ಸಗಟು ತ್ಯಾಜ್ಯ ಉತ್ಪಾದಕರ ಪಟ್ಟಿಗೆ ಸಿದ್ಧತೆ
Team Udayavani, Oct 24, 2019, 3:07 AM IST
ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್‌ಜಿಟಿ) ನಿರ್ದೇಶನದ ಬಳಿಕ ಎಚ್ಚತ್ತುಕೊಂಡಿರುವ ಬಿಬಿಎಂಪಿ, ತ್ಯಾಜ್ಯ ನಿರ್ವಹಣೆಯಲ್ಲಿ ಆಗುತ್ತಿರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದು, ಸಗಟು ತ್ಯಾಜ್ಯ (ಬಲ್ಕ್ ಜನರೇಟರ್) ನಿರ್ವಾಹಕರು ಹಾಗೂ ಸಗಟು ತ್ಯಾಜ್ಯ ಉತ್ಪಾದಕರನ್ನು ಗುರುತಿಸಲು ಪ್ರಾರಂಭಿಸಿದೆ. ಪಾಲಿಕೆಯು ನಾಲ್ಕು ವರ್ಷಗಳ ಹಿಂದೆ 12 ಮಂದಿ ಸಗಟು ತ್ಯಾಜ್ಯ ನಿರ್ವಹಣೆ ಮಾಡುವವರನ್ನು ಅಧಿಕೃತವಾಗಿ ಗುರುತಿಸಲಾಗಿತ್ತು.
ಆದರೆ, ಈಗ ಉಪ ಸಗಟು ನಿರ್ವಹಣೆ ಮಾಡುವವರೂ ಸೇರಿಕೊಂಡಿರುವುದು ಪತ್ತೆಯಾಗಿದೆ. ಸಗಟು ನಿರ್ವಹಣೆ ಮಾಡುವವರು ನಗರದಲ್ಲಿ 10ರಿಂದ 100 ಕೆ.ಜಿ ತ್ಯಾಜ್ಯ ಉತ್ಪಾದನೆಯಾಗುವ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿದ್ದಾರೆ. ಸಗಟು ತ್ಯಾಜ್ಯ ವಿಲೇವಾರಿ ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಅಲ್ಲದೆ, ಸಗಟು ವಿಲೇವಾರಿಗೆ ಪರವಾನಗಿ ಪಡೆದಿರುವವರು ಅಕ್ರಮವಾಗಿ ಬಿಬಿಎಂಪಿಯ ವಾಹನಗಳಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ, ಎಲ್ಲೆಂದರಲ್ಲಿ ಎಸೆಯುತ್ತಿರುವ ಬಗ್ಗೆಯೂ ಆರೋಪಗಳೂ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಸಗಟು ಉತ್ಪಾದಕರ ಪಟ್ಟಿ ಸಿದ್ಧಪಡಿಸಲು ಹಾಗೂ ನೂರು ಕೆ.ಜಿಯವರೆಗೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಬಿಬಿಎಂಪಿಯೇ ನಿರ್ವಹಣೆ ಮಾಡಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎನ್‌ಜಿಟಿ ನಿರ್ದೇಶನ ನೀಡಿದ್ದು, ಬಿಬಿಎಂಪಿಯ ಅಧಿಕಾರಿಗಳು ವಲಯವಾರು ಸಗಟು ಉತ್ಪಾದಕರ ವಿವರ ದಾಖಲಿಸಲು ಪ್ರಾರಂಭಿಸಿದ್ದಾರೆ. ಅದೇ ರೀತಿ ಸಗಟು ತ್ಯಾಜ್ಯ ವಿಲೇವಾರಿ ಮಾಡುವವರ ತ್ಯಾಜ್ಯ ಸಂಸ್ಕರಣಾ ಘಟಕಗಳು, ನಿರ್ವಹಣೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ.
ಎನ್‌ಜಿಟಿಯಿಂದ ಎಚ್ಚರಿಕೆ: ಸಗಟು ತ್ಯಾಜ್ಯ ವಿಲೇವಾರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಮತ್ತು ಬಿಬಿಎಂಪಿ ಸಿಬ್ಬಂದಿ ಸಗಟು ತ್ಯಾಜ್ಯ ಉತ್ಪಾದಕರ ತ್ಯಾಜ್ಯವನ್ನು ಸಂಗ್ರಹಿಸುವುದಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎನ್ನುವ ಆರೋಪ ಮತ್ತು ಗೊಂದಲಗಳಿಗೆ ತೆರೆ ಎಳೆಯುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್ ಬಿ. ಆದಿ ನಿರ್ದೇಶನ ನೀಡಿದ್ದಾರೆ.
ಈ ಬಗ್ಗೆ “ಉದಯವಾಣಿ’ ಜತೆ ಮಾತನಾಡಿದ ಸುಭಾಷ್ ಬಿ. ಆದಿ ಅವರು, ಸಗಟು ತ್ಯಾಜ್ಯ ಉತ್ಪಾದಕರು ಹಾಗೂ ನಿರ್ವಹಣೆ ಮಾಡುವವರ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ನೂರು ಕೆ.ಜಿಯವರೆಗೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಬಿಬಿಎಂಪಿಯೇ ನಿರ್ವಹಿಸುವಂತೆ ಮತ್ತು ನೂರು ಕೆ.ಜಿ ಮೇಲೆ ಉತ್ಪಾದನೆಯಾಗುವ ತ್ಯಾಜ್ಯವನ್ನು ಕೃಷಿಕರಿಗೆ ಅಥವಾ ಸರ್ಮಪಕವಾಗಿ ನಿರ್ವಹಣೆ ಮಾಡುವವರಿಗೆ ನೀಡುವ ಬಗ್ಗೆಯೂ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಪಾಲಿಕೆ ಅಧಿಕಾರಿಗಳು ರಾಷ್ಟ್ರೀಯ ಎನ್‌ಜಿಟಿಯ ಘನತ್ಯಾಜ್ಯ ನಿರ್ವಹಣೆ -2016ರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ನಿಯಮಾನುಸಾರವೇ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ನೂತನ ಪ್ರಸ್ತಾವನೆ ಸಲ್ಲಿಸಿದ ಬಿಬಿಎಂಪಿ: ನಗರದ ತ್ಯಾಜ್ಯ ವಿಲೇವಾರಿಗೆ ಬಳಸಲಾಗುತ್ತಿರುವ ಬೆಳ್ಳಳ್ಳಿ ಕ್ವಾರಿ ಮತ್ತು ಮಿಟಗಾನಹಳ್ಳಿ ಸೇರಿದಂತೆ ಘನತ್ಯಾಜ್ಯ ವಿಲೇವಾರಿ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಹಾಗೂ ನಗರದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ (ಮೂರು ವರ್ಷಗಳಿಗೆ) ವಿಲೇವಾರಿ ಮಾಡುವುದಕ್ಕೆ 1,179 ಕೋಟಿ ರೂ. ನೀಡುವಂತೆ ಪಾಲಿಕೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾಮಗಾರಿಗಳಿಗೆ (2018-19, 2019-20, 2020-21ನೇ ಸಾಲಿಗೆ) 583.34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿದೆ. ಇದರಲ್ಲಿ ನಗರದ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಗೆ 55.50 ಕೋಟಿ ರೂ. ಹಾಗೂ 528.85 ಕೋಟಿ ರೂ. ಘನತ್ಯಾಜ್ಯ ವಿಲೇವಾರಿ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಮೀಸಲಿರಿಸಿದೆ.
ಹೀಗಾಗಿ, ನಗರದ ತ್ಯಾಜ್ಯ ವಿಲೇವಾರಿಗೆ ಸಮಸ್ಯೆ ಉಂಟಾಗಲಿದ್ದು, ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡುವಂತೆ ಬಿಬಿಎಂಪಿಯು ಸರ್ಕಾರಕ್ಕೆ ನೂತನ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಪ್ರಸ್ತಾವನೆಯಲ್ಲಿರುವ ಯೋಜನೆಗಳಲ್ಲಿ 2 ಕೋಟಿ ರೂ.ವರೆಗಿನ ಯೋಜನೆಗಳನ್ನು ಬಿಬಿಎಂಪಿ ಆಯುಕ್ತರ ಮಟ್ಟದಲ್ಲೇ ಅನುಮೋದನೆ ಪಡೆದುಕೊಳ್ಳಲು ಅನುಮತಿ ನೀಡಬೇಕು ಎಂದು ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಯೋಜನೆ 2019-20 2020-21 2021-22 (ಕೋಟಿ ರೂ.ಗಳಲ್ಲಿ)
ಘನತ್ಯಾಜ್ಯ ನಿರ್ವಹಣೆ 277.50 462 259.50
ತ್ಯಾಜ್ಯ ಘಟಕಗಳ ಸುತ್ತಲ ಹಳ್ಳಿಗಳ ಅಭಿವೃದ್ಧಿ 30 75 75
ಒಟ್ಟು 307.50 537 334.50 1179
ಸಗಟು ತ್ಯಾಜ್ಯ ನಿರ್ವಾಹಕರು ಎಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಇದರಲ್ಲಿ ಲೋಪ ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸಗಟು ತ್ಯಾಜ್ಯ ವಿಲೇವಾರಿ ಪರವಾನಗಿ ಪಡೆದವರೇ ವಿಲೇವಾರಿ ಮಾಡುತ್ತಿದ್ದಾರೆಯೇ, ಪ್ರತ್ಯೇಕ ತ್ಯಾಜ್ಯ ಸಂಗ್ರಹಣೆ ಆಗುತ್ತಿದೆಯೇ ಎನ್ನುವ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ.
-ರಂದೀಪ್, ವಿಶೇಷ ಆಯುಕ್ತ (ಘನತ್ಯಾಜ್ಯ ನಿರ್ವಹಣೆ)
* ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಸಮಸ್ಯೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್ ಫಾಲ್ಸ್ ಸೀಲಿಂಗ್
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.