ಹೆಜ್ಜೆ ಹೆಜ್ಜೆಗೂ ಪೊಲೀಸ್ ಕಟ್ಟೆಚ್ಚರ
Team Udayavani, Jan 1, 2019, 6:44 AM IST
ಬೆಂಗಳೂರು: ನಗರದ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಾವಿರಾರು ಜನರ ಹೊಸ ವರ್ಷದ ಸಂಭ್ರಮಾಚರಣೆ ನಿರ್ವಹಿಸುವಲ್ಲಿ ಪೊಲೀಸರು ಸೋಮವಾರ ರಾತ್ರಿ ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಜ್ಜೆಹೆಜ್ಜೆಗೂ ಪೊಲೀಸ್ ಸಿಬ್ಬಂದಿ, ಸಿಸಿಟಿವಿ ಕ್ಯಾಮೆರಾ ಕಣ್ಗಾವಲು, ಹಿರಿಯ ಅಧಿಕಾರಿಗಳ ಮಾರ್ಗದರ್ಶನ, ಸಿಬ್ಬಂದಿಯ ಕಾರ್ಯನಿರ್ವಹಿಸಿದರು.
ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕೆಲ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಭದ್ರತೆ ಬಗ್ಗೆ ಪರಿಶೀಲಿಸಿದರು. ಬಳಿಕ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು, ನಗರ ಆಯುಕ್ತ ಟಿ.ಸುನಿಲ್ ಕುಮಾರ್ ಅವರಿಂದ ಭದ್ರತೆ ಕುರಿತು ಮಾಹಿತಿ ಪಡೆದುಕೊಂಡರು. ಹೆಚ್ಚುವರಿ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಿ.ಕೆ.ಸಿಂಗ್ ಉಪಸ್ಥಿತರಿದ್ದರು.
ಡ್ರೋಣ್ ಕಣ್ಗಾವಲು: ಸಾವಿರಾರು ಪೊಲೀಸರ ಬಂದೋಬಸ್ತ್ ನಡುವೆ ಡ್ರೋಣ್ ಕ್ಯಾಮೆರಾಗಳನ್ನು ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲ ವ್ಯಾಪ್ತಿಯಲ್ಲಿ ಬಳಸಲಾಗಿತ್ತು. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲೇ ಸುಮಾರು 10ಕ್ಕೂ ಹೆಚ್ಚು ಡ್ರೋಣ್ ಕ್ಯಾಮೆರಾಗಳನ್ನು ಉಪಯೋಗಿಸಲಾಗಿತ್ತು.
ಪ್ರತಿಯೊಬ್ಬರ ಚಲನವಲನಗಳ ಮೇಲೆ ನಿಗಾವಹಿಸಲಾಗಿತ್ತು. ಅಲ್ಲದೆ, ಮಾಣಿಕ್ ಷಾ ಪರೇಡ್ ಮೈದಾನ, ಕಾವೇರಿ ಎಂಪೋರಿಯಂ ಹಾಗೂ ಇತರೆಡೆ ವಾಚ್ ಟವರ್‌ಗಳನ್ನು ನಿರ್ಮಿಸಲಾಗಿತ್ತು. ಇದರೊಂದಿಗೆ ಸಾರ್ವಜನಿಕರ ತಪಾಸಣೆ ನಡೆಸಲಾಯಿತು. ಮೆಟ್ರೋ ಕ್ಷಿಪ್ರ ಕಾರ್ಯ ಪಡೆಯನ್ನು ನಿಯೋಜಿಸಲಾಗಿತ್ತು.
ಹತ್ತಾರು ಎಲ್‌ಇಡಿ ಸ್ಕ್ರೀನ್‌ಗಳು: ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲದ ಕೆಲವೆಡೆ ಹತ್ತಾರು ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದ್ದು, ದೂರದಿಂದಲೇ ವೀಕ್ಷಿಸಬಹುದು. ಈ ಮೂಲಕವೂ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಭಾರೀ ಬಂದೋಬಸ್ತ್: ನಗರದ ಪ್ರತಿ ಠಾಣೆಯ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್‌ಗಳು ತಮ್ಮ ವ್ಯಾಪ್ತಿಯಲ್ಲಿ ರಾತ್ರೀಯಿಡಿ ದ್ವಿಚಕ್ರ ವಾಹನಗಳಲ್ಲಿ, ಶಸ್ತ್ರಾಸ್ತ್ರ ಸಮೇತ ಗಸ್ತು ಗಸ್ತು ತಿರುಗಿದರು. ಇದರ ಜತೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಹಾಜರಿದ್ದರು. ಇದಕ್ಕಾಗಿ 200ಕ್ಕೂ ಹೆಚ್ಚು ಸಂಚಾರ ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ.
ಮದ್ಯ ಸೇವಿಸಿ ಚಾಲನೆ ಮಾಡುವ ಚಾಲಕರನ್ನು ರಾತ್ರೀಯಿಡಿ ಕಲ್ಯಾಣ ಮಂಟಪಗಳಲ್ಲಿ ಬಂಧನದಲ್ಲಿರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 10ಕ್ಕೂ ಹೆಚ್ಚು ಕಲ್ಯಾಣ ಮಂಟಪಗಳನ್ನು ಕಾಯ್ದಿರಿಸಿದ್ದು, ಮರುದಿನ ಬೆಳಗ್ಗೆ ಕೋರ್ಟ್ ಎದುರು ಹಾಜರು ಪಡಿಸಿ ದಂಡ ವಸೂಲಿ ಮಾಡಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಹೇಳಿದರು.
ಟ್ರಾಫಿಕ್ ಜಾಮ್: ನೂತನ ವರ್ಷಾಚರಣೆಗೆ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಯಲ್ ರಸ್ತೆ ಸೇರಿ ನಗರದ ವಿವಿಧೆಡೆ ಜನರು ಜಮಾಯಿಸಿದ್ದರಿಂದ ಸೋಮವಾರ ಸಂಜೆಯಿಂದಲೇ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾತ್ರಿ 9 ಗಂಟೆ ನಂತರವಂತೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ ವಾಹನ ಸವಾರರು ಗಂಟೆಗಟ್ಟಲೆ ಕಾಯುವಂತಾಯಿತು.
ಸಂಚಾರ ಪೊಲೀಸರಿಂದ ಬೀದಿ ನಾಟಕ: ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಬೀದಿ ನಾಟಕ ಹಾಗೂ ಜನಪದ ಗೀತೆಗಳ ಮೂಲಕ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿದರು. ನಗರದ ಪುರಭವನ ಎದುರು ಕೇಂದ್ರ ಸಂಚಾರ ವಲಯ ಸಂಚಾರ ಪೊಲೀಸರು “ಎಚ್ಚರ ತಮ್ಮ ಎಚ್ಚರ’ ಎಂಬ ಬೀದಿ ನಾಟಕ ಮಾಡಿದರು.
ಹೊಸವರ್ಷಾಚರಣೆ ಸಂದರ್ಭದಲ್ಲಿ ಹೆಲ್ಮೆಟ್ ಇಲ್ಲದೇ, ಮದ್ಯ ಸೇವಿಸಿ ಪ್ರಯಾಣ ಮಾಡಬೇಡಿ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡದಿರಿ, ಸೆಲ್ಫಿ ತೆಗೆಯಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅಪಘಾತವಾದರೆ ವಿಡಿಯೋ ಚಿತ್ರೀಕರಣ ಮಾಡುವ ಬದಲು ಅವರ ಪ್ರಾಣ ಉಳಿಸುವ ಕೆಲಸ ಮಾಡಿ ಎಂದು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.