ಜಾರ್ಜ್ ವಿರುದ್ಧದ ಹೋರಾಟ ಮುಂದೂಡಿಕೆ
Team Udayavani, Sep 27, 2017, 11:41 AM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆ ಆರಂಭವಾದ ಬಳಿಕ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಆರಂಭಿಸುವ ಉದ್ದೇಶದಿಂದ ಮಂಗಳವಾರದಿಂದ ಆರಂಭವಾಗಬೇಕಿದ್ದ ಅಹೋರಾತ್ರಿ ಧರಣಿ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದರಿಂದ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಸೆ. 16ರಂದು ಬಿಜೆಪಿ ಹಮ್ಮಿಕೊಂಡಿದ್ದ ಧರಣಿ ವೇಳೆ, ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದಲ್ಲಿ ಸೆ. 26ರಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಯಡಿಯೂರಪ್ಪ ಘೋಷಿಸಿದ್ದರು.
ಆದರೆ, ಘೋಷಣೆಯಂತೆ ಮಂಗಳವಾರ ಹೋರಾಟ ಆರಂಭವಾಗಿಲ್ಲ. ಅಲ್ಲದೆ, ಹೋರಾಟ ರದ್ದಾಗಿದೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಗಣಪತಿ ಆತ್ಮಹತ್ಯೆ ಕುರಿತಂತೆ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ಇದುವರೆಗೆ ಸಿಬಿಐ ತನಿಖೆ ಆರಂಭಿಸಿಲ್ಲ.
ಹೀಗಾಗಿ ಸಿಬಿಐ ತನಿಖೆ ಆರಂಭಿಸಿದ ಬಳಿಕ ಹೋರಾಟದ ರೂಪರೇಷೆ ನಿರ್ಧರಿಸಲು ದೆಹಲಿಯಲ್ಲಿ ಭಾನುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಕಾರಣಕ್ಕಾಗಿ ಮಂಗಳವಾರದಿಂದ ಆರಂಭಿಸಬೇಕಾಗಿದ್ದ ಅಹೋರಾತ್ರಿ ಧರಣಿ ಮುಂದೂಡಲಾಗಿದೆ. ಸಿಬಿಐ ತನಿಖೆ ಆರಂಭವಾದ ಬಳಿಕ ಮತ್ತೆ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.