ನ್ಯೂ ಇಯರ್‌ ಸಂಭ್ರಮಕ್ಕೆ ಪೊಲೀಸ್‌ ಸರ್ಪಗಾವಲು


Team Udayavani, Jan 1, 2020, 3:07 AM IST

police

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನಗರದ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್‌ ರಸ್ತೆ ಸೇರಿ ನಗರಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಜ್ಜೆಹೆಜ್ಜೆಗೂ ಪೊಲೀಸ್‌ ಸಿಬ್ಬಂದಿ, ಸಿಸಿ ಕ್ಯಾಮೆರಾ ಕಣ್ಗಾವಲು, ವಾಚ್‌ ಟವರ್‌ಗಳು, ಹೊಯ್ಸಳ ವಾಹನ ಸಿಬ್ಬಂದಿ ಎಲ್ಲಡೆ ಗಸ್ತು ತಿರುಗುತ್ತಿದ್ದರು.

ಸಾವಿರಾರು ಪೊಲೀಸರ ಬಂದೋಬಸ್ತ್ ನಡುವೆ ಡ್ರೋಣ್‌ ಕ್ಯಾಮೆರಾಗಳನ್ನು ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಕೋರಮಂಗಲ, ಇಂದಿರಾನಗರ ವ್ಯಾಪ್ತಿಯಲ್ಲಿ ಬಳಸಲಾಗಿತ್ತು. ಎಂ.ಜಿ ರಸ್ತೆ ಮತ್ತು ಬ್ರಿಗೇಡ್‌ ರಸ್ತೆಗಳಲ್ಲೇ ಸುಮಾರು 10ಕ್ಕೂ ಹೆಚ್ಚು ಡ್ರೋಣ್‌ ಕ್ಯಾಮೆರಾಗಳನ್ನು ಉಪಯೋಗಿಸ ಲಾಗಿತ್ತು. ಪ್ರತಿಯೊಬ್ಬರ ಚಲನವಲನಗಳ ಮೇಲೆ ನಿಗಾವಹಿಸಲಾಗಿತ್ತು.

ಅಲ್ಲದೆ, ಮಾಣಿಕ್‌ ಷಾ ಪರೇಡ್‌ ಮೈದಾನ, ಕಾವೇರಿ ಎಂಪೋರಿಯಂ ಹಾಗೂ ಇತರೆಡೆ ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿತ್ತು. ಇದರೊಂದಿಗೆ ಲೋಹಶೋಧಕ ಯಂತ್ರ, ಬಾಂಬ್‌ ನಿಷ್ಕ್ರಿಯ ದಳ ತಂಡದಿಂದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಪ್ರವೇಶಿಸುವ ಸಾರ್ವಜನಿಕರ ತಪಾಸಣೆ ನಡೆಸಲಾಯಿತು. ಮೆಟ್ರೋ ಕ್ಷಿಪ್ರ ಕಾರ್ಯ ಪಡೆಯನ್ನು ನಿಯೋಜಿಸಲಾಗಿತ್ತು.

ಎಲ್‌ಇಡಿ ಸ್ಕ್ರೀನ್‌ಗಳು: ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಕೋರಮಂಗಲದ ಕೆಲವೆಡೆ ಹತ್ತಾರು ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದ್ದು, ದೂರದಿಂದಲೇ ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಈ ಮೂಲಕವೂ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ. ಜತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಪರಿಶೀಲನೆಗೆ ಸ್ಥಳದಲ್ಲೇ ವ್ಯವಸ್ಥೆ ಮಾಡಲಾಗಿತ್ತು.

ಪ್ರತ್ಯೇಕ ಪಥ: ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಮಹಿಳೆಯರ ಓಡಾಟಕ್ಕೆ ಪ್ರತ್ಯೇಕ ಪಥಗಳನ್ನು ನಿರ್ಮಿಸಲಾಗಿತ್ತು. ಮಹಿಳೆಯರು, ಯುವತಿಯರು ಒಬ್ಬರೇ ಅಥವಾ ಸಂಬಂಧಿಕರ ಜತೆ ಓಡಾಡುವಂತೆ ಧ್ವನಿವರ್ಧಕಗಳ ಮೂಲಕ ಪೊಲೀಸರು ಸಲಹೆ ನೀಡುತ್ತಿದ್ದರು. ಜತೆಗೆ ತಾತ್ಕಾಲಿಕ ಮಹಿಳಾ ಸಹಾಯವಾಣಿ ಕೇಂದ್ರ ಅಥವಾ ಸೇಫ್ಟಿ ಐಲ್ಯಾಂಡ್‌ಗೆ ಹೋಗುವಂತೆ ಸೂಚಿಸುತ್ತಿದ್ದರು. ಈ ಮಧ್ಯೆ ಯಾವುದಾದರೂ ಅನಾಹುತ ನಡೆದಾಗ ಕೂಡಲೇ ಪ್ರತಿಕ್ರಿಯಿಸಲು ಅಥವಾ ಆರೋಪಿಯನ್ನು ಹಿಡಿಯಲು ಪೊಲೀಸರಿಗೆ ಪ್ರತ್ಯೇಕ ಪಥ ನಿರ್ಮಿಸಲಾಗಿತ್ತು.

ಬಂದೋಬಸ್ತ್: ನಗರದ ಪ್ರತಿ ಠಾಣೆಯ ಇನ್‌ಸ್ಪೆಕ್ಟರ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌, ಹೆಡ್‌ಕಾನ್‌ಸ್ಟೆಬಲ್‌ ಹಾಗು ಹೊಯ್ಸಳ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ರಾತ್ರೀಯಿಡಿ ವಾಹನಗಳಲ್ಲಿ ಶಸ್ತ್ರಾಸ್ತ್ರ ಸಮೇತ ಗಸ್ತು ತಿರುಗಿದರು. ಇದರ ಜತೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಹಾಜರಿದ್ದರು. ಇದಕ್ಕಾಗಿ 200ಕ್ಕೂ ಹೆಚ್ಚು ಸಂಚಾರ ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದ್ದು, 175 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದರು.

ಎಚ್ಚರಿಕೆ ಮೂಲಕ ಜಾಗೃತಿ: ಕಾವೇರಿ ಎಂಪೋರಿಯಂ ಜಂಕ್ಷನ್‌ ಸಮೀಪದಲ್ಲಿ ಅಳವಡಿಸಿದ್ದ ಎರಡು ಎಲ್‌ಇಡಿ ಸ್ಕ್ರೀನ್‌ಗಳಲ್ಲಿ ಸುರಕ್ಷಾ ಆ್ಯಪ್‌, ನಮ್ಮ-100 ಮತ್ತು ಅಲ್ಲಲ್ಲಿ ಸ್ಥಾಪನೆ ಮಾಡಿರುವ ಸೇಫ್ಟಿ ಐಲ್ಯಾಂಡ್‌ ಬಗ್ಗೆ ಪದೇ ಪದೆ ಮಾಹಿತಿ ನೀಡಲಾಗುತ್ತಿತ್ತು. ಜತೆಗೆ ಕುಡಿದು ವಾಹನ ಚಲಾಯಿಸಬೇಡಿ, ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸಿ. ಒಂದು ವೇಳೆ ಸಂಚಾರ ನಿಯಮ ಉಲ್ಲಂ ಸಿದರೆ ದಂಡ ಪ್ರಯೋಗದ ಜತೆಗೆ, ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗುತ್ತಿತ್ತು.

ಏಕ ಮುಖ ಸಂಚಾರ ವ್ಯವಸ್ಥೆ: ಪ್ರತಿ ವರ್ಷ ಕಾವೇರಿ ಎಂಪೋರಿಯಂ ಬಳಿ ತಡರಾತ್ರಿ 11.59ಕ್ಕೆ ಎಲ್ಲೆಡೆ ಲೈಟ್‌ ಆಫ್ ಮಾಡಿ 12 ಗಂಟೆಗೆ ಸರಿಯಾಗಿ ಲೈಟ್‌ ಆನ್‌ ಮಾಡುತ್ತಿದ್ದರು. ಆದರೆ, ಈ ವರ್ಷ ಭದ್ರತೆ ದೃಷ್ಟಿಯಿಂದ ಲೈಟ್‌ ಆಫ್ ಮಾಡಲಿಲ್ಲ. ಹಾಗೆಯೇ ಹೊಸವರ್ಷ ಸ್ವಾಗತಿಸಿದರು. ಸಂಭ್ರಮಾಚರಣೆ ಮುಗಿಯುತ್ತಿದ್ದಂತೆ ಬ್ರಿಗೇಡ್‌ ರಸ್ತೆ, ಎಂ.ಜಿ. ರಸ್ತೆ ಕಡೆ ಏಕಮುಖ ಸಂಚಾರ ಮೂಲಕ ವಾಪಸ್‌ ತೆರಳಲು ಪೊಲೀಸರು ಸೂಚಿಸುತ್ತಿದ್ದರು.

ನಗರಾದ್ಯಂತ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ , ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ, ಇಬ್ಬರು ಹೆಚ್ಚುವರಿ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಿವಿಲ್‌ ಡಿಫೆನ್ಸ್‌, ಗೃಹ ರಕ್ಷಕ ದಳ, ಕೆಎಸ್‌ಆರ್‌ಪಿ, ಸಿಎಆರ್‌ ಹಾಗೂ ಸ್ಥಳೀಯ ಪೊಲೀಸರು ಸೇರಿ ಒಟ್ಟು 10 ಸಾವಿರಕ್ಕೂ ಅಧಿಕ ಮಂದಿ ಕರ್ತವ್ಯ ನಿರ್ವಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌, ಸಿಸಿಬಿ ಸಂದೀಪ್‌ ಪಾಟೀಲ್‌,

ಹೆಚ್ಚುವರಿ ಪೊಲೀಸ್‌ ಆಯುಕ್ತ ಉಮೇಶ್‌ ಕುಮಾರ್‌ ಹಾಗೂ ಕೇಂದ್ರ ವಿಭಾಗ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಭದ್ರತೆ ಪರಿಶೀಲಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಗಳಿಗೆ ಆಗಮಿಸುತ್ತಿದ್ದ ಸಾರ್ವಜನಿಕರು ಅಲ್ಲಲ್ಲಿ ಗುಂಪು ಗುಂಪಾಗಿ ಒಂದೆಡೆ ನಿಲ್ಲುತ್ತಿದ್ದನ್ನು ಗಮನಿಸಿದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ವಾಚ್‌ ಟವರ್‌ ಮೇಲೆ ನಿಂತು ಧ್ವನಿವರ್ಧಕದ ಮೂಲಕ ಒಂದೆಡೆ ಯಾರು ನಿಲ್ಲಬಾರದು. ಮುಂದೆ ಸಾಗಬೇಕು ಎಂದು ಮನವಿ ಮಾಡುತ್ತಿದ್ದರು.

ಬಾಲಕ ನಾಪತ್ತೆ: ಪೋಷಕರ ಜತೆ ಆಗಮಿಸಿದ್ದ ಯಶವಂತ ಎಂಬ 14 ವರ್ಷದ ಬಾಲಕ ಜನಜಗುಳಿ ನಡುವೆ ನಾಪತ್ತೆ ಯಾಗಿದ್ದಾನೆ. ಕೂಡಲೇ ಆತನ ಪೋಷಕರು ವಾಚ್‌ ಟವರ್‌ ಮೇಲೆ ನಿಂತಿದ್ದ ಪೊಲೀಸ್‌ ಸಿಬ್ಬಂದಿಗೆ ತಿಳಿಸಿದ್ದಾರೆ. ಧ್ವನಿ ವರ್ಧಕದ ಮೂಲಕ ಪೊಲೀಸರು ಯಶವಂತನ ಹೆಸರು ಪ್ರಸ್ತಾಪಿಸಿ ಪೋಷಕರ ಬಳಿ ಬರುವಂತೆ ಮನವಿ ಮಾಡಿದರು.

ಮೆಟ್ರೋದಲ್ಲಿ ಜನಜಂಗುಳಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಹಾಗೂ ಬಿಎಂಟಿಸಿ ಸೇವೆಯನ್ನು ಮಧ್ಯರಾತ್ರಿ 2ರವರೆಗೆ ವಿಸ್ತರಿಸಲಾಗಿತ್ತು. ವರ್ಷಾಚರಣೆ ಮುಗಿಯುತ್ತಿದ್ದರಂತೆ ಮೆಟ್ರೊ ರೈಲುಗಳು, ಬಿಎಂಟಿಸಿ ಬಸ್‌ಗಳ ಎಲ್ಲ ಬೋಗಿಗಳು ತುಂಬಿ ತುಳುಕುತ್ತಿದ್ದವು.

ಲಘು ಲಾಠಿ ಪ್ರಹಾರ: ಸಂಭ್ರಮದ ಮಧ್ಯೆ ಮಹಿಳೆಯರು ಮತ್ತು ಯುವತಿಯರ ಜತೆ ಅಸಭ್ಯ ವರ್ತನೆ ತೋರಿದ ಪುಂಡರಿಗೆ ಬ್ರಿಗೇಡ್‌ ರಸ್ತೆ, ಎಂ.ಜಿ.ರಸ್ತೆಯ ಐದಾರು ಕಡೆ ಪೊಲೀಸರು ಲಾಠಿ ರುಚಿ ತೋರಿಸಿ, ಗುಂಪು ಚದುರಿಸಿದರು. ದ್ವಿಚಕ್ರ ವಾಹನ ದಲ್ಲಿ ಹೋಗುತ್ತಿದ್ದ ಯುವಕರ ಗುಂಪು ನಡೆದು ಹೋಗುತ್ತಿದ್ದ ಯುವತಿಯರ ಮೇಲೆ ದೌರ್ಜನ್ಯ ಎಸಗಿದ್ದು, ಈ ಘಟನೆಗಳ ಸಂಬಂಧ ಕೆಲ ದೂರುಗಳು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

ಈ ಮಧ್ಯೆ ಕೋರಮಂಗಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಯುವತಿ ಯೊಬ್ಬಳಿಗೆ ಕೆಲ ಯುವಕರು ಅಸಭ್ಯವಾಗಿ ವರ್ತನೆ ತೋರಿರುವ ಘಟನೆ ನಡೆದಿದೆ. ಸಂತ್ರಸ್ತೆ ಕೂಡಲೇ ಪೊಲೀಸರ ಬಳಿ ತನ್ನ ಅಳಲು ತೊಡಿಕೊಂಡರು. ನಂತರ ಆಕೆಯನ್ನು ರಕ್ಷಣೆ ಮಾಡಲಾಯಿತು. ಅಲ್ಲದೆ, ಸ್ಥಳಕ್ಕೆ ಡಿಸಿಪಿ ಇಶಾ ಪಂಥ್‌ ಭೇಟಿ ನೀಡಿ, ಸಂತ್ರಸ್ತೆಯನ್ನು ಕರೆದೊಯ್ದು ಘಟನಾ ಸ್ಥಳಕ್ಕೆ ಆರೋಪಿಗಾಗಿ ಹುಡುಕಾಟ ನಡೆಸಿದರು.

ಆದರೆ, ಎಲ್ಲಿಯೂ ಸಿಗಲಿಲ್ಲ. ನಂತರ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲು ಡಿಸಿಪಿ ಸೂಚಿಸಿದ್ದಾರೆ. ಎಂ.ಜಿ.ರಸ್ತೆ ಜಂಕ್ಷನ್‌ ಬಳಿ ಯುವಕನ ಮೇಲೆ ನಾಲ್ಕೈದು ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿ ಆ ಯುವಕನನ್ನು ರಕ್ಷಿಸಿ ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ.

ಹೆಚ್ಚಿದ ಸಂಚಾರ ದಟ್ಟಣೆ: ನೂತನ ವರ್ಷಾಚರಣೆಗೆ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್‌ ರಸ್ತೆ, ಕಮರ್ಷಿಯಲ್‌ ರಸ್ತೆಯಲ್ಲಿ ನಗರದ ವಿವಿಧೆಡೆಯಿಂದ ಆಗಮಿಸಿದ್ದ ಜನರು ಜಮಾಯಿಸಿದ್ದರಿಂದ ಮಂಗಳವಾರ ರಾತ್ರಿ 9 ಗಂಟೆಯಿಂದಲೇ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ರಾತ್ರಿ 10 ಗಂಟೆ ನಂತರವಂತೂ ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ ಸುತ್ತಮುತ್ತ ವಾಹನ ಸವಾರರು ಗಂಟೆಗಟ್ಟಲೆ ಕಾಯುವಂತಾಯಿತು.

ತಡರಾತ್ರಿ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಮೆಜೆಸ್ಟಿಕ್‌, ಓಕಳಿಪುರಂ, ಆನಂದರಾವ್‌ ವೃತ್ತ, ರೇಸ್‌ಕೋರ್ಸ್‌ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ, ಕಾರ್ಪೋರೆಷನ್‌ ಸೇರಿ ಪ್ರಮುಖ ರಸ್ತೆಗಳಲ್ಲಿ ಅಧಿಕ ಸಂಚಾರ ದಟ್ಟಣೆ ಉಂಟಾಯಿತು. ರಾತ್ರಿ 10.30ರಿಂದ ತಡರಾತ್ರಿ 2 ಗಂಟೆವರೆಗೆ ಶಿವಾಜಿನಗರ, ಮೆಯೋ ಹಾಲ್‌ ಸೇರಿ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು.

ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ಸ್ಟ್ರೀಟ್‌, ಮ್ಯೂಸಿಯಂ ರಸ್ತೆ, ರೆಸ್ಟ್‌ಹೌಸ್‌ ರಸ್ತೆ, ರೆಸಿಡೆನ್ಸಿ ಕ್ರಾಸ್‌ ರಸ್ತೆಯಲ್ಲಿ ವಾಹನಗಳ ನಿಷೇಧಿಸಲಾಗಿತ್ತು. ಹೀಗಾಗಿ ಈ ಮಾರ್ಗಗಳಲ್ಲಿ ನಿರೀಕ್ಷೆಗೂ ಮೀರಿದ ಸಂಚಾರ ದಟ್ಟಣೆ ಉಂಟಾಗಿತ್ತು. ಇನ್ನು ಸಂಭ್ರಮಾಚರಣೆಗೆ ಆಗಮಿಸುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಬಿಆರ್‌ವಿ ಮೈದಾನದಲ್ಲಿ ಅವಕಾಶ ನೀಡಲಾಗಿತ್ತು. ತಡರಾತ್ರಿ ಎರಡು ಗಂಟೆ ನಂತರ ಎಂದಿನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಈ ಮಧ್ಯೆ ವಾಹನ ನಿಲುಗಡೆ ನಿಷೇಧಿತ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಸಂಚಾರ ಪೊಲೀಸರು ಹೊತೊಯ್ದ ವಾಹನಗಳನ್ನು ಜ.1ರ ಬೆಳಗ್ಗೆ ನಂತರವೇ ಬಿಡುಗಡೆ ಮಾಡಲಾಯಿತು. ವೀಲ್ಹಿಂಗ್‌, ಡ್ರಾಗ್‌ರೇಸ್‌, ಅತಿವೇಗ ವಾಹನ ಚಾಲನೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ನಗರದ 44 ಮೇಲು ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

16-kadaba

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Kannada Rajyotsava: ಪಾಲಿಕೆ ಆಡಳಿತದಲ್ಲಿ  ಸಂಪೂರ್ಣ ಕನ್ನಡ: ತುಷಾರ್‌

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ಬ್ಯಾಗ್‌ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್‌

Bengaluru: ನಗ್ನ ದೃಶ್ಯಗಳ ಸೆರೆ ಹಿಡಿದು ಬ್ಲ್ಯಾಕ್‌ಮೇಲ್‌

Bengaluru: ನಗ್ನ ದೃಶ್ಯಗಳ ಸೆರೆ ಹಿಡಿದು ಬ್ಲ್ಯಾಕ್‌ಮೇಲ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.