ರಾಜ್ಯದಲ್ಲೂ ಕೆಂಪು ದೀಪ ನಿಷೇಧಕ್ಕೆ ಸಿದ್ಧತೆ
Team Udayavani, May 3, 2017, 12:22 PM IST
ಬೆಂಗಳೂರು: ಅತಿಗಣ್ಯರ ವಾಹನಗಳ ಮೇಲೆ ಕೆಂಪುದೀಪ ಮತ್ತು ಸೈರನ್‌ಗಳ ಬಳಕೆಯನ್ನು ಮೇ 1ರಿಂದ ರದ್ದುಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅದರ ಅನುಷ್ಠಾನಕ್ಕೆ ರಾಜ್ಯ ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಕೆಂಪುದೀಪ ಮತ್ತು ಸೈರನ್‌ಗಳ ಬಳಕೆ ನಿಷೇಧಕ್ಕೆ ಸಂಬಂಧಿಸಿದ ಅಧಿಸೂಚನೆ ಪ್ರತಿಯೊಂದಿಗೆ ನಿಯಮ ಅನುಸರಿಸುವಂತೆ ಕೋರಿ ಸರ್ಕಾರದ ಎಲ್ಲ ಇಲಾಖೆಗಳಿಗೆ ಸಾರಿಗೆ ಇಲಾಖೆ ಮನವಿ ಮಾಡಿದೆ. ಹಾಗೊಂದು ವೇಳೆ ಮನವಿಗೆ ಸ್ಪಂದಿಸದಿದ್ದರೆ, ಕೆಂಪುದೀಪದ ವಾಹನಗಳ ವಿರುದ್ಧ ಕಾರ್ಯಾಚರಣೆಗಿಳಿಯಲಿದೆ ಎಂದು ಹೇಳಲಾಗಿದೆ.
ಈಗಾಗಲೇ ವೆಬ್‌ಸೈಟ್ ಮೂಲಕ ಅಧಿಸೂಚನೆ ಪ್ರತಿಯನ್ನು ಪಡೆದು, ಅದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಅದರ ಪ್ರಕಾರ ಮುಂದಿನ ದಿನಗಳಲ್ಲಿ ಸರ್ಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ರಾಜ್ಯಪಾಲ, ಮುಖ್ಯಮಂತ್ರಿ, ಸಭಾಪತಿ, ಸ್ಪೀಕರ್, ಎಲ್ಲ ಸಚಿವರು, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳ ವಾಹನಗಳಿಗೆ ಕೆಂಪುದೀಪ ಅಥವಾ ಸೈರನ್ ಬಳಕೆಗೆ ಅವಕಾಶ ಇದೆ. ಜತೆಗೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುತ್ತಿರುವ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ದಂಡಾಧಿಕಾರಿಗಳ ವಾಹನಗಳಿಗೆ ಆ್ಯಂಬರ್ ಲೈಟ್ (ಬೇರೆ ಬಣ್ಣದ ದೀಪ) ಅಳವಡಿಸಲಾಗಿದೆ.
ಇದೆಲ್ಲವನ್ನೂ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ರದ್ದುಪಡಿಸಲಾಗಿದ್ದು, ಅದರ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೇ 1ರಿಂದ ಅತಿಗಣ್ಯರ ವಾಹನಗಳ ಮೇಲೆ ಕೆಂಪುದೀಪ ಮತ್ತು ಸೈರನ್‌ಗಳ ಬಳಕೆ ರದ್ದುಪಡಿಸಲಾಗಿದೆ.
ಅದರಂತೆ ಈಗಾಗಲೇ ಕೆಲವರು ವಾಹನಗಳ ಮೇಲಿನ ವಿವಿಧ ಪ್ರಕಾರದ ದೀಪಗಳನ್ನು ತೆರವುಗೊಳಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದವರೂ ಅದನ್ನು ಪಾಲಿಸಲಿದ್ದಾರೆ. ಒಂದು ವೇಳೆ ಪಾಲನೆ ಆಗದಿದ್ದರೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜು ತಿಳಿಸಿದರು.
ಹೊಯ್ಸಳಕ್ಕೂ ಅನುಮತಿ ಕಡ್ಡಾಯ
ಗಸ್ತು ತಿರುಗುವ ಹೊಯ್ಸಳ ವಾಹನಗಳ ಮೇಲೆ ವಿವಿಧ ಬಣ್ಣದ ದೀಪಗಳ ಅಳವಡಿಕೆಗೆ ಅವಕಾಶ ಇದೆ. ಆದರೆ, ಅಧಿಸೂಚನೆ ಪ್ರಕಾರ ಅದಕ್ಕೂ ಸಾರಿಗೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಸಾರಿಗೆ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಆಂಬ್ಯುಲನ್ಸ್ ಮೇಲೆ ದೀಪ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಇದಕ್ಕೆ ಯಾವುದೇ ಸಮಸ್ಯೆ ಆಗದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.