![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 2, 2021, 6:28 PM IST
ಬೆಂಗಳೂರು: 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲ ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ರಾಜ್ಯದ 62 ಸರಕಾರಿ, 34 ಅನುದಾನಿತ ಪಾಲಿಟೆಕ್ನಿಕ್ʼಗಳಲ್ಲಿ ಪ್ರವೇಶಾವಕಾಶವನ್ನು ಸೆ. 20ರ ಸಂಜೆ ಕಚೇರಿ ಅವಧಿವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶ ಪಡೆದುಕೊಂಡು ದಾಖಲಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ಪ್ರವೇಶಾವಧಿಯನ್ನಿ ವಿಸ್ತರಣೆ ಮಾಡುವಂತೆ ಎಲ್ಲ ಪಾಲಿಟೆಕ್ನಿಕ್ʼಗಳ ಪ್ರಾಂಶುಪಾಲರು ಕೋರಿಕೆ ಸಲ್ಲಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.