ಬಿಎಸ್‌ವೈ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Team Udayavani, Sep 19, 2017, 11:47 AM IST
ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಎಸಿಬಿ ತನಿಖೆ ನಡೆಸುತ್ತಿರುವುದು ಕಾನೂನುಬಾಹಿರ ಕ್ರಮವಾಗಿದೆ ಎಂದು ಹಿರಿಯ ವಕೀಲ ಸಿ.ವಿ ನಾಗೇಶ್ ಹೈಕೋರ್ಟ್‌ಗೆ ಸೋಮವಾರ ತಿಳಿಸಿದರು.
ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿವಿಚಾರಣೆಯ ವೇಳೆ ಅವರ ಪರ ವಾದಮಂಡಿಸಿದ ವಕೀಲ ಸಿ..ವಿ ನಾಗೇಶ್, ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಮೊದಲು ಎಸಿಬಿ ನಿಯಮಾವಳಿಗಳನ್ನು ಪಾಲಿಸಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಕಾನೂನು ಉಲ್ಲಂಘಿಸಿದ್ದಾರೆ.
ಅಲ್ಲದೆ ಡಿನೋಟಿಫಿಕೇಶನ್ ಮಾಡಿರುವ ಸಂಬಂಧ ಸೂಕ್ತ ದಾಖಲೆಗಳೂ ಲಭ್ಯವಾಗಿಲ್ಲ ಹೀಗಾಗಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಸೆ.20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.