್ತನೇ ತರಗತಿ ವ್ಯಾಸಂಗ ಮಾಡಿರುವ ರಾಕೇಶ್‌ ಮೂರು ವರ್ಷಗಳಿಂದ ಮೆಜೆಸ್ಟಿಕ್‌ ಸಮೀಪದಲ್ಲಿರುವ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಮಲ್ಲೇಶ್ವರದಲ್ಲಿರುವ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಮದ್ಯ ಸೇವನೆ ಸೇರಿ ಹಲವಾರು ದುಶ್ಚಟಗಳ ಅಭ್ಯಾಸ ಹೊಂದಿದ್ದ. ಅಲ್ಲದೇ ಮಂಗಳಮುಖಿಯರ ಜತೆ ಸ್ನೇಹ ಬೆಳೆಸಿದ್ದ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.

ಈ ಮಧ್ಯೆ ಸೆ.14ರಂದು ಆರೋಪಿ ಮೆಜೆಸ್ಟಿಕ್‌ನ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥ ಮಂಗಳಮುಖಿಯೊಬ್ಬರ ಜತೆ ಸಾರ್ವಜನಿಕವಾಗಿ ಅಸಭ್ಯವಾಗಿ ನಿಂತಿದ್ದ. ಅದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಪೊಲೀಸ್‌ ಸಹಾಯವಾಣಿ ನಮ್ಮ-100ಕ್ಕೆ ದೂರು ನೀಡಿದ್ದು, ವಿಷಯ ತಿಳಿದ ಉಪ್ಪಾರಪೇಟೆ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಆತನನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು.

ಸೆಲ್ಫಿ ವಿಡಿಯೋ ಮಾಡಿದ: ಅದರಿಂದ ಕುಪಿತಗೊಂಡಿದ್ದ ಆರೋಪಿ ಎರಡು ದಿನಗಳ ಬಳಿಕ ಸೆಲ್ಫಿ ವಿಡಿಯೋ ಮಾಡಿ ಉಪ್ಪಾರಪೇಟೆ ಪೊಲೀಸರು ಹಾಗೂ ಇಡೀ ಕರ್ನಾಟಕ ಪೊಲೀಸರ ಬಗ್ಗೆಯೇ ಅಶ್ಲೀಲ ಪದಗಳಿಂದ ನಿಂದಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. “ಮಹದೇಶ್ವರ ಬೆಟ್ಟಕ್ಕೆ ಹೊರಟ್ಟಿದ್ದ ತನ್ನನ್ನು ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆಂದು ಕರೆದೊಯ್ದು, ತನ್ನ ಹಣವನ್ನು ಕಸಿದುಕೊಂಡು ಕೇವಲ ಒಂದು ಸಾವಿರ ರೂ. ಮಾತ್ರ ಬಿಟ್ಟಿದ್ದಾರೆ.

ಅಂತಹ ಪೊಲೀಸರನ್ನು ಬಿಡಬಾರದು ಎಂದೆಲ್ಲ ನಿಂದಿಸಿದ್ದ. ಈ ಸಂಬಂಧ ಸಾರ್ವಜನಿಕರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಕಾಡುಗೋಡಿ ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.