ರಾಜಕಾರಣ ಹರಿಯುವ ನೀರು
Team Udayavani, Oct 8, 2018, 12:21 PM IST
ಬೆಂಗಳೂರು: ರಾಜಕಾರಣ ಸದಾ ಹರಿಯುವ ನೀರು. ಮೇಲಿದ್ದವರು ಕೆಳಗೆ ಬರಬೇಕು. ಕೆಳಗಿದ್ದವರು ಮೇಲೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಮಿಕವಾಗಿ ನುಡಿದಿದ್ದಾರೆ.
ಓಕಳೀಪುರಂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ನಗರದ ವಾಟಾಳ್ ನಾಗರಾಜ್ ರಸ್ತೆಯ ಮಹೇಶ್ವರಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುರ್ಚಿಯಲ್ಲಿ ಕೂರಿಸುವವರು, ಕೆಳಗಿಸುವವರು ಜನಗಳೇ.
ಒಂದು ಕಾಲದಲ್ಲಿ ನಾನು, ದಿನೇಶ್ ಗುಂಡೂರಾವ್ ಅವರನ್ನು ಸೋಲಿಸಲು ಕ್ಷೇತ್ರಕ್ಕೆ ಬಂದಿದ್ದೆ. ಮತ್ತೂಮ್ಮೆ ಅವರನ್ನು ಗೆಲ್ಲಿಸಲೆಂದು ಬಂದಿದ್ದೆ. ಇದೀಗ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಾನು ದಿನೇಶ್ ಗುಂಡೂರಾವ್ ಅವರನ್ನು ಸಚಿವರನ್ನಾಗಿ ಮಾಡಿದ್ದೆ.
ನಂತರ ಸಚಿವ ಸ್ಥಾನ ಸಾಕು ಪಕ್ಷದ ಕೆಲಸ ಮಾಡಿ ಎಂದು ಹೇಳಿದೆ. ಅದನ್ನು ಅವರು ಖುಷಿಯಿಂದಲೇ ಒಪ್ಪಿಕೊಂಡು ನಿರ್ವಹಿಸಿದರು. ಅವರು ಕೆಪಿಸಿಸಿ ಅಧ್ಯಕ್ಷರಾದ ನಂತರ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ನಂಬರ್ ಒನ್ ಪಕ್ಷವಾಗಿ ಹೊರಹೊಮ್ಮಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಾರಕೂರು ಮಹಾಸಂಸ್ಥಾನದ ಸಂತೋಷ್ ಸ್ವಾಮೀಜಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮ ದ್ವೇಷಿ ಅಲ್ಲ, ದೇವರ ದ್ವೇಷಿಯೂ ಅಲ್ಲ. ಜನರೊಂದಿಗಿದ್ದೇ ಸರ್ವರಿಗೂ ಸಮಾನತೆ ನೀಡಿದರು. ಇಷ್ಟಾದರೂ ಅವರನ್ನು ಬೇರೆ ರೀತಿಯಲ್ಲೇ ಬಿಂಬಿಸಲಾಯಿತು. ಡಂಬಾಚಾರಿಗಳನ್ನು ಎಂದೂ ಪೋಷಿಸಿದವರಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರಾವ್ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಕೆಲಸ ಕಾರ್ಯಗಳನ್ನು ರಾಜ್ಯದ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದರು. ಯಾವುದೇ ಗಲಾಟೆ, ಗೌಜು, ಗದ್ದಲವಿಲ್ಲದಂತೆ ಐದು ವರ್ಷ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿದರು ಎಂದು ಹೇಳಿದರು.
ಸಿದ್ದರಾಮಯ್ಯ ಅವರು ನೇರವಾಗಿ ಮಾತನಾಡುತ್ತಾರೆ. ಕೆಲವೊಮ್ಮೆ ಅದು ಕಂಟಕವಾಗುತ್ತದೆ. ಸಿದ್ದರಾಮಯ್ಯ ಸುಖಾಸುಮ್ಮನೆ ಉನ್ನತ ಮಟ್ಟಕ್ಕೆ ಬಂದವರಲ್ಲ. ಸಾಕಷ್ಟು ಹೋರಾಟ, ಎದೆಗಾರಿಕೆ, ಛಲ, ಧೈರ್ಯದಿಂದ ಮೇಲೆ ಬಂದವರು. ನನಗೂ ಪ್ರೋತ್ಸಾಹ ನೀಡಿ ಬೆಳೆಸಿದರು ಎಂದು ಸ್ಮರಿಸಿದರು.
ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ರಾಜ್ಯದಲ್ಲಿ ಯಾರಾದರೂ ಜನಪರ ಸರ್ಕಾರ ನೀಡಿದ್ದರೆ ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಹಾತ್ಮ ಗಾಂಧೀಜಿಯವರು ತಂದುಕೊಟ್ಟ ಸ್ವಾತಂತ್ರ್ಯ ಎಲ್ಲರಿಗೂ ತಲುಪುವಂತೆ ಮಾಡಿದವರು ಅವರೇ. ಕೆಲವರು ಸುಳ್ಳು ಹೇಳುತ್ತಾ, ಸುಳ್ಳು ಭರವಸೆ ನೀಡುತ್ತಾ ಬರುತ್ತಿದ್ದು, ಎಚ್ಚರ ವಹಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಬೆಳ್ಳಿ ಗದೆ ನೀಡಿ ಅಭಿನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.