ಪರಿಷತ್ ಸದಸ್ಯರಿಗೂ ಸ್ಥಾನ ನೀಡಿ
Team Udayavani, Oct 6, 2018, 12:28 PM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಷತ್ ಸದಸ್ಯರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಇರುವ ರಾಜ್ಯಗಳಲ್ಲಿ ಮೇಲ್ಮನೆ ಸದಸ್ಯರಿಗೆ ಸಚಿವ ಸ್ಥಾನ ನೀಡಿ ಗೌರವ ಕೊಡಲಾಗಿದೆ. ಅದೇ ರೀತಿ ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಹಿರಿಯ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು. ಕೇವಲ ಮೇಜು ಕುಟ್ಟಿ ಗಲಾಟೆ ಮಾಡುವವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡಿದರೆ, ವರಿಷ್ಠರ ನಂಬಿಕೆಯಂತೆ ಕೆಲಸ ಮಾಡುತ್ತೇವೆ. ನಾನೂ ಸಚಿವಾಕಾಂಕ್ಷಿಯಾಗಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ನಿಂದ ಕುರುಬ ಸಮುದಾಯಕ್ಕೆ ಆದ್ಯತೆ ನೀಡಿಲ್ಲ. ಇಬ್ಬರು ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಎಂ.ಟಿ.ಬಿ. ನಾಗರಾಜ್, ಸಿ.ಎಸ್. ಶಿವಳ್ಳಿ ಅವರೂ ಸಚಿವಾಕಾಂಕ್ಷಿಗಳಾಗಿದ್ದಾರೆ. ಯಾರಿಗಾದರೂ ಇಬ್ಬರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ಸಿ ಓಟರ್ ಲೋಕಸಭೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿರುವುದು ನಿಜವಾಗುವುದಿಲ್ಲ. ಬಿಜೆಪಿ ಐದು ವರ್ಷದಲ್ಲಿ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.