ಇಂದಿರಾ ಕ್ಯಾಂಟೀನ್‌ಗೆ ರಾಜಕೀಯ ಅಡ್ಡಿ


Team Udayavani, Aug 2, 2017, 11:24 AM IST

george.jpg

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ “ಇಂದಿರಾ ಕ್ಯಾಂಟೀನ್‌’ ಯೋಜನೆಯನ್ನು ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಉದ್ದೇಶದಿಂದ ಯೋಜನೆಗೆ ಅಡ್ಡಿಪಡಿಸಲು ಯತ್ನಿಸುತ್ತಿವೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಂಗಳವಾರ ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟದಿಂದ ಜಂಟಿಯಾಗಿ ಆಯೋಜಿಸಿದ್ದ “ಮಾಧ್ಯಮ ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಗರದ  ಬಡವರಿಗೆ ರಿಯಾಯಿತಿ ದರದಲ್ಲಿ ತಿಂಡಿ-ಊಟ ಪೂರೈಸುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆದರೆ, ಕೆಲವರು ಆರೋಪ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಕ್ಯಾಂಟೀನ್‌ ನಿರ್ಮಾಣಕ್ಕೆ ಮೀಸಲಿಟ್ಟಿರುವ 73 ಕೋಟಿಯಲ್ಲಿ 65 ಕೋಟಿ ಅವ್ಯವಹಾರ ಆಗಿದೆ ಎಂದು ಆರೋಪಿಸುತ್ತಾರೆ,’ ಎಂದು ವ್ಯಂಗ್ಯವಾಡಿದರು. 

“ನಗರದ ಯಾವುದೇ ಉದ್ಯಾನ, ಆಟದ ಮೈದಾನದಲ್ಲಿ ಕ್ಯಾಂಟೀನ್‌ ನಿರ್ಮಿಸದಂತೆ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಲವು ಸ್ಥಳಗಳಲ್ಲಿ ಕೆಳ ಹಂತದ ಅಧಿಕಾರಿಗಳು ಉದ್ಯಾನಗಳ ಜಾಗಗಳನ್ನು ಗುರುತಿಸಿರುವ ಕುರಿತು ದೂರುಗಳು ಬಂದಿವೆ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಉಳಿದಂತೆ ಯಾವುದೇ ದೇವಾಲಯದ ಜಾಗದಲ್ಲಿ ಕ್ಯಾಂಟೀನ್‌ ನಿರ್ಮಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,’ ಎಂದು ಸ್ಪಷ್ಟಪಡಿಸಿದರು. 

ಬೆಂಗಳೂರಿನ ಇತಿಹಾಸದಲ್ಲೇ ಹೆಚ್ಚಿನ ಅನುದಾನ: ಬೆಂಗಳೂರು ಅಭಿವೃದ್ಧಿಗೆ ಬಿಬಿಎಂಪಿ ಇತಿಹಾಸದಲ್ಲಿಯೇ ಅತಿಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಈಗಾಗಲೇ 2500 ರಿಂದ 3 ಸಾವಿರ ಕೋಟಿ ರೂ.ಗಳ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರೊಂದಿಗೆ ನಗರದಲ್ಲಿನ ಕೆರೆಗಳ ಸಂರಕ್ಷಣೆಗೆ ಹಾಗೂ ತ್ಯಾಜ್ಯ ವಿಲೇವಾರಿಗೆ ಸರ್ಕಾರದಿಂದ ಕೋಟ್ಯಂತರ ಅನುದಾನ ನೀಡಲಾಗಿದೆ,’ ಎಂದು ಮಾಹಿತಿ ನೀಡಿದರು. 

ಉಕ್ಕಿನ ಸೇತುವೆ ನಮ್ಮದಲ್ಲ 
ಬಸವೇಶ್ವರ ವೃತ್ತದಿಂದ – ಹೆಬ್ಟಾಳದವರೆಗೆ ನಿರ್ಮಿಸಲು ಉದ್ದೇಶಿಸಿದ್ದ ಉಕ್ಕಿನ ಸೇತುವೆ ಯೋಜನೆ ನಮ್ಮ ಯೋಜನೆಯಾಗಿರಲಿಲ್ಲ. ಹಿಂದಿನ ಸರ್ಕಾರಕ್ಕೆ ತಜ್ಞರ ಸಮಿತಿ ಯೋಜನೆ ಪ್ರಸ್ತಾಪ ಮಾಡಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದೇವು. ಆದರೆ, ಯೋಜನೆ ಜಾರಿಯಾಗುವ ಮೊದಲೇ 65 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಕೆಲವರು ಆರೋಪಿಸಿದ್ದರು. ಒಂದೊಮ್ಮೆ ನಾವು ಲಂಚ ಪಡೆದಿದ್ದರೆ ಅಷ್ಟು ಧೈರ್ಯವಾಗಿ ಯೋಜನೆ ಕೈಬಿಡಲು ಆಗುತ್ತಿತ್ತೇ? ಎಂದು ಪ್ರಶ್ನಿಸಿದರು. 

ಆಧಾರವಿಲ್ಲದೆ ಟೀಕಿಸಬೇಡಿ; ಮಾಧ್ಯಮಗಳಿಗೆ ಜಾರ್ಜ್‌ ಮನವಿ 
ಕೆಲವರು ಆಧಾರ ರಹಿತವಾದ ಆರೋಪ ಮಾಡಿ “ಹಿಟ್‌ ಅಂಡ್‌ ರನ್‌’ ಮಾಡುತ್ತಾರೆ. ಮಾಧ್ಯಮವರು ಇಂತಹ ಆರೋಪಗಳನ್ನೇ ಮುಂದಿಟ್ಟುಕೊಂಡು ಟೀಕಿಸುತ್ತಾರೆ. ರಾಜಕಾರಣದ ಅವಧಿ ಕಡಿಮೆ ಇರುವುದರಿಂದ ನಾವು ನಿರ್ದೋಷಿಗಳೆಂದು ಸಾಬೀತು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ತಪ್ಪು ಮಾಡಿದಾಗ, ಆಧಾರವಿದ್ದರೆ ಅಥವಾ ಕನಿಷ್ಠ ಪಕ್ಷ ಮೇಲ್ನೋಟಕ್ಕೆ ಆರೋಪಗಳು ನಿಜ ಎಂದು ಅನಿಸಿದರೆ ಟೀಕಿಸಿ. ಆದರೆ, ಆಧಾರ ರಹಿತ ಆರೋಪಗಳನ್ನು ಮುಂದಿಟ್ಟುಕೊಂಡು ಟೀಕಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದರು. 

ಮನೆ ಬೇಕೆಂದು ಯಾರೂ ಅರ್ಜಿ ಹಾಕಿಲ್ಲ!
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಇದರೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಆದರೆ, ಈವರೆಗೆ ಯಾರೂ ಮನೆ ನೀಡುವಂತೆ ಅರ್ಜಿಯನ್ನು ನೀಡಿಲ್ಲ ಎಂದ ಜಾರ್ಜ್‌, ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಆನೇಕಲ್‌ಗೆ ಹರಿಸಲು 1800 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಸಚಿವ ಸಂಪುಟ ಸಭೆ ಒಪ್ಪಿಗೆ ದೊರೆಯಬೇಕಿದೆ ಎಂದರು. 

ಸೋಷಿಯಲ್‌ ಮೀಡಿಯಾ ಮೊರೆ
ಬೆಂಗಳೂರು ಅಭಿವೃದ್ಧಿ ವ್ಯಾಪ್ತಿಗೆ ಬರುವ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬಿಎಂಆರ್‌ಸಿಎಲ್‌ ಹಾಗೂ ಬಿಎಂಆರ್‌ಡಿಎಗಳಿಂದ ಕೈಗೆತ್ತಿಕೊಳ್ಳುವ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತ್ಯೇಕ ಸೋಷಿಯಲ್‌ ಮೀಡಿಯಾ ನೆಟ್‌ವರ್ಕ್‌ ಮಾಡಲಾಗುತ್ತಿದೆ ಎಂದು ಜಾರ್ಜ್‌ ತಿಳಿಸಿದರು. ವಿವಿಧ ಇಲಾಖೆಗಳಿಂದ ಕೈಗೆತ್ತಿಕೊಂಡ ಕಾರ್ಯಕ್ರಮಗಳು ಹಾಗೂ ಪ್ರಗತಿ ವಿವರಗಳ ಪ್ರಗತಿ ಲಭ್ಯವಾಗಲಿದ್ದು, ವಾರದೊಳಗೆ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು. 

ಬೆಳ್ಳಂದೂರು ಕೆರೆ ಅಭಿವೃದ್ಧಿ ವಿಚಾರದಲ್ಲಿ ಆಗಿದ್ದೇನೆ? ಜಾರ್ಜ್‌ ಹೇಳಿದ್ದು 
ನಗರದ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ನಮ್ಮ ಬೆಂಗಳೂರು ಫೌಂಡೇಷನ್‌ನ ಪಬ್ಬಿಶೆಟ್ಟಿ, ಪರಿಸರವಾದಿ ಯಲ್ಲಪ್ಪರೆಡ್ಡಿ ಸೇರಿದಂತೆ ಹಲವಾರು ತಜ್ಞರು ಇದ್ದರು. ಕೆರೆಗಳ ಸಂರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿ ವರದಿ ನೀಡಿತ್ತು. ಅದರ ಆಧಾರದ ಮೇಲೆ ಟೆಂಡರ್‌ ಕರೆಯಲಾಗಿತ್ತು.

ಇದರೊಂದಿಗೆ ವರದಿ ಜಾರಿಗೆ ಅನುಷ್ಠಾನ ಸಮಿತಿಯನ್ನು ರಚಿಸಲಾಯಿತು. ಈ ವೇಳೆ ಸಮಿತಿ ಮರು ಟೆಂಡರ್‌ ಕರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಮರು ಟೆಂಡರ್‌ ಕರೆಯಲಾಯಿತು. ಇಷ್ಟೆಲ್ಲ ಮಾಡಿದ ನಂತರ ಸಮಿತಿಯಲ್ಲಿದ್ದ ಒಂದು ಎನ್‌ಜಿಓ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಕ್ಕೆ ಹೋಗಿದೆ. ಇವರು ನಿಜವಾಗಿಯೂ ಬೆಂಗಳೂರು ಪರವಾಗಿದ್ದಾರೆಯೇ ಎಂಬುದನ್ನು ಯೋಚಿಸಬೇಕಿದೆ ಎಂದು ತಿಳಿಸಿದರು.

ಎಲ್ಲ ಕೆರೆಗಳನ್ನು ಡಿನೋಟಿಫೈ ಮಾಡುವಂತಹ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ. ಯಾವ ಕೆರೆ ಸಂಪೂರ್ಣವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದೆಯೋ, ಈಗಾಗಲೇ ಕೆಲವೊಂದು ಅಭಿವೃದ್ದಿ ಕೆಲಸಗಳು ನಡೆದಿರುವ ಕೆರೆಗಳನ್ನು ಮಾತ್ರ ಡಿನೋಟಿಫೈ ಮಾಡುವ ಕುರಿತ ಚರ್ಚೆ ನಡೆಯುತ್ತಿದ್ದು, ಯಾವುದೇ ತೀರ್ಮಾನ ಆಗಿಲ್ಲ. 
-ಕೆ.ಜೆ.ಜಾರ್ಜ್‌, ಸಚಿವ 

ಟಾಪ್ ನ್ಯೂಸ್

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ

7

Bengaluru: ಬಸ್‌ ಕಂಡಕ್ಟರ್‌, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್‌ ದುರ್ಮರಣ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

1

Hyderabad: ಈರುಳ್ಳಿ ಬಾಂಬ್‌ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ

2-udupi

Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.