ಕುಖ್ಯಾತ ಸರಗಳ್ಳರು ಪೊಲೀಸರ ಬಲೆಗೆ
Team Udayavani, Feb 3, 2017, 11:37 AM IST
ಬೆಂಗಳೂರು: ಸರಗಳ್ಳತನ ಮತ್ತು ದರೋಡೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರನ್ನು ಜಯನಗರ ಉಪವಿಭಾಗದ ಅಪರಾಧ ಪತ್ತೆದಳ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಬಡಾವಣೆಯ ರಾಹುಲ್ ಅಲಿಯಾಸ್ ಜಾಕ್, ಜಿಗಣಿಯ ಸುದರ್ಶನ್, ಎಲೆಕ್ಟ್ರಾನಿಕ್ ಸಿಟಿ ನಿವಾಸಿ ವೆಂಕಟೇಶ ಹಾಗೂ ಸೂರ್ಯ ಬಂಧಿತ ಆರೋಪಿಗಳು.
ಲಾಲ್‌ಬಾಗ್ ವೆಸ್ಟ್‌ಗೇಟ್ ಸಮೀಪದ ಕಾವೇರಿ ಪೆಟ್ರೋಲ್ ಬಂಕ್ ಹತ್ತಿರ ಸರಗಳ್ಳತನ, ದರೋಡೆ ಮತ್ತು ಬೈಕ್ ಕಳ್ಳತನ ಮಾಡಿದ್ದ ಆರೋಪ ಇವರ ಮೇಲಿದೆ. ಕಳ್ಳತನ ಮಾಡಿದ್ದ ಬೈಕ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 4.80 ಲಕ್ಷ ರೂ. ಮೌಲ್ಯದ 160 ಗ್ರಾಂನ ಚಿನ್ನದ ಸರಗಳು, ಆರು ಸಾವಿರ ನಗದು, ಚಂದಾಪುರದ ಸೂರ್ಯನಗರದಲ್ಲಿ ಕಳ್ಳತನ ಮಾಡಿದ್ದ 45 ಸಾವಿರ ರೂ. ಮೌಲ್ಯದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪಿಗಳ ವಿರುದ್ಧ ಬಸವನಗುಡಿ ಠಾಣೆಯಲ್ಲಿ 5 ಪ್ರಕರಣ, ಬನಶಂಕರಿ ಮತ್ತು ಸಿದ್ಧಾಪುರ ಠಾಣೆಗಳಲ್ಲಿ ತಲಾ 2, ಜೆಪಿನಗರ, ಸೂರ್ಯನಗರದಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.