ಹೊಸ ವರ್ಷಾಚರಣೆಗೆ ಖಾಕಿ ಕಣ್ಗಾವಲು


Team Udayavani, Dec 28, 2018, 11:34 AM IST

hosa-vars.jpg

ಬೆಂಗಳೂರು: ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜಾಗುತ್ತಿದೆ. ಎಂ.ಜಿ.ರಸ್ತೆ, ಬ್ರಿಗೇಡ್‌, ರೆಸಿಡೆನ್ಸಿ ರಸ್ತೆ ಸೇರಿದಂತೆ ಹಲವೆಡೆ ಡಿ.31ರಂದು ರಾತ್ರಿ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಿಗಿ ಬಂದೋಬಸ್ತ್ಗಾಗಿ ನಗರ ಪೊಲೀಸ್‌ ವಿಭಾಗ ರೂಪುರೇಷೆ ಸಿದ್ಧಪಡಿಸಿದೆ.

ಹೆಚ್ಚುವರಿ ಪೊಲೀಸ್‌ ಆಯುಕ್ತರು, ಡಿಸಿಪಿಗಳ ನೇತೃತ್ವದಲ್ಲಿ ಬಿಗಿ ಭದ್ರತೆಗೆ ಕ್ರಮ ವಹಿಸಲಾಗಿದೆ. ವಿಶೇಷವಾಗಿ ಗರುಡ ಪಡೆ, ಕೆಎಸ್‌ಆರ್‌ಪಿ, ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್‌) ಸೇರಿದಂತೆ 15 ಸಾವಿರ ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಉಳಿದಂತೆ 270 ಹೊಯ್ಸಳ, 1200 ಚೀತಾ ಹಾಗೂ ಇತರ ಗಸ್ತು ವಾಹನಗಳು ನಗರಾದ್ಯಂತ ಗಸ್ತು ತಿರುಗಲಿವೆ.

ಎಂಜಿ ರಸ್ತೆ ಹಾಗೂ ನಗರದ ಆಯ್ದ ಕೆಲವೆಡೆ ಡಿ.31ರಂದು ರಾತ್ರಿ 12ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ. ಅತಿ ಹೆಚ್ಚು ಜನ ಸೇರುವ ಎಂ.ಜಿ.ರಸ್ತೆ, ಬ್ರಿಗೇಡ್‌ ರೋಡ್‌, ರೆಸಿಡೆನ್ಸಿ ರಸ್ತೆ ಸುತ್ತಮುತ್ತ ಹೆಚ್ಚಿನ ಭದ್ರತೆಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಿದ್ದು, ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರ ಚಲನವಲನಗಳನ್ನು ಪೊಲೀಸ್‌ ಕಂಟ್ರೋಲ್‌ ರೂಂನಲ್ಲಿ ಅಳವಡಿಸಿರುವ ಬೃಹತ್‌ ಎಲ್‌ಇಡಿ ಪರದೆಗಳ ಮೇಲೆ ವೀಕ್ಷಿಸಲಾಗುತ್ತಿರುತ್ತದೆ.

ಪೊಲೀಸರ ಅನುಮತಿ ಕಡ್ಡಾಯ: ಹೊಸ ವರ್ಷದ ಸಂಭ್ರಮಕ್ಕೆ ಕಾರ್ಯಕ್ರಮ ಆಯೋಜನೆ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯಬೇಕು. ಹೋಟೆಲ್‌ಗ‌ಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಪಾರ್ಟಿಯಲ್ಲಿ ಭಾಗಿಯಾಗುವ ಯುವಕ-ಯುವತಿಯರಿಗೆ ಖಾಸಗಿ ಭದ್ರತೆ ಒದಗಿಸಬೇಕು. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಆಯೋಜಕರೇ ನೇರ ಹೊಣೆಯಾಗುತ್ತಾರೆ ಎಂಬ ಸೂಚನೆ ನೀಡಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

“ರೇವ್‌’ ಪಾರ್ಟಿಗಳ ಮೇಲೆ ಕಣ್ಣು!: ದೇವನಹಳ್ಳಿ, ಕೆ.ಆರ್‌.ಪುರ, ಕಾಡುಗೋಡಿ, ಮೈಸೂರು ರಸ್ತೆ ಹೊರವಲಯಗಳಲ್ಲಿ “ರೇವ್‌’ ಪಾರ್ಟಿಗಳು ನಡೆಯುವ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ), ಹದ್ದಿನ ಕಣ್ಣಿಡಲಿದೆ. ಡ್ರಗ್ಸ್‌ ಮಾರಾಟ, ಸೇವನೆ ಸುಳಿವಿನ ಮೇರೆಗೆ ಪಾರ್ಟಿಗಳ ಮೇಲೆ ನಿಗಾವಹಿಸಲು ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಲಿವೆ.

ಡ್ಯಾನ್ಸ್‌ ಬಾರ್‌ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ. ಜತೆಗೆ, ಹೊಸ ವರ್ಷಾಚರಣೆ ನೆಪ ಮಾಡಿಕೊಂಡು ಅಪರಾಧ ಕೃತ್ಯಗಳಲ್ಲಿ ತೊಡಗುವ ರೌಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ನಗರದಲ್ಲಿ ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಕುರಿತು ನಗರ ಪೊಲೀಸ್‌ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಈಗಾಗಲೇ ಅಬಕಾರಿ ಅಧಿಕಾರಿಗಳ ಜತೆ ಚರ್ಚಿಸಿದ್ದು, ಅಬಕಾರಿ ಅಧಿಕಾರಿಗಳ ವಿಶೇಷ ದಳ (ಸ್ಕ್ಯಾಡ್‌) ಡಿ.31 ಹಾಗೂ ನ.1ರಂದು ಪೊಲೀಸರ ಜತೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಲಿದೆ.

ಹೊಸ ವರ್ಷದ ಪಾರ್ಟಿಗಳಲ್ಲಿ ಅತಿಯಾದ ಗದ್ದಲ, ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ನಗರ ಪೊಲೀಸ್‌ ಆಯುಕ್ತರು, ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಜತೆ ಚರ್ಚಿಸಿದ್ದು, ಅವರ ಸಹಕಾರ ಪಡೆಯಲಾಗುವುದು. ಜತೆಗೆ, ಒಲಾ, ಉಬರ್‌, ಮೆರು ಕ್ಯಾಬ್‌ ಸಂಸ್ಥೆಗಳು, ಆಟೋ ಚಾಲಕರ ಸಂಘಗಳ ಜತೆಯೂ ಸಭೆ ನಡೆಸಿ, ಡಿ.31ರಂದು ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಸುರಕ್ಷಿತ ಸೇವೆ ನೀಡಲು ಸೂಚಿಸಲಾಗುವುದು. ಹಾಗೇ ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್‌ ಜತೆ ಚರ್ಚಿಸಲಾಗಿದೆ ಎಂದು  ತಿಳಿಸಿದ್ದಾರೆ.

ಮಾರ್ಗ ಬದಲಾವಣೆ, ಸಂಚಾರ ನಿರ್ಬಂಧ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಂಚಾರ ನಿರ್ವಹಣೆ ಹಾಗೂ ಬಂದೋಬಸ್ತ್ಗಾಗಿ ಸಂಚಾರ ವಿಭಾಗದ 2000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ, ಡ್ರಂಕ್‌ ಆ್ಯಂಡ್‌ ಡ್ರೈವ್‌, ಡ್ರಾಗ್‌ ರೇಸಿಂಗ್‌, ಫ್ರೀ ವೀಲಿಂಗ್‌, ಕರ್ಕಶ ಹಾರ್ನ್, ಟ್ರಿಪಲ್‌ ರೈಡಿಂಗ್‌ ನಡೆಸುವವರ ವಿರುದ್ಧ ವಿಶೇಷ ಕಾರ್ಯಚರಣೆ ನಡೆಯಲಿದೆ.

ಅಪಘಾತಗಳ ನಿಯಂತ್ರಣ ಹಾಗೂ ಸುರಕ್ಷತೆ ದೃಷ್ಟಿಯಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆ ಮೇಲ್ಸೇತುವೆ ಸೇರಿ ನಗರದ ಎಲ್ಲ ಮೇಲ್ಸೇತುವೆಗಳಲ್ಲಿ ಡಿ.31ರ ರಾತ್ರಿ 9 ಗಂಟೆಯಿಂದ ಜ.1ರ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಅದೇ ರೀತಿ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ಸ್ಟ್ರೀಟ್‌ ಸುತ್ತಮುತ್ತಲ ಮಾರ್ಗದಲ್ಲಿ ಡಿ.31ರಿಂದ ಜ.1ರವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಸೇರಿದಂತೆ ಹಲವು ಕ್ರಮಗಳನ್ನು ವಹಿಸಲಾಗಿದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಶಾಂತಿಯುತವಾಗಿ ನಡೆಯಬೇಕು. ಪಾರ್ಟಿ, ಹೋಟೆಲ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುತ್ತದೆ.
-ಟಿ.ಸುನೀಲ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತರು

ನಗರದಲ್ಲಿ ಸಿಸಿಬಿ ತಂಡಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಯಾವುದೇ ಅಹಿತಕರ ಘಟನೆ, ಚಟುವಟಿಕೆಗಳು ಕಂಡ ಕೂಡಲೇ ಸಾರ್ವಜನಿಕರು ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿ ಮಾಹಿತಿ ನೀಡಬಹುದು.
-ಅಲೋಕ್‌ ಕುಮಾರ್‌, ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತರು

ಹೊಸ ವರ್ಷಾಚರಣೆ ದಿನ ಸುಗಮ ಸಂಚಾರ ವ್ಯವಸ್ಥೆ ಹಾಗೂ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ 2000 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಡಿಸಿಪಿ, ಎಸಿಪಿಗಳ ಉಸ್ತುವಾರಿಯಲ್ಲಿ 44 ಸೆಕ್ಟರ್‌ಗಳನ್ನು ವಿಂಗಡಿಸಿದ್ದು, ವಿಶೇಷ ಕಾರ್ಯಾಚರಣೆ ನಡೆಸಲಾಗುವುದು. 
-ಪಿ.ಹರಿಶೇಖರನ್‌, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರು

-ಭದ್ರತೆಗೆ 15 ಸಾವಿರ ಪೊಲೀಸರು
-ಐಜಿಪಿ, ಅಪರ ಪೊಲೀಸ್‌ ಆಯುಕ್ತರು    5 
-ಡಿಐಪಿ, ಜಂಟಿ ಪೊಲೀಸ್‌ ಆಯುಕ್ತರು    1
-ಉಪ ಪೊಲೀಸ್‌ ಆಯುಕ್ತರು     15 
-ಸಹಾಯಕ ಪೊಲೀಸ್‌ ಆಯುಕ್ತರು    45
-ಪೊಲೀಸ್‌ ಇನ್ಸ್‌ಪೆಕ್ಟರ್    220
-ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್    430
-ಸಹಾಯಕ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌    800 
-ಪೊಲೀಸ್‌ ಕಾನ್ಸ್‌ಟೇಬಲ್ಸ್‌    10 ಸಾವಿರ 
-ಗೃಹರಕ್ಷಕ ದಳ    1500 
-ಸಿವಿಲ್‌ ಡಿಫೆನ್ಸ್‌    1000 
-ಗರುಡ ಪಡೆ    1 ತುಕಡಿ 
-ಕ್ಯೂಆರ್‌ಟಿ    2 ತುಕಡಿ 
-ವಾಟರ್‌ಜೆಟ್‌    2 
-ಕೆಎಸ್‌ಆರ್‌ಪಿ    50 
-ಸಿಎಆರ್‌    30 

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.