ಪಿಓಪಿ ಗಣೇಶ ಮಾರಾಟ, ವಿಸರ್ಜನೆಗೆ ಅವಕಾಶ ಇಲ್ಲ’
Team Udayavani, Sep 7, 2018, 6:45 AM IST
ಬೆಂಗಳೂರು: ರಾಜ್ಯದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಪಿಓಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ಕೆರೆಗಳಲ್ಲಿ ಅವುಗಳ ವಿಸರ್ಜನೆ ನಿಷೇಧಿಸಲಾಗಿದೆ. ಪಿಓಪಿ ಗಣೇಶ ಮೂರ್ತಿಗಳು ಹೊರ ರಾಜ್ಯಗಳಿಂದ ಬರುತ್ತಿರುವ ಬಗ್ಗೆಯೂ ದೂರುಗಳು ಬಂದಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಆರ್.ಶಂಕರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಪಿಓಪಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಕೆರೆಗಳಲ್ಲಿ ತಡೆಯುವಂತೆ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಪರಿಸರ ಗಣೇಶೋತ್ಸವಕ್ಕೆ ಒತ್ತು ಕೊಡುವ ದೃಷ್ಟಿಯಿಂದ ಎರಡು ವರ್ಷಗಳ ಹಿಂದೆಯೇ ಪಿಓಪಿ ಗಣೇಶ ಮಾರಾಟ ನಿಷೇಧಿಸಿ ಕೆರೆಗಳಲ್ಲಿ ವಿಸರ್ಜನೆ ಮಾಡದಂತೆ ಸೂಚಿಸಲಾಗಿದ್ದು, ವರ್ಷದಿಂದ ವರ್ಷಕ್ಕೆ ಇದು ಕ್ರಮೇಣ ಕಡಿಮೆಯಾಗುತ್ತಿದೆ. ಐದು ಅಡಿಗಿಂತ ಎತ್ತರದ ಗಣೇಶ ಮೂರ್ತಿ ಸಿದಟಛಿಪಡಿಸುವುದಕ್ಕೂ ನಿರ್ಬಂಧ ಹೇರಲಾಗಿದೆ.
ಇದು ಎಲ್ಲ ರೀತಿಯ ಗಣೇಶ ಮೂರ್ತಿಗಳಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಲು ಸಂಘ-ಸಂಸ್ಥೆಗಳು,ಸಾರ್ವಜನಿಕರು, ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳು ಹೆಚ್ಚು ಜಾಗೃತಿ ಮೂಡಿಸಬೇಕು. ಪರಿಸರ ಸ್ನೇಹಿ ಗಣಪಗಳ ವಿತರಣೆಗೆ ಕೆಲವು ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ ಎಂದು ಹೇಳಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಎರಡು ವರ್ಷಗಳ ಹಿಂದೆಯೇ ನಾವು ಪಿಓಪಿ ಗಣೇಶ
ಮೂರ್ತಿಗಳ ನಿಷೇಧ ಮಾಡಿದ್ದೇವು. ಆಗ ಪಿಓಪಿ ಗಣೇಶ ಮೂರ್ತಿ ತಯಾರಕರು ಬಂದು ಎರಡು ವರ್ಷ ಕಾಲಾವಕಾಶ ನೀಡುವಂತೆ ಕೋರಿದ್ದರು. ಮೊದಲ ವರ್ಷ ಶೇ.60ರಷ್ಟು ಕಡಿಮೆಯಾಗಿತ್ತು, ಎರಡನೇ ವರ್ಷ ಶೇ.70ರಷ್ಟು ಕಡಿಮೆಯಾಗಿತ್ತು. ಈ ವರ್ಷ ಶೇ.90ರಷ್ಟು ಕಡಿಮೆಯಾಗುವ ವಿಶ್ವಾಸವಿದೆ. ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ವಿಸರ್ಜನೆ ಎಲ್ಲವೂ ನಿಷೇಧ.ಇದನ್ನು ಮೀರಿ ಹೊಸದಾಗಿ ತಯಾರಿಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಭಾವನಾತ್ಮಕ ವಿಚಾರವಾಗಿದೆ. ಹೀಗಾಗಿ, ಈ ಬಗ್ಗೆ ಒಮ್ಮೆಲೆ ಕ್ರಮ ಕೈಗೊಳ್ಳುವುದು ಕಷ್ಟ. ಆದರೂ, ಪರಿಸರ ಸಂರಕ್ಷಣೆ ದೃಷ್ಟಿಯಿಂದ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.