ಬಿಬಿಎಂಪಿ ಚುನಾವಣೆ ಮುಂದೂಡಿಕೆ?

Team Udayavani, Mar 25, 2020, 11:59 AM IST

ಬಿಬಿಎಂಪಿ ಚುನಾವಣೆ ಮುಂದೂಡಿಕೆ?

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮಹಾನಗರಕ್ಕೆ ಪ್ರತ್ಯೇಕ ಕಾನೂನು ಜಾರಿಗೊಳಿಸಲು ಮುಂದಾಗಿದ್ದು, ಈ ಕುರಿತು ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡಿಸಲಾಗಿದೆ. ಈ ವಿಧೇಯಕವನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇದರ ಹಿಂದೆ ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕರ್ನಾಟಕ ಮುನ್ಸಿಪಲ್‌ ಆಕ್ಟ್ 1976 ಅಡಿಯಲ್ಲಿ ರಾಜ್ಯದ ಎಲ್ಲ ನಗರ ಪಾಲಿಕೆಗಳ ಕಾಯ್ದೆಯ ಅಡಿಯಲ್ಲಿಯೇ ಬಿಬಿಎಂಪಿ ಕಾಯ್ದೆಯೂ ಬರುತ್ತದೆ. ಆದರೆ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಮಾನ್ಯತೆಯನ್ನು ಪಡೆದುಕೊಂಡಿದ್ದು ಈ ನಗರಕ್ಕೆ ಪ್ರತ್ಯೇಕ ಕಾನೂನು ಜಾರಿಗೊಳಿಸಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಚರ್ಚೆಯಲ್ಲಿದೆ. ಅದೇ ಕಾರಣಕ್ಕೆ ರಾಜ್ಯ ಸರ್ಕಾರ ಬೆಂಗಳೂರಿಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಲು ವಿಧೇಯಕ ಮಂಡಿಸಿದೆ. ಹೊಸ ವಿಧೇಯಕದಲ್ಲಿ ಸುಮಾರು, 29 ಅಂಶಗಳನ್ನು ಸೇರಿಸಲಾಗಿದ್ದು, ಮುಂಬೈ ಮಾದರಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಬರಲಾಗುತ್ತಿದೆ. ಅಲ್ಲದೇ ಮೇಯರ್‌ ಅವಧಿ ಐದು ವರ್ಷಕ್ಕೆ ವಿಸ್ತರಿಸುವುದು, ವಾರ್ಡ್‌ ಕಮಿಟಿಗಳಿಗೆ ಹೆಚ್ಚಿನ ಅಧಿಕಾರ ನೀಡುವುದು, ನಗರ ವ್ಯಾಪ್ತಿಗೊಳಪಟ್ಟ ಬೆಂಗಳೂರಿನ ಹೊರ ವಲಯವನ್ನು ಮಹಾನಗರ ವ್ಯಾಪ್ತಿಗೆ ಒಳಪಡಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಜಂಟಿ ಸದನಕ್ಕೆ ಜಂಟಿ ಒಪ್ಪಂದ?: ರಾಜ್ಯ ವಿಧಾನ ಮಂಡಲದ ಅಧಿವೇಶನದ ಕೊನೆಯ ದಿನ ಬಿಬಿಎಂಪಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಬದಲಾಗಿ ಕಂದಾಯ ಸಚಿವ ಆರ್‌ ಅಶೋಕ್‌ ಮಂಡಿಸಿದರು. ಈ ವಿಧೇಯಕ ಮಂಡನೆಯ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ ಸದಸ್ಯರು ಕಲಾಪದಲ್ಲಿ ಹಾಜರಿರಲಿಲ್ಲ. ಬಿಜೆಪಿಯ ಅರವಿಂದ ಲಿಂಬಾವಳಿ ಸೇರಿದಂತೆ ಕೆಲವು ಶಾಸಕರು ವಿಧೇಯಕದಲ್ಲಿ ಬಗ್ಗೆ ವಿಸ್ತೃತ ಚರ್ಚೆ ಅಗತ್ಯವಿದೆ. ತಕ್ಷಣ ಅನುಮೋದನೆ ನೀಡುವುದು ಬೇಡ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅವರ ಮಾತಿಗೆ ಬಿಜೆಪಿಯ ಹಿರಿಯ ಶಾಕಸರು, ನಗರದ ಸಚಿವರೂ ಧ್ವನಿಗೂಡಿಸಿ, ಈ ವಿಧೇಯಕದ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಜಂಟಿ ಸದನ ಸಮಿತಿ ರಚಿಸುವಂತೆ ಒತ್ತಾಯಿಸಿದರು. ಸ್ವಪಕ್ಷೀಯ ಶಾಸಕರ ಆಕ್ಷೇಪಕ್ಕೆ ಸ್ಪಷ್ಟಣೆ ನೀಡುವ ಗೋಜಿಗೆ ಹೋಗದ ಕಂದಾಯ ಸಚಿವ ಆರ್‌. ಅಶೋಕ್‌ ವಿಧೇಯಕವನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಲು ಸರ್ಕಾರ ಒಪ್ಪಿದೆ ಎಂದು ಸದಸ್ಯರ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದರು.

ಅಲ್ಲದೆ ಈ ವಿಧೆಯಕದ ಬಗ್ಗೆ ಚರ್ಚಿಸಲು ಸದನದಲ್ಲಿ ಇಲ್ಲದ ಕಾರಣ ಕಾಂಗ್ರೆಸ್‌ ಸದಸ್ಯರೂ ಸದನ ಸಮಿತಿ ರಚಿಸುವಂತೆ ಸ್ಪೀಕರ್‌ ಗೆ ಪತ್ರ ಬರೆದು ಮನವಿ ಮಾಡಿದ್ದರು. ಕಾಂಗ್ರೆಸ್‌ ಹಾಗೂ ಬಿಜೆಪಿಯ ಎರಡೂ ಪಕ್ಷಗಳ ಶಾಸಕರ ಅಘೋಷಿತ ಒಪ್ಪಂದ ಫಲದಂತೆ ಸ್ಪೀಕರ್‌ ಜಂಟಿ ಸದನ ಸಮಿತಿ ರಚಿಸುವುದಾಗಿ ಘೋಷಿಸಿದರು.

ಮುಂದೂಡಿಕೆ ತಂತ್ರ?: ಮುಂಬರುವ ಸಪ್ಟೆಂಬರ್‌ ನಲ್ಲಿ ಬಿಬಿಎಂಪಿ ಅವಧಿ ಮುಕ್ತಾಯವಾಗಲಿದ್ದು ಅಕ್ಟೋಬರ್‌ ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ. ಆದರೆ, ರಾಜ್ಯ ಸರ್ಕಾರ ಈಗ ಬೆಂಗಳೂರಿಗೆ ಸಂಬಂಧಿಸಿದಂತೆ ಹೊಸ ಕಾಯ್ದೆ ರಚಿಸಲು ವಿಧೇಯಕ ಮಂಡಿಸಿದ್ದು ಆ ವಿಧೇಯಕವನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಿರುವುದರಿಂದ ಆ ಸಮಿತಿ ಈ ಕುರಿತು ಸಂಬಂಧ ಪಟ್ಟ ಸಂಘ ಸಂಸ್ಥೆಗಳು,ಸಾರ್ವಜನಿಕರ ಅಭಿಪ್ರಾಯ ಪಡೆದು ವಿಧಾನಸಭೆಗೆ ವರದಿ ಕೊಡಬೇಕು. ಆ ವರದಿ ಸಲ್ಲಿಸಲು ಕನಿಷ್ಠ ಒಂದು ವರ್‌ ಷ ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.

ಅಲ್ಲದೇ ವಿಧಾನಸಭೆಯಲ್ಲಿ ಸದನ ಸಮಿತಿ ರಚನೆಯಾಗುವುದರಿಂದ ಈ ವಿಷಯದಲ್ಲಿ ಕೋರ್ಟ್‌ ಕೂಡ ಮಧ್ಯಸ್ಥಿಕೆಯ ವಹಿಸಲು ಅವಕಾಶ ಇರುವುದಿಲ್ಲ ಎನ್ನುವ ಕಾರಣಕ್ಕಾಗಿ ಸರ್ಕಾರ ಉದ್ದೇಶಪೂರ್ವಕವಾಗಿಯೇ ಸದನ ಸಮಿತಿ ರಚನೆಗೆ ಸಹಮತ ವ್ಯಕ್ತಪಡಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪ್ರತ್ಯೇಕ ಕಾಯ್ದೆಗೆ ಕಾಂಗ್ರೆಸ್‌ ಸಹಮತ?: ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ಜಾರಿಗೆ ತರುವ ವಿಷಯದಲ್ಲಿ ಕಾಂಗ್ರೆಸ್‌ ಸದಸ್ಯರೂ ಕೂಡ ಸರ್ಕಾರದ ನಿರ್ಧಾರಕ್ಕೆ ಪೂರಕವಾಗಿದ್ದಾರೆ ಎಂದು ತಿಳಿದು ಬಂದಿದೆ ಆದರೆ, ಬಿಬಿಎಂಪಿಗೆ ಅಧಿಕಾರ ಹಂಚಿಕೆಯಲ್ಲಿ ಶಾಸಕರ ಅಧಿಕಾರದ.ಬಗ್ಗೆ ಸ್ಪಷ್ಟತೆ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಷಿ ಬಿ.ಎಸ್‌. ಪಾಟೀಲ್‌ ವರದಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಲು ಆಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿಗೆ ಹೊಸ ಕಾಯ್ದೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಈ ಬಗ್ಗೆ ವಿಧೆಯಕ ಮಂಡಿಸಲಾಗಿದ್ದು, ಅದು ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿದೆ. ಸಮಿತಿ ವರದಿ ಬರುವವರೆಗೂ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ವರದಿ ಬಂದ ಕೂಡಲೆ ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ.– ಆರ್‌. ಅಶೋಕ್‌, ಕಂದಾಯ ಸಚಿವ

ರಾಜ್ಯ ಸರ್ಕಾರ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ತರಲು ಮುಂದಾಗಿದೆ. ಅದನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಿದ್ದಾರೆ. ಸಮತಿ ಆದಷ್ಟು ಬೇಗ ವರದಿ ನೀಡಿ, ನಿಗದಿತ ಅವಧಿಯಲ್ಲಿ ಚುನಾವಣೆ ನಡೆಯುವಂತಾಗಬೇಕು.  ರಾಮಲಿಂಗಾ ರೆಡ್ಡಿ, ಮಾಜಿ ಗೃಹ ಸಚಿವ

– ಶಂಕರ ಪಾಗೋಜಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.