ಹಳೆಯದಕ್ಕೆ ಬೇಕು ಆದ್ಯತೆ
Team Udayavani, Feb 27, 2018, 12:12 PM IST
ಬೆಂಗಳೂರು: ಹೊಸ ಯೋಜನೆಗಳ ಬದಲಿಗೆ, ಈಗಾಗಲೇ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ, ಕುಡಿಯುವ ನೀರು ಹಾಗೂ ಘನತ್ಯಾಜ್ಯ ವಿಲೇವಾರಿಯಂತಹ ಸಮಸ್ಯೆಗಳ ಪರಿಹಾರಕ್ಕೆ ಒತ್ತು, 110 ಹಳ್ಳಿಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ, ನಗರದ ಪರಿಸರ ಹಾಗೂ ಕೆರೆಗಳ ಸಂರಕ್ಷಣೆಗೆ ಮಹತ್ವ ನೀಡಬೇಕು ಎಂಬುದು ಪಾಲಿಕೆಗೆ, ನಗರ ತಜ್ಞರು ಹಾಗೂ ವಿವಿಧ ನಾಗರಿಕ ಸಂಸ್ಥೆಗಳ ಮುಖಂಡರ ಸಲಹೆ.
ಪ್ರತಿ ವರ್ಷ ಪಾಲಿಕೆಯಿಂದ ಸಾವಿರಾರು ಕೋಟಿಗಳ ಬಜೆಟ್ ಮಂಡನೆಯಾಗುತ್ತದೆ. ಆದರೆ, ಅನುಷ್ಠಾನ ಪ್ರಮಾಣ ಮಾತ್ರ ಸುಧಾರಿಸಿಲ್ಲ. ಈ ಹಿನ್ನೆಲೆಯಲ್ಲಿ ಪಾಲಿಕೆಯ ಬಜೆಟ್‌ನಲ್ಲಿ ಹೊಸ ಹಾಗೂ ಬೃಹತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬದಲಿಗೆ, ಈಗಾಗಲೇ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಗೊಳಿಸಲು ಆದ್ಯತೆ ನೀಡಬೇಕಾಗಿದೆ.
ಭವಿಷ್ಯದಲ್ಲಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದ್ದು, ನಗರದ ಜಲಮೂಲಗಳಾದ ಕೆರೆಗಳ ಸಂರಕ್ಷಣೆಯೊಂದಿಗೆ, ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕ್ರಮವಹಿಸಬೇಕಿದೆ. ಆ ನಿಟ್ಟಿನಲ್ಲಿ ಮಳೆನೀರು ಕೊಯ್ಲು ಪದ್ಧತಿಗೆ ಮಹತ್ವ ನೀಡಿ, ಒಳಚರಂಡಿ ನೀರು ಕೆರೆಗಳಿಗೆ ಸೇರದಂತೆ ಯೋಜನೆ ರೂಪಿಸಬೇಕಿದೆ ಎಂದು ತಜ್ಞರು ತಿಳಿಸಿದ್ದಾರೆ.
ನಗರದಲ್ಲಿ ರಸ್ತೆ, ಮೇಲ್ಸೇತುವೆ, ಕೆಳಸೇತುವೆಗಳ ನಿರ್ಮಾಣದ ಜತೆಜತೆಗೆ ಸಂಚಾರ ದಟ್ಟಣೆ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಕಡೆಗೂ ಪಾಲಿಕೆ ಗಮನ ಹರಿಸಬೇಕಿದೆ. ಬಜೆಟ್ ಮಂಡಿಸಿದ ದಿನದಿಂದಲೇ ಯೋಜನೆಗಳ ಅನಷ್ಠಾನ ಹಾಗೂ ಮೇಲ್ವಿಚಾರಣೆ ನೋಡಿಕೊಳ್ಳಲು ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಸಲಹೆ ನೀಡಿದ್ದಾರೆ.
ಬಜೆಟ್‌ನಲ್ಲಿ ಪ್ರತಿ ವರ್ಷ ನೂರಾರು ಜನಪ್ರಿಯ ಯೋಜನೆಗಳು ಘೋಷಣೆಯಾಗುತ್ತಿವೆ. ಆದರೆ, ಹಣಕಾಸು ವರ್ಷ ಮುಗಿದರೂ ಅವು ಕಾರ್ಯರೂಪಕ್ಕೆ ಬರುತ್ತಿಲ್ಲ. ಹಾಗಾಗಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಿರುವಂತಹ ಯೋಜನೆಗಳಿಗೆ ಒತ್ತು ನೀಡಬೇಕಿದ್ದು, ನಗರದ ಎಲ್ಲ ವರ್ಗಗಳನ್ನು ಒಳಗೊಂಡ ಬಜೆಟ್‌ನ ಮಂಡಿಸಬೇಕಿದೆ ಎಂದು ಹೇಳಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಸರ್ಕಾರ ನೀಡಿರುವ ಅನುದಾನ ಸದ್ಬಳಕೆ ಮಾಡಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಜತೆಗೆ ಪಾಲಿಕೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಆಸ್ತಿ ತೆರಿಗೆ ಸೇರಿ ಆದಾಯ ಮೂಲಗಳ ಬಲವರ್ಧನೆಗೆ ಆದ್ಯತೆ ನೀಡಬೇಕಿದೆ.
-ರವಿಚಂದರ್, ನಗರ ತಜ್ಞ
ನಾಗರಿಕರಿಗೆ ಮೂಲ ಸೌಕರ್ಯ ಒದಗಿಸಲು ಬಿಬಿಎಂಪಿ ಅಗತ್ಯ ಕ್ರಮಕೈಗೊಳ್ಳಬೇಕು. ಉತ್ತಮ ರಸ್ತೆಗಳ ನಿರ್ಮಾಣದೊಂದಿಗೆ ಸಂಚಾರ ದಟ್ಟಣೆ ನಿಯಂಣತ್ರಣಕ್ಕೂ ಕ್ರಮವಹಿಸಬೇಕು. ನಗರದ ಹಲವೆಡೆ ಎಸ್ಕಲೇಟರ್ ಇಲ್ಲದೆ ನಿರ್ಮಿಸಿರುವ ಸ್ಕೈವಾಕ್‌ಗಳು ಅನುಪಯುಕ್ತವಾಗಿದ್ದು, ಜನರಿಗೆ ಉಪಯೋಗವಿಲ್ಲದ ಯೋಜನೆಗಳ ಕೈಬಿಡಬೇಕು.
-ಶ್ರೀಹರಿ, ಸಂಚಾರ ತಜ್ಞ
ಪ್ರತಿ ವಾರ್ಡ್‌ನಲ್ಲಿ ಮಕ್ಕಳಿಗಾಗಿ 3-4 ಡೇ ಕೇರ್ ಆರಂಭಿಸಿ ಪೌಷ್ಠಿಕಾಂಶಯುತ ಆಹಾರ ನೀಡಬೇಕಿದೆ. ನಗರವನ್ನು ಕೊಳೆಗೇರಿ ಮುಕ್ತಗೊಳಿಸಲು ಬಡವರಿಗೆ ಕೈಗೆಟಕುವ ದರದಲ್ಲಿ ಮನೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ, ಮಳೆನೀರು ಕೊಯ್ಲು ಸೇರಿ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ಇದ್ದರೆ ಒಳಿತು.
-ಕಾತ್ಯಾಯಿನಿ ಚಾಮರಾಜ್, ಸಿವಿಕ್ ಸಂಸ್ಥೆ ಮುಖ್ಯಸ್ಥೆ
ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆ ಹೊರ ಇಲ್ಲದ ಹಾಗೂ ನಗರದ ಪರಿಸರ, ಕೆರೆಗಳ ಅಭಿವೃದ್ಧಿಗೆ ಪೂರಕ ಬಜೆಟ್ ಮಂಡನೆಯಾಗಬೇಕು. ಜನರ ಅನುಕೂಲಕ್ಕಾಗಿ ಪ್ರತಿ ವಾರ್ಡ್‌ಗೆ ಒಂದು ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಬೇಕಿದ್ದು, ನಗರದಲ್ಲಿ ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಪ್ರೋತ್ಸಾಹ ಅಗತ್ಯವಿದೆ.
-ವಿ.ಎನ್.ರಾಜಶೇಖರ್, ಬೆಂಗಳೂರು ಉಳಿಸಿ ಸಮಿತಿ ಸಹ ಸಂಚಾಲಕ
* ವೆಂ.ಸುನೀಲ್‌ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.